ಚಾ.ನಗರ: ರೈತರಿಂದ ಹೆದ್ದಾರಿ ಬಂದ್ ಚಳವಳಿ
Team Udayavani, Sep 26, 2020, 1:51 PM IST
ಚಾಮರಾಜನಗರ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದ ಅಂಚೆ ಕಚೇರಿ ಎದುರು ರೈತ, ಕಾರ್ಮಿಕ, ದಲಿತ, ಪ್ರಗತಿಪರ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ ಬಂದ್ ಚಳವಳಿ ನಡೆಸಿದರು.
ಈ ವೇಳೆ ಕಬ್ಬು ಬೆಳೆಗಾರ ಸಂಘದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಕೃಷಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಬಂಡವಾಳಶಾಹಿಗಳ ಪರ ಕೆಲಸ ಮಾಡುತ್ತಿದ್ದು, ರೈತರಿಗೆ ಮರಣಶಾಸನ ಬರೆಯುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಹೆದ್ದಾರಿ ಬಂದ್ ಮಾಡಿದ ರೈತ ಮುಖಂಡರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಎ.ಎಂ.ಮಹೇಶ್ ಪ್ರಭು, ಮೂಕಳ್ಳಿ ಮಹದೇವಸ್ವಾಮಿ, ಪಟೇಲ್ ಶಿವಮೂರ್ತಿ, ಹೆಬ್ಬಸೂರು ಬಸವಣ್ಣ, ಸಿದ್ದರಾಜು, ವೆ.ವೆಂಕಟರಾಜ್ ಪರ್ವತ್‌ರಾಜ್, ಸಿ.ಎನ್. ಗೋವಿಂದರಾಜು, ಎನ್.ನಾಗಯ್ಯ, ಸಿ.ಎಂ. ಕೃಷ್ಣಮೂರ್ತಿ, ಸಿ.ಎಂ.ಶಿವಣ್ಣ, ಬ್ಯಾಡಮೂಡ್ಲು ಬಸವಣ್ಣ, ಸೇರಿದಂತೆ 50ಕ್ಕೂ ಮಂದಿಯನ್ನು ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.
ಯಳಂದೂರು:ಕೇಂದ್ರದಿಂದ ಉಳ್ಳವರ ಪರಕಾನೂನು :
ಯಳಂದೂರು: ಭೂ ಸುಧಾರಣೆ ತಿದ್ದುಪಡಿ ವಿಧೇಯಕ ಹಾಗೂ ಕಾರ್ಮಿಕ ಸಂಬಂಧಿತ ಕಾಯ್ದೆ ಗಳನ್ನು ವಿರೋಧಿಸಿ ರೈತ ಸಂಘ ಹಾಗೂ ಹಸಿರು ಸೇನೆ, ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ಪಟ್ಟಣದ ಎಸ್‌ಬಿಐ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದವು.
ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ರೈತರ ಬದುಕನ್ನು ಕಸಿದುಕೊಳ್ಳುವ ಕಾಯ್ದೆಗಳನ್ನು ರೂಪಿಸಲಾಗುತ್ತಿದೆ. ಇದು ರೈತರ ಪಾಲಿನ ಮರಣ ಶಾಸನವಾಗಿದೆ. ಇವುಗಳನ್ನು ವಿರೋಧಿಸದಿದ್ದರೆ ಮುಂದೆ ಭಾರೀ ಬೆಲೆ ತೆರ ಬೇಕಾಗುತ್ತದೆ ಎಂದು ಎಚ್ಚರಿಸಿದರು.
ದಸಂಸ ಜಿಲ್ಲಾ ಸಂಚಾಲಕ ಸಿ.ರಾಜಣ್ಣ ಮಾತನಾಡಿ, ಕೇಂದ್ರ ಸರ್ಕಾರ ಉಳ್ಳವರ ಪರವಾಗಿರುವ ಕಾನೂನುಗಳನ್ನುಜಾರಿಗೊಳಿಸುತ್ತಿದೆ ಎಂದು ಕಿಡಿಕಾರಿದರು. ಈ ವೇಳೆ ತಾಪಂ ಸದಸ್ಯ ವೈ.ಕೆ.ಮೋಳೆ ನಾಗ ರಾಜು, ಪಪಂ ಸದಸ್ಯ ಮಹೇಶ್, ಹೊನ್ನೂರು ಬಸವಣ್ಣ, ಕಂದಹಳ್ಳಿ ನಾರಾಯಣ ಇತರರಿದ್ದರು.
ಪ್ರತಿಭಟನಕಾರರು ಹೆದ್ದಾರಿ ತಡೆದಿದ್ದರಿಂದವಾಹನ ಸಂಚಾರಕ್ಕೆ ತೊಡಕಾಗಿತ್ತು. ಈ ವೇಳೆ ರೈತ ಮುಖಂಡರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.