ಧ್ರುವ ಪದಗ್ರಹಣ ಕಾರ್ಯಕ್ರಮಕ್ಕೆ 3 ಸಾವಿರ ಮಂದಿ ಭಾಗಿ
Team Udayavani, Feb 19, 2021, 6:21 PM IST
ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಂಸದ ಆರ್ .ಧ್ರುವನಾರಾಯಣ ಪದಗ್ರಹಣ ಸಮಾರಂಭ ಫೆ.21 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಜಿಲ್ಲೆಯಿಂದ 3 ಸಾವಿರ ಮಂದಿ ಪಕದ ಕಾರ್ಯಕರ್ತರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು.
ಅಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಪಿಟೀಲ್ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಸಮಾರಂಭ ನಡೆಯಲಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವ ಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಎಸ್.ಆರ್. ಪಾಟೀಲ್, ಸಲೀಂ ಅಹಮ್ಮದ್, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ ಇತರರು ಭಾಗವಹಿಸಲಿ ದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಧ್ರುವನಾರಾಯಣ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ. ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಒಂದು ದಿನವೂ ಕುಳಿತು ಕೊಳ್ಳದೇ ಎಲ್ಲ ಚುನಾವಣೆಗಳಲ್ಲೂ ಭಾಗಿಯಾಗುವ ಮೂಲಕ ಪಕ್ಷ ಸಂಘಟನೆಗೆ ದುಡಿದರು.
ಇದನ್ನೂ ಓದಿ:ಸಂಗಮ್ ಗ್ರಾಮದಲ್ಲಿ ರಾಮಚಂದ್ರನ್ ವಾಸ್ತವ್ಯ
ಆರೋಗ್ಯ ಹಸ್ತ ಅಧ್ಯಕ್ಷರಾಗಿ ರಾಜ್ಯಾದ್ಯಂತ ಸುತ್ತಾಡಿ ಯಶಸ್ವಿಗೊಳಿಸಿದರು. ಇದನ್ನು ಗಮನಿಸಿದ ಪಕ್ಷದ ವರಿಷ್ಠರು ಕಾರ್ಯಾಧ್ಯಕ್ಷ ಹುದ್ದೆ ನೀಡಿದ್ದಾರೆ. ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದರು.
ಧ್ರುವನಾರಾಯಣ ಅವರನ್ನು ಅಭಿನಂದಿಸುವ ಸಲುವಾಗಿ ಫೆ.27 ರಂದು ನಗರದ
ಶಿವಕುಮಾರಸ್ವಾಮಿ ಭವನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಸಮಾರಂಭದಲ್ಲಿ ಕೆಪಿಸಿಸಿ ನಾಯಕರು, ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ. ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ. ಕೆ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರು, ಮಹಮ್ಮದ್ ಅಸYರ್ ಮುನ್ನಾ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಅರುಣ್‌ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.