![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 21, 2021, 7:35 PM IST
ಚಾಮರಾಜನಗರ: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಕರ್ನಾಟಕ ಯುವಶಕ್ತಿ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟಿಸಲಾಯಿತು. ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಉದ್ಧವ್ ಠಾಕ್ರೆ ವಿರುದ್ಧ ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥಾಚಾರಿ ಮಾತನಾಡಿ, ಮಹಾರಾಷ್ಟ್ರ ಸಿಎಂ ಮರಾಠಿ ಭಾಷೆ, ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾ ರಾಷ್ಟ್ರಕ್ಕೆ ಸೇರಿಸಿಕೊಳ್ಳುವುದಾಗಿ ಹೇಳಿಕೆ ನೀಡಿರುವುದು ಖಂಡನೀಯ.
ಇದನ್ನೂ ಓದಿ:ಠಾಕ್ರೆ ಹೇಳಿಕೆ ಖಂಡಿಸಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ
ಮಹಾಜನ್ ವರದಿಯೇ ಅಂತಿಮವಾಗಿದೆ ಎಂದರು. ಪ್ರತಿಭಟನೆಯಲ್ಲಿ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ಜಿಲ್ಲಾ ಉಪಾಧ್ಯಕ್ಷ ಕೃಷ್ಣಾಚಾರ್, ತಾಲೂಕು ಅಧ್ಯಕ್ಷ ಗಿರೀಶಾಚಾರಿ, ಅಗರ ಹೋಬಳಿ ಅಧ್ಯಕ್ಷ ವೀರಭದ್ರಚಾರ್, ರಂಗಸ್ವಾಮಿ, ಗಿರೀಶಾಚಾರಿ, ಕವಿತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.