ಪ್ರಧಾನಿ ಮೋದಿಯನ್ನು ತಿರಸ್ಕರಿಸಿ
Team Udayavani, Apr 15, 2019, 3:00 AM IST
ಗುಂಡ್ಲುಪೇಟೆ: ದೇಶದ ಪ್ರಧಾನಿ ಸ್ಥಾನದಲ್ಲಿರುವ ನರೇಂದ್ರ ಮೋದಿ ಸುಳ್ಳುಗಾರ, ಅಂತಹವರನ್ನು ಚುನಾವಣೆಯಲ್ಲಿ ತಿರಸ್ಕರಿಸಿ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಲೋಕಸಭಾ ಚುನಾವಣೆ ಸಭೆಯಲ್ಲಿ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಅಭ್ಯರ್ಥಿ ಆರ್. ಧ್ರುವನಾರಾಯಣ ಪರ ಮತಯಾಚಿಸಿದ ಅವರು ಮಾತನಾಡಿದರು.
ದೇಶದ ಜನರಿಗೆ ಕಳೆದ 5 ವರ್ಷಗಳಿಂದಲೂ ಭರವಸೆ ನೀಡುತ್ತಲೇ ಅಧಿಕಾರ ನಡೆಸಿಕೊಂಡು ಬಂದಿದ್ದಾರೆ. ಈವೆರೆಗೂ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಅಲ್ಲದೇ ಬಡವರ ಪರವಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಕ್ಷೇತ್ರದ ಅಭ್ಯರ್ಥಿ ಆರ್.ಧ್ರುವನಾರಾಯಣ ಪರ ಈ ಭಾಗದಲ್ಲಿ ಅಲೆ ಇದೆ. ಹಲವು ಅಭಿವೃದ್ಧಿ ಕೆಲಸಗಳನ್ನು ಅವರು ಮಾಡಿದ್ದಾರೆ. ಈ ಜಿಲ್ಲೆ ತುಂಬಾ ಹಿಂದುಳಿದಿತ್ತು. ಅದನ್ನು ಅವರು ಸಂಸದರಾದ 10 ವರ್ಷಗಳಲ್ಲಿ ಅಭಿವೃದ್ಧಿ ಪಥದತ್ತ ಮುನ್ನಡೆಸಿದ್ದಾರೆ. ಇನ್ನೂ ಹೆಚ್ಚಿನ ಯೋಜನೆಗಳನ್ನು ಅವರ ಅಧಿಕಾರವಧಿಯಲ್ಲಿ ತಂದು ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ.
ತಾಲೂಕಿಗೆ ಎಚ್.ಎಸ್.ಮಹದೇವಪ್ರಸಾದ್ ಜೊತೆಗೂಡಿ ಅವರ ಅಧಿಕಾರವಧಿಯಲ್ಲಿ ಹಲವು ಸಮುದಾಯ ಭವನಗಳು, ರಸ್ತೆ ನಿರ್ಮಾಣ ಮಾಡುವಲ್ಲಿ ಶ್ರಮಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗಾಗಿ ದುಡಿದಿದ್ದಾರೆ. ಧ್ರುವನಾರಾಯಣರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಮುಖಂಡ ಹಂಗಳ ನಂಜಪ್ಪ, ಗಣೇಶ್ ಪ್ರಸಾದ್, ನಂಜುಂಡಪ್ರಸಾದ್, ಮುನಿರಾಜು, ನಾಜಿಮುದ್ದಿನ್, ಗೋವಿಂದರಾಜು, ರಾಮು ಹಾಗೂ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.