ವಿದ್ಯುತ್‌ ಸಮಸ್ಯೆ ಖಂಡಿಸಿ ಸೆಸ್ಕ್ ವಿರುದ್ಧ ಪ್ರತಿಭಟನೆ

Team Udayavani, Apr 10, 2021, 12:32 PM IST

ವಿದ್ಯುತ್‌ ಸಮಸ್ಯೆ ಖಂಡಿಸಿ ಸೆಸ್ಕ್ ವಿರುದ್ಧ ಪ್ರತಿಭಟನೆ

ಯಳಂದೂರು: ರೈತರಿಗೆ ಸೆಸ್ಕ್ನಿಂದಾಗುತ್ತಿರುವ ತೊಂದರೆಗಳ ವಿರುದ್ಧ ರೈತ ಸಂಘದ ಸದಸ್ಯರು ಶುಕ್ರವಾರ ಪಟ್ಟಣದ ಸೆಸ್ಕ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌ ಮಾತನಾಡಿ, ವಿದ್ಯುತ್‌ ಪರಿವರ್ತಕಗಳನ್ನು ನಿಗದಿತಅವಧಿಯೊಳಗೆ ದುರಸ್ತಿ ಮಾಡಬೇಕೆಂಬ ನಿಯಮವಿದ್ದರೂ ಇದನ್ನು ಗಾಳಿಗೆ ತೂರಲಾಗಿದೆ. ವಿದ್ಯುತ್‌ ಪರಿವರ್ತಕ ಅಳವಡಿಸಲು ಲಂಚವನ್ನುಸೆಸ್ಕ್ನ ನೌಕರರು ಕೇಳುತ್ತಾರೆ. ರೈತರೊಂದಿಗೆ ಇಲ್ಲಿನಜೆಇ ಅಸಭ್ಯವಾಗಿ ವರ್ತಿಸುತ್ತಾರೆ. ವಿದ್ಯುತ್‌ ಸಂಬಂಧಿತ ಸಮಸ್ಯೆಗಳನ್ನು ಕೇಳಿದರೆ ಉಡಾಫೆಉತ್ತರ ನೀಡುತ್ತಾರೆ ಎಂದು ದೂರಿದರು.

ರೈತರಿಗೆ 7 ಗಂಟೆ 3 ಫೇಸ್‌ ವಿದ್ಯುತ್‌ ನೀಡಬೇಕೆಂಬ ನಿಯಮ ಪಾಲನೆಯಾಗುತ್ತಿಲ್ಲ. ಈಗ ಬೇಸಿಗೆಯಾಗಿದ್ದು ರೈತರ ಫ‌ಸಲುಗಳುಒಣಗುತ್ತಿವೆ. ಇಂತಹ ಸಂದರ್ಭದಲ್ಲಿ ಕನಿಷ್ಠ 10 ಗಂಟೆಯಾದರೂ 3 ಫೇಸ್‌ ವಿದ್ಯುತ್‌ ನೀಡಬೇಕು. ರಾತ್ರಿ ವೇಳೆ ರೈತರು ತಮ್ಮ ಬೆಳೆಗಳನ್ನು ಕಾಯಲುಜಮೀನುಗಳಿಗೆ ತೆರಳುತ್ತಾರೆ. ಆದರೆ, ರಾತ್ರಿ ಹೊತ್ತ ಸಿಂಗಲ್‌ ಫೇಸ್‌ ವಿದ್ಯುತ್‌ ಕೂಡ ನೀಡುತ್ತಿಲ್ಲ. ಇದರಿಂದ ಕಗ್ಗತ್ತಲಿನಲ್ಲೇ ಕಾಡುಪ್ರಾಣಿಗಳ ಜೀವಭಯದಿಂದ ರೈತರು ಕಾಲ ಕಳೆಯುವ ಪರಿಸ್ಥಿತಿಇದೆ. ಇದು ನಿಲ್ಲಬೇಕು, ರಾತ್ರಿವೇಳೆ ನಿರಂತವಾಗಿ ಐಸಿ ಸೆಟ್‌ಗಳಿಗೆ ಸಿಂಗಲ್‌ ಫೇಸ್‌ ವಿದ್ಯುತ್‌ ನೀಡಬೇಕು ಎಂದರು.

ಜಮೀನುಗಳಲ್ಲಿ ಹಾದು ಹೋಗಿರುವ ವಿದ್ಯುತ್‌ ತಂತಿಗಳು ಕೆಲವೆಡೆ ಡೊಳ್ಳಾಗಿವೆ. ಗಾಳಿಗೆ ಇದು ಪರಸ್ಪರ ತಗುಲಿದರೆ ಇದರಿಂದ ವಿದ್ಯುತ್‌ ಕಿಡಿಗಳುಪ್ರವಹಿಸಿ ಕಬ್ಬು ಸೇರಿದಂತೆ ಅನೇಕ ಬೆಳೆಗಳು ನಷ್ಟವಾಗುತ್ತಿದೆ. ಇದನ್ನು ಬೇರೆಡೆ ಬದಲಿಸಬೇಕು. ಇಲ್ಲವೆ ತಂತಿಗಳನ್ನು ಬಿಗಿಗೊಳಿಸಬೇಕು. ವಿದ್ಯುತ್‌ಶಾರ್ಟ್‌ ಸರ್ಕಿಟ್‌ನಿಂದ ಬೆಳೆನಷ್ಟವಾಗಿದ್ದು ಇದಕ್ಕೆಹಲವು ತಿಂಗಳು ಕಳೆದರೂ ಇನ್ನೂ ನಷ್ಟವನ್ನುತುಂಬಿಕೊಟ್ಟಿಲ್ಲ. ಇದರಿಂದ ರೈತರಿಗೆ ಸಂಕಷ್ಟವಾಗಿದ್ದುಆದಷ್ಟು ಬೇಗ ಪರಿಹಾರ ಮೊತ್ತವನ್ನು ನೀಡಬೇಕು ಎಂದರು.

ತಾಲೂಕಿನ ವಿವಿಧ ಗ್ರಾಮಗಳಿಂದ ಬಂದಿದ್ದ ರೈತರು ಕಚೇರಿ ಮುಂಭಾಗ ಧಿಕ್ಕಾರ ಕೂಗಿಪ್ರತಿಭಟಿಸಿದರು. ನಂತರ ಸೆಸ್ಕ್ನ ಎಇಇ ನಿಂಗರಾಜುಗೆ ಮನವಿ ಸಲ್ಲಿಸಲಾಯಿತು.ಹೊನ್ನೂರು ಬಸವಣ್ಣ, ಅಂಬಳೆ ಶಿವಕುಮಾರ್‌,ಸಿದ್ದಲಿಂಗಸ್ವಾಮಿ, ಬಿ.ಜಿ. ಮಹೇಶ್‌,ಮಹದೇವಸ್ವಾಮಿ ಋಷಿ, ನಾಗರಾಜು, ಶಂಕರ್‌, ದೀಪು, ಲೋಕೇಶ್‌, ಕಾಂತರಾಜು, ಕುಮಾರ್‌, ಶಂಕರ್‌, ಮನು ಇತರರಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Mahadeshwara-Betta-CM-Dcm

Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

Kollegala: ಸ್ಕೂಟಿಯಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.