ಸಾಲೂರು ಮಠದ ಪ್ರಗತಿಗೆ ಆದ್ಯತೆ ನೀಡಿ


Team Udayavani, Aug 9, 2020, 11:24 AM IST

ಸಾಲೂರು ಮಠದ ಪ್ರಗತಿಗೆ ಆದ್ಯತೆ ನೀಡಿ

ಹನೂರು: ಸಾಲೂರು ಮಠಕ್ಕೆ ಶತಮಾನಗಳ ಶ್ರೀಪರಂಪರೆಯಿದೆ. ಸಮಾಜ ಸೇವೆ ಮೂಲಕ ಮಠದ ಪ್ರಗತಿಗೆ ಆದ್ಯತೆ ನೀಡ ಬೇಕು ಎಂದು ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ದೇಶಿಕೇಂದ್ರ ಮಹಾಸ್ವಾಮೀಜಿ ತಿಳಿಸಿದರು.

ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಉತ್ತರಾಧಿಕಾರಿಯಾಗಿ ಆಯ್ಕೆ  ಯಾದ ವಟು ನಾಗೇಂದ್ರ ಅವರಿಗೆ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಮಾತನಾಡಿ, ಶ್ರೀಕ್ಷೇತ್ರ ಮಲೆ ಮಹ ದೇಶ್ವರ ಬೆಟ್ಟಕ್ಕೆ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಇಲ್ಲಿಗೆ ಆಗಮಿಸುವ ಭಕ್ತರಿಗೂ ಸಾಲೂರು ಬೃಹನ್ಮಠಕ್ಕೂ ಸಂಬಂಧವಿದ್ದು, ಐತಿಹಾಸಿಕ ಹಿನ್ನೆಲೆಯಿದೆ. ಅಲ್ಲದೆ, ಶ್ರೀಕ್ಷೇತ್ರದಲ್ಲಿ ನಡೆಯುವ ವಿವಿಧ ಪೂಜಾ ಕೈಂಕರ್ಯಗಳಲ್ಲಿ ಮಠದ ಸ್ವಾಮೀಜಿಗಳು ಭಾಗವಹಿಸುವುದು ಹಿರಿಮೆಯಾಗಿದೆ. ಆದ್ದರಿಂದ ಮಠದ ಸಂಪ್ರದಾಯದ ಜೊತೆಗೆ ಹೆಚ್ಚಿನ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಠದ ಕೀರ್ತಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಕಿವಿಮಾತು ಹೇಳಿದರು.

ಸಾಲೂರು ಮಠದಲ್ಲಿ ಪಟ್ಟದ ಗುರುಸ್ವಾಮಿ ಗಳಿಗೆ ಆರೋಗ್ಯ ಸಮಸ್ಯೆ ಕಾಡುತ್ತಿದೆ. ಹೀಗಾಗಿ ಮಠದ ಭಕ್ತರು ತಮ್ಮ ಬಳಿ ಬಂದು ಉತ್ತರಾಧಿಕಾರಿ ಆಯ್ಕೆ ಮಾಡಿಕೊಡುವಂತೆ ಮನವಿ ಮಾಡಿದರು. ಈ ಹಿನ್ನೆಲೆ 9 ಪದಾಧಿಕಾರಿಗಳ ಆಯ್ಕೆ ಸಮಿತಿ ಯನ್ನು ರಚನೆ ಮಾಡಲಾಗಿತ್ತು. ಈ ಸಮಿತಿಯು ಉತ್ತರಾಧಿಕಾರಿ ಸ್ಥಾನಕ್ಕೆ ವಟು ನಾಗೇಂದ್ರ ಅವರೇ ಸೂಕ್ತ ಎಂದು ಅಂತಿಮ ವರದಿ ನೀಡಿದ ಹಿನ್ನೆಲೆ ಪಟ್ಟಾಭಿಷೇಕ ನೆರವೇರಿಸಲಾಗುತ್ತಿದೆ ಎಂದರು.

