ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
Team Udayavani, Jun 22, 2020, 5:40 AM IST
ಚಾಮರಾಜನಗರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಮಾಜಿ ಸಂಸದ ಧ್ರುವನಾರಾಯಣ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಡಳಿತ ಭವನದ ಎದುರು ಸೇರಿದ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾಜಿ ಸಂಸದ ಧ್ರುವನಾರಾಯಣ ಮಾತನಾಡಿ, ಇಡೀ ವಿಶ್ವವೇ ಕೋವಿಡ್‌ನಿಂದ ನಲುಗಿ ಹೋಗಿದೆ.
ಭಾರತವೂ ಎರಡು ತಿಂಗಳ ಕಾಲ ಕಠಿಣ ಲಾಕ್‌ಡೌನ್‌ನಿಂದ ತತ್ತರಿಸಿದ್ದು, ಆರ್ಥಿಕತೆ ತೀವ್ರ ಕುಸಿದಿದೆ. ಇಂತಹ ಸಂದರ್ಭದಲ್ಲಿ ದೇಶದಲ್ಲಿ ಹಲವು ಕಾರ್ಖಾನೆಗಳು ವಾಹನಗಳು ಓಡಾಡದೇ ಪೆಟ್ರೋಲ್, ಡೀಸೆಲ್ ಬಳಕೆ ಕಡಿಮೆಯಾಗಿದೆ. ಅಲ್ಲದೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕುಸಿದಿದ್ದರೂ ಬಿಜೆಪಿ ಸರ್ಕಾರ ಪೆಟ್ರೋಲ್ ದರವನ್ನು ಏರಿಸುತ್ತಲೇ ಇದೆ ಎಂದು ಆಪಾದಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಬಡವರ ಭೂಮಿಗಾಗಿ ಹೋರಾಟ ಮಾಡಿರುವ ನಿದರ್ಶನಗಳಿವೆ. ಆದರೆ, ರೈತ ವಿರೋಧಿ ಕಾನೂನುಗಳನ್ನು ಜಾರಿ ಮಾಡಲು ಹೊರಟಿದ್ದಾರೆ. ರೈತ ವಿರೋಧಿ ನಿಲುವು ತೆಗೆದುಕೊಂಡಿರುವುದು ಅಕ್ಷಮ್ಯ ಅಪರಾಧ. ಎಪಿಎಂಸಿ ಖಾಸಗೀಕರಣ ಮಾಡಬಾರದು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಪಂ ಅಧ್ಯಕ್ಷೆ ಅಶ್ವಿನಿ, ಶಾಸಕರಾದ ಪುಟ್ಟರಂಗಶೆಟ್ಟಿ, ನರೇಂದ್ರ, ಎಂಎಲ್‌ಸಿ ಧರ್ಮಸೇನ, ಮಾಜಿ ಶಾಸಕರಾದ ಜಯಣ್ಣ, ಬಾಲರಾಜ್, ಮಾಜಿ ಸಂಸದ ಶಿವಣ್ಣ, ಜಿಪಂ ಸದಸ್ಯರಾದ ಶಿವಮ್ಮ, ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ಚಾಮುಲ್ ಅಧ್ಯಕ್ಷ ನಂಜುಂಡಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ರವಿಕುಮಾರ್, ಮಾಧ್ಯಮ ಕಾರ್ಯದರ್ಶಿ ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಮಹದೇವು ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.