ಉಮ್ಮತ್ತೂರು ಕೆರೆಗೆ ಹರಿಯದ ನೀರು: ದಿಢೀರ್ ಪ್ರತಿಭಟನೆ ಆರಂಭಿಸಿದ ರೈತರು

ನೀರು ಹರಿಸುವವರೆಗೂ ರಾತ್ರಿ ಹಗಲು ನಿರಂತರ ಧರಣಿಗೆ ನಿರ್ಧಾರ

Team Udayavani, Aug 28, 2021, 7:41 PM IST

protest at chamarajanagara

ಚಾಮರಾಜನಗರ: ಉಮ್ಮತ್ತೂರು ದೊಡ್ಡಕೆರೆಗೆ ಸುತ್ತೂರಿನ ಕಬಿನಿ ನದಿಯಿಂದ ನೀರು ಹರಿಸದೆ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ, ಉಮ್ಮತ್ತೂರು ಕೆರೆ ಪುನಶ್ಚೇತನ ಸಮಿತಿ ವತಿಯಿಂದ ಅಚ್ಚುಕಟ್ಟುದಾರರು ಹಾಗೂ ರೈತರು  ಶನಿವಾರ ಸಂಜೆಯಿಂದ ದೊಡ್ಡ ಕೆರೆ ಮುಂದೆ ದಿಢೀರ್ ಪ್ರತಿಭಟನೆ ಆರಂಭಿಸಿದರು. ನೀರು ಹರಿಸುವವರೆಗೂ ಹಗಲು ರಾತ್ರಿ ಧರಣಿ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ತಾಲೂಕಿನ ಉಮ್ಮತ್ತೂರು ದೊಡ್ಡಕೆರೆಗೆ ಕಬಿನಿ ನದಿಯಿಂದ ನೀರು ತುಂಬಿಸುವ ಯೋಜನೆಗೆ 2017ರಲ್ಲೇ ಭೂಮಿಪೂಜೆ ನೆರವೇರಿತ್ತು. ಅಂದಿನಿಂದ ಕಾಮಗಾರಿ ಕುಂಟುತ್ತಾ ಸಾಗಿ, 2021 ಆದರೂ ಕೆರೆಗೆ ನೀರು  ಹರಿಯಲಿಲ್ಲ. ಇದರಿಂದ ಬೇಸತ್ತ ಅಚ್ಚುಕಟ್ಟುದಾರರು, ರೈತರು, ಗ್ರಾಮಸ್ಥರು  2021ರ ಫೆಬ್ರವರಿ 15 ರಂದು ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಅಂದು ಜಿಲ್ಲಾಳಿಡಳಿತ ಭವನದ ಆವರಣದಲ್ಲಿ ನಡೆಯುತ್ತಿದ್ದ 11ನೇ ಜಿಲ್ಲಾ  ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಿದ್ದ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್‌ಕುಮಾರ್ ಅವರು ರೈತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದರು. ಆಗ ರೈತರು ಈ ಯೋಜನೆಯ ವಿಳಂಬಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು.

