ಪ್ರವಾಸೋದ್ಯಮ ಅಭಿವೃದ್ಧಿಗೆ ಉತ್ತೇಜನ


Team Udayavani, Sep 28, 2020, 3:18 PM IST

ಪ್ರವಾಸೋದ್ಯಮ ಅಭಿವೃದ್ಧಿಗೆ ಉತ್ತೇಜನ

ಚಾಮರಾಜನಗರ: ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿದ್ದು ಇವುಗಳ ಬಗ್ಗೆ ವ್ಯಾಪಕವಾಗಿ ಮಾಹಿತಿ ನೀಡಿ ಪ್ರವಾಸೋದ್ಯಮ ವನ್ನು ಅಭಿವೃದ್ಧಿಗೊಳಿಸಲು ಉತ್ತೇಜಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ಕುಮಾರ್‌ ತಿಳಿಸಿದರು.

ನಗರದಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಜಿಲ್ಲಾಡಳಿತಹಾಗೂಪ್ರವಾಸೋದ್ಯಮಇಲಾಖೆ ವತಿಯಿಂದ ಭಾನುವಾರ ಆಯೋಜಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪ್ರೇಕ್ಷಣೀಯ ಸ್ಥಳ: ಜಿಲ್ಲೆಯಲ್ಲಿ ಶೇ.48ರಷ್ಟು ಅರಣ್ಯ ಪ್ರದೇಶವಿದ್ದು, ರಮಣೀಯ ಜಲಪಾತಗಳು ಹಾಗೂ ಜಲಾಶಯಗಳಿವೆ. ಮಲೆ ಮಹದೇಶ್ವರ, ಸಿದ್ಧಪ್ಪಾಜಿ ಸೇರಿದಂತೆ ಹಲವಾರು ಪವಾಡ ಪುರುಷರ ಧಾರ್ಮಿಕ ಸ್ಥಳಗಳಿವೆ. ಪುರಾತನ ದೇವಾಲಯಗಲಿವೆ. ಇವುಗಳ ಬಗ್ಗೆ ಪ್ರಚಾರ ಮಾಡಿ ಮತ್ತಷ್ಟು ಪ್ರವಾಸಿಗರನ್ನುಕರೆತರಬೇಕಿದೆ ಎಂದರು. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಇಲಾಖೆಯ ಉನ್ನತ ಅಧಿಕಾರಿಗಳ

ಜೊತೆ ಮಾತನಾಡಿದ್ದೇನೆ. ಕೋವಿಡ್ ದಿಂದ ಪ್ರವಾಸೋದ್ಯಮಸೇರಿದಂತೆಒಟ್ಟಾರೆಆರ್ಥಿಕತೆ ಮೇಲೆಹೊಡೆತಬಿದ್ದಿದೆ.ಇಂತಹಸಂದರ್ಭದಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಪ್ರವಾಸೋದ್ಯಮ ದಿನಾಚರಣೆ ಅಗತ್ಯವಿದೆ ಎಂದರು. ಧಾರ್ಮಿಕ ಪ್ರವಾಸೋದ್ಯಮ ಈ ಹಿಂದಿನಿಂದಲೂ ಇದೆ. ನಮ್ಮಲ್ಲಿ ಕೃಷಿ, ಪಾರಂಪರಿಕ, ಸಾಹಸ ಪ್ರವಾಸೋದ್ಯಮ ಆರಂಭವಾಗಿದೆ. ಇದರ ಪರಿಣಾಮ ಬಹಳಷ್ಟು ಜನರಲ್ಲಿ ಆಸಕ್ತಿ ಮೂಡಿದೆ. ನಮ್ಮಲ್ಲಿರುವ ಹಲವು ಪ್ರವಾಸಿ ತಾಣಗಳನ್ನು ನಾವು ಪ್ರಚುರಗೊಳಿಸಬೇಕಿದೆ ಎಂದು ಸಚಿವರು ಸಲಹೆ ಮಾಡಿದರು.

ಉದ್ಯೋಗ ಸೃಷ್ಟಿ: ಜಿಲ್ಲಾ ಪ್ರವಾಸಿ ತಾಣಗಳ ಕೈಪಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲೆಯಲ್ಲಿ ಹಲವು ಪ್ರವಾಸಿ ತಾಣಗಳಿದ್ದರೂ ನಿರೀಕ್ಷಿತವಾಗಿ ಕ್ಷೇತ್ರಗಳು ಅಭಿವೃದ್ಧಿ ಹೊಂದಬೇಕಿದೆ. ಪ್ರವಾಸಿ ತಾಣಗಳಿಗೆ ಮೂಲ ಸೌಕರ್ಯ ಕಲ್ಪಿಸಿದರೆ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ. ಈ ನಿಟ್ಟಿನಲ್ಲಿ ಸಚಿವರು ಗಮನ ನೀಡಬೇಕು ಎಂದು ಕೋರಿದರು.

ಸಾಧನೆ ಕೈಪಿಡಿ: ಇದೇ ವೇಳೆ ಎಸ್‌.ಸುರೇಶ್‌ ಕುಮಾರ್‌ ಜಿಲ್ಲಾ ಉಸ್ತುವಾರಿ ಸಚಿವರಾಗಿ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿಕೆಲಸಗಳ ಕುರಿತು ಮಾಹಿತಿಯುಳ್ಳ ನಮ್ಮ ಚಾಮ ರಾಜನಗರ-ಉಸ್ತುವಾರಿಯ ಜವಾಬ್ದಾರಿ ವರುಷದ ವರದಿ ಎಂಬ ಕೈಪಿಡಿಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಂತಮೂರ್ತಿಕುಲಗಾಣ, ತಾಪಂಉಪಾಧ್ಯಕ್ಷ ಕೆ.ರವೀಶ್‌, ಜಿಪಂ ಸದಸ್ಯರಾದ ಸಿ.ಎನ್‌ .ಬಾಲರಾಜು, ಕೆರೆಹಳ್ಳಿ ನವೀನ್‌, ಜಿಪಂ ಸಿಇಒ ಅಧಿಕಾರಿ ಹರ್ಷಲ್‌ ಬೋಯಲ್‌ ನಾರಾಯಣ್‌ ರಾವ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್‌, ಉಪ ವಿಭಾಗಾಧಿಕಾರಿ ಡಾ. ಗಿರೀಶ್‌ ದಿಲೀಪ್‌ ಬೋಡ್ಲೆ, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಕೆ.ಎಚ್‌. ಗಿರೀಶ್‌ ಇತರರಿದ್ದರು

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.