ಎಸ್ಸಿ, ಎಸ್ಟಿ ಉಪಯೋಜನೆ ತ್ವರಿತ ಪ್ರಗತಿಗೆ ಸೂಚನೆ
Team Udayavani, Oct 17, 2022, 4:06 PM IST
ಚಾಮರಾಜನಗರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳ ಪ್ರಗತಿ ಯನ್ನು ತ್ವರಿತವಾಗಿ ಸಾಧಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಸೆಪ್ಟೆಂಬರ್-2022ರ ತಿಂಗಳ ಅಂತ್ಯದವರೆ ವಿವಿಧ ಇಲಾಖೆಗಳು ಅನುಷ್ಠಾಗೊಳಿಸಿ ರುವ ಕಾರ್ಯಕ್ರಮಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕಾಗಿ ವಿವಿಧ ಇಲಾಖೆಗಳು ನಿಗದಿಪಡಿಸಿರುವ ಕಾರ್ಯಕ್ರಮ ಅನುಸಾರ ಅನುಷ್ಠಾನ ಮಾಡಬೇಕು. ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮ ಯೋಜನೆಗಳು ಸಕಾಲದಲ್ಲಿ ಜನತೆಗೆ ತಲುಪಿಸಬೇಕು ಎಂದು ತಿಳಿಸಿದರು. ಈಗಾಗಲೇ ಅನುದಾನ ನಿಗದಿಯಾಗಿ ಬಿಡುಗಡೆ ಯಾಗಿರುವ ಇಲಾಖೆಗಳು ಶೀಘ್ರ ಪ್ರಗತಿ ಸಾಧಿಸ ಬೇಕು. ಉಳಿದ ಇಲಾಖೆಗಳೂ ಸಹ ವಿಳಂಬ ಮಾಡದೇ ಕಾರ್ಯಕ್ರಮ ಜಾರಿ ಮಾಡಿ ಜನರಿಗೆ ಸವ ಲತ್ತುಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಯವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಸಭೆಯ ಬಳಿಕ ಸಕಾಲ ಪ್ರಗತಿ ಪರಿಶೀಲನಾ ಸಭೆ ಯನ್ನು ನಡೆಸಿದ ಜಿಲ್ಲಾಧಿಕಾರಿಯವರು ವಿವಿಧ ಇಲಾಖೆಗಳು ಸಕಾಲದಡಿ ಅರ್ಜಿ ಸ್ವೀಕರಿಸಿ ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾ ಯಿನಿದೇವಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿ ಕಾರ್ಜುನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಜಿಲ್ಲಾ ನಗರಾಭಿವೃದ್ದಿ ಯೋಜನಾ ನಿರ್ದೇಶಕಿ ಸುಧಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಆಹಾರ ಇಲಾಖೆಯ ಉಪನಿರ್ದೇಶಕ ಯೋಗಾನಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಗೀತಾಲಕ್ಷ್ಮೀ ಕೆ.ಆರ್.ಐಡಿಎಲ್ ಅಧಿಕಾರಿ ರಮೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಮಂಜುನಾಥ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗಮಲ್ಲೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕಿ ಅನಿತಾ, ಇನ್ನಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.