ಅಂದು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ  ಮಾತನಾಡಿದ ಸುರೇಶ್‌ಕುಮಾರ್ ಅವರು, 32 ಕಿಮೀ ಪೈಪ್‌ಲೈನ್ ಕೆಲಸ ಪೂರ್ಣವಾಗಿದೆ. ಇನ್ನು 1.40 ಕಿ.ಮೀ. ಕೆಲಸ ಬಾಕಿಯಿದೆ. ಅದನ್ನು ಏಪ್ರಿಲ್ ಮಧ್ಯಭಾಗದಲ್ಲಿ ಪೂರ್ಣಗೊಳಿಸಲಾಗುವುದು ಎಂದರು. ಇದನ್ನು ಲಿಖಿತವಾಗಿ ಕೊಡಿ ಎಂದು ಪ್ರತಿಭಟನಾನಿರತರು ಒತ್ತಾಯಿಸಿದ್ದರು. ಅದರಂತೆ ನೀರಾವರಿ ಶಾಖಾಧಿಕಾರಿ, ಎಇಇ,  ಅಧೀಕ್ಷಕ ಇಂಜಿನಿಯರ್, ಗುತ್ತಿಗೆದಾರರು ಸಹಿ ಮಾಡಿ ಲಿಖಿತವಾಗಿ ಸಚಿವರಿಗೆ ಬರೆದುಕೊಟ್ಟ ಪತ್ರವನ್ನು ಓದಿದ್ದರು. ಹಗಲು ರಾತ್ರಿ ಸಮರೋಪಾದಿಯಲ್ಲಿ ಕಾಮಗಾರಿ ಕೈಗೊಂಡು ಮುಂಬರುವ ಏಪ್ರಿಲ್  ಅಂತ್ಯಕ್ಕೆ ಈ ಯೋಜನೆಯನ್ನು ಚಾಲನೆಗೊಳಿಸಲಾಗುವುದು ಎಂದು ಲಿಖಿತವಾಗಿ ತಿಳಿಸಿದ್ದರು.

ಆದರೆ ಈ ಭರವಸೆ ಈಡೇರಲಿಲ್ಲ. ಇದರಿಂದ ಉಮ್ಮತ್ತೂರು ಗ್ರಾಮಸ್ಥರು ಜುಲೈ ತಿಂಗಳಲ್ಲಿ ಕೆರೆ ಮುಂದೆ ಸಭೆ ಸೇರಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಅಂದು ಸ್ಥಳಕ್ಕೆ ತೆರಳಿದ ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಜುಲೈ 31ರೊಳಗೆ ನೀರು ಬಾರದಿದ್ದರೆ, ಆಗಸ್ಟ್ 1 ರಂದು ನಿಮ್ಮ ಜೊತೆ ಪ್ರತಿಭಟನೆ ನಡೆಸುವುದಾಗಿ ಭರವಸೆ ನೀಡಿದ್ದರು. ಅದಾದ ಮೇಲೆ ಆಗಸ್ಟ್ 1 ಆದರೂ ಭರವಸೆ ಈಡೇರಲಿಲ್ಲ. ಈ ನಡುವೆ ಸುರೇಶ್‌ಕುಮಾರ್ ಸಚಿವ ಸ್ಥಾನದಿಂದ ಪದಚ್ಯುತಗೊಂಡು, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಜಿಲ್ಲೆಯ ಕೋವಿಡ್ ನಿರ್ವಹಣೆ ಉಸ್ತುವಾರಿ ನೀಡಲಾಗಿದೆ.

ಇದನ್ನೂ ಓದಿ:ಉಡುಪಿ ಶ್ರೀಕೃಷ್ಣಾಷ್ಟಮಿಯಂದು ಭಕ್ತರಿಗೆ ದರ್ಶನಾವಕಾಶ : ಭರದಿಂದ ನಡೆಯುತ್ತಿದೆ ತಯಾರಿ

ಶುಕ್ರವಾರವಷ್ಟೇ ಕಬಿನಿ ನದಿಯಿಂದ ನೀರೆತ್ತುವ ಸುತ್ತೂರಿನ ಕಾರ್ಯಾಗಾರಕ್ಕೆ ತೆರಳಿದ ಸಚಿವ ಎಸ್.ಟಿ. ಸೋಮಶೇಖರ್ ಆ. 31ರೊಳಗೆ ಉಮ್ಮತ್ತೂರು ಕೆರೆಗೆ ನೀರು ಹರಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಆ. 31ರೊಳಗೂ ನೀರು ಹರಿಯುವುದಕ್ಕೆ ಅನುಮಾನ ವ್ಯಕ್ತಪಡಿಸಿದ ರೈತರು, ಶನಿವಾರ ಮಧ್ಯಾಹ್ನ ಉಮ್ಮತ್ತೂರು ದೊಡ್ಡ ಕೆರೆ  ಪಕ್ಕದ ಕೊಟ್ಟೂರು ಬಸವೇಶ್ವರ ದೇವಾಲಯದ ಎದುರು ಸಭೆ ನಡೆಸಿದರು. ಅಚ್ಚುಕಟ್ಟುದಾರರು ,ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಸಭೆ ನಡೆಯಿತು.

ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಸಚಿವರು, ಅಧಿಕಾರಿಗಳು ಸುಳ್ಳು ಭರವಸೆ ನೀಡುತ್ತಿದ್ದಾರೆ. ಆ. 31ರೊಳಗೆ ನೀರು ಹರಿಸುವುದು ಅನುಮಾನ. ಶಾಸಕ ಎನ್. ಮಹೇಶ್ ಅವರು ಆ. 31ರೊಳಗೆ ನೀರು ಹರಿಸದಿದ್ದರೆ ಚಳವಳಿಯಲ್ಲಿ ಭಾಗವಹಿಸಬೇಕು. ಇಲ್ಲದಿದ್ದರೆ ಅವರು ವಚನಭ್ರಷ್ಟರಾದಂತೆ ಎಂದು ಟೀಕಿಸಿದರು.

ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಮಾತನಾಡಿ, ಆ. 31ರಂದು ನೀರು ಹರಿಸದಿದ್ದರೆ, ಸುತ್ತೂರಿನಲ್ಲಿ ರೈತ ಮಹಿಳೆಯೊಬ್ಬರ ಕೈಯಲ್ಲಿ ಉದ್ಘಾಟಿಸಲಾಗುವುದು. ಇದಕ್ಕೆ ಅವಕಾಶ ದೊರಕದಿದ್ದರೆ ಸುತ್ತೂರು ಶ್ರೀಗಳನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು, ಅಲ್ಲಿಯೇ ಚಳವಳಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಶನಿವಾರ ಸಂಜೆಯಿಂದಲೇ ಪ್ರತಿಭಟನೆ  ಆರಂಭಿಸಲು ನಿರ್ಧರಿಸಿ, ಅಲ್ಲಿಯೇ ಶಾಮಿಯಾನ ಹಾಕಿ, ಮಹಾತ್ಮಾಗಾಂಧಿ ಭಾವಚಿತ್ರ ಇರಿಸಿ ಧರಣಿ ಆರಂಭಿಸಿದರು. ಆ. 31ರವೆರೆಗೂ ಅದೇ ಸ್ಥಳದಲ್ಲಿ ರಾತ್ರಿ ಹಗಲು ಎನ್ನದೇ ನಿರಂತರ ಧರಣಿ ನಡೆಸಲು ರೈತರು ತೀರ್ಮಾನಿಸಿದ್ದಾರೆ.

ರೈತ ಮುಖಂಡರಾದ ಹೊನ್ನೂರು ಬಸವಣ್ಣ, ಹೆಗ್ಗವಾಡಿಪುರ ಮಹದೇವಸ್ವಾಮಿ, ದಾಸನೂರು ಮಲ್ಲಣ್ಣ, ಅಗ್ರಹಾರ ಮಂಜುನಾಥ್, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಮೂಡ್ಲುಪುರ ನಂದೀಶ್,  ಉಮ್ಮತ್ತೂರು, ಜನ್ನೂರು, ಮೂಡಲ ಅಗ್ರಹಾರ,  ಚುಂಚನಹಳ್ಳಿ, ಹನುಮನಪುರ, ಹಳ್ಳಿಕೆರೆಹುಂಡಿ, ಹೊಮ್ಮ,  ದಾಸನೂರು, ಹೆಗ್ಗವಾಡಿ, ಹೆಗ್ಗವಾಡಿಪುರದ ಗ್ರಾಮಸ್ಥರು ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಟಾಪ್ ನ್ಯೂಸ್

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ravi

Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್‌ ಭಟ್‌

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.