ಮಕ್ಕಳಿಗೆ ವಿದ್ಯಾದಾನ: ಶಾಸಕ ನರೇಂದ್ರ ಮಾತನಾಡಿ, ಸಾಲೂರು ಮಠದ ಗುರು ಸ್ವಾಮಿಗಳ ಆರೋಗ್ಯ ಕ್ಷೀಣಿಸಿದ್ದ ಹಿನ್ನೆಲೆ ಮಠದ ಸಾಮಾಜಿಕ ಮತ್ತು ಅಭಿವೃದ್ಧಿ ಕಾರ್ಯ ಗಳಿಗೆ ಮಂಕು ಕವಿದಂತಾಗಿತ್ತು. ಇದೀಗ ಉತ್ತರಾಧಿಕಾರಿ ಆಯ್ಕೆಯಾಗಿರುವುದರಿಂದ ಆ ಮಂಕು ಸರಿದಂತಾಗಿದೆ. ಮುಂದಿನ ದಿನಗಳಲ್ಲಿ ಮಠದ ಶೈಕ್ಷಣಿಕ ಸಂಸ್ಥೆಯಿಂದ ಮಹದೇಶ್ವರ ಬೆಟ್ಟ ಸುತ್ತಮುತ್ತಲ 26 ಹಳ್ಳಿಗಳ ಮಕ್ಕಳಿಗೆ ವಿದ್ಯಾದಾನ ನೀಡಬೇಕು. ಈ ಮೂಲಕ ಮಠವನ್ನು ಇನ್ನೂ ಉತ್ತುಂಗಕ್ಕೆ ಕೊಂಡೊಯ್ಯ ಬೇಕು ಎಂದು ಮನವಿ ಮಾಡಿದರು.

ಪಟ್ಟಾಭಿಷೇಕ ಕಾರ್ಯಕ್ರಮ: ಉತ್ತರಾಧಿಕಾರಿಗೆ ಪಟ್ಟಾಭಿಷೇಕ ಮಹೋತ್ಸವ ಹಿನ್ನೆಲೆ ಶನಿವಾರ ಪೂಜಾ ಕೈಂಕರ್ಯಗಳನ್ನು ವಿಧಿವಿಧಾನಗ ಳೊಂದಿಗೆ ನೆರವೇರಿಸಲಾಯಿತು. ಬೆಳಗ್ಗೆಯೇ ಪಂಚ ಕಳಸ ಪೂಜೆ, ಗದ್ದುಗೆಗಳಿಗೆ ಮಹಾ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಅಷ್ಟೋತ್ತರ ಶತನಾಮಾವಳಿಗಳು ನಡೆಯಿತು. ಈ ವೇಳೆ ವಟು ನಾಗೇಂದ್ರ ಅವರು ನಾಡಿನ ಮೂರು ಮಠಗಳಾದ ಸುತ್ತೂರುಶ್ರೀ, ಸಿದ್ಧ ಗಂಗಾಶ್ರೀ ಮತ್ತು ಕನಕಪುರದ ದೇಗುಲ ಮಠದ ಶ್ರೀಗಳಿಗೆ ಪೂಜೆ ನೆರವೇರಿಸಿದರು. ಬಳಿಕ ಸಾಂಪ್ರದಾಯಿಕವಾಗಿ ದೀಕ್ಷೆ ನೀಡಿ ಶಾಂತಮಲ್ಲಿಕಾರ್ಜುನ ಸ್ವಾಮಿ ಎಂದು ನಾಮಕರಣ ಮಾಡಲಾಯಿತು. ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ, ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ, ಗುಂಡ್ಲುಪೇಡೆ ಶಾಸಕ ನಿರಂಜನ್‌ಕುಮಾರ್‌, ಮಾಜಿ ಶಾಸಕಿ ಪರಿಮಳಾ ನಾಗಪ್ಪ, ಪಟ್ಟದ ಗುರುಸ್ವಾಮಿಗಳು, ಉತ್ತರಾಧಿಕಾರಿ ಆಯ್ಕೆ ಸಮಿತಿ ಅಧ್ಯಕ್ಷ ಶಾಗ್ಯ ರವಿ, ನಿರ್ದೇಶಕ ತೋಟೇಶ್‌ ಹಾಜರಿದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.