ಸಮರ್ಪಕ ಕುಡಿಯುವ ನೀರು ಪೂರೈಸಿ: ಜಿಲ್ಲಾಧಿಕಾರಿ ರವಿ
Team Udayavani, Mar 2, 2021, 3:44 PM IST
ಚಾಮರಾಜನಗರ: ಬೇಸಿಗೆ ಕಾಲ ಆರಂಭ ಹಿನ್ನೆಲೆಯಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮಾಂತರಪ್ರದೇಶದ ಯಾವುದೇ ಭಾಗದಲ್ಲಿ ಕುಡಿವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಾಕೀತು ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೇಸಿಗೆ ವೇಳೆ ಉಂಟಾಗಬಹುದಾದ ಅಭಾವಪರಿಸ್ಥಿತಿ ಮತ್ತು ಸಮಸ್ಯಾತ್ಮಕ ಗ್ರಾಮಗಳಲ್ಲಿ ಕುಡಿವ ನೀರಿನ ಸರಬರಾಜು ಕುರಿತು ಸೋಮವಾರ ನಡೆದಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂದಿನ 3-4 ತಿಂಗಳ ಕಾಲ ನಗರ, ಪಟ್ಟಣ ಪ್ರದೇಶಗಳೇ ಇರಲಿ ಅಥವಾ ಗ್ರಾಮೀಣ ಭಾಗಗಳೇಇರಲಿ ಎಲ್ಲಿಯೂ ಕುಡಿಯುವ ನೀರಿಗೆ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಎಂದು ನಿರ್ದೇಶನ ನೀಡಿದರು.
ಆದ್ಯತೆ ಇರಲಿ: ಸಾರ್ವಜನಿಕ ನೀರಿನ ಲಭ್ಯತೆ ಇಲ್ಲದ ಕಡೆ ಖಾಸಗಿ ಬೋರ್‌ವೆಲ್ ಗುರುತಿಸಿನೀರು ಸರಬರಾಜು ಮಾಡಬೇಕಿದೆ,ತಹಶೀಲ್ದಾರರು, ತಾಪಂ ಇಒಗಳು, ಗ್ರಾಪಂಅಧಿಕಾರಿಗಳು ಜತೆಗೂಡಿ ಕುಡಿಯುವ ನೀರಿಬವಣೆ ನೀಗಿಸಬೇಕು. ಸಮಸ್ಯಾತ್ಮಕ ಗ್ರಾಮಗಳಿಗೆ ಆದ್ಯತೆ ಮೇರೆಗೆ ನೀರು ಒದಗಿಸುವ ಕಾರ್ಯ ಮಾಡಬೇಕೆಂದರು.
ಕಾಮಗಾರಿ ಪೂರ್ಣಗೊಳಿಸಿ: ಹಾಗೆಯೇ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಏನಾದರೂ ಸಮಸ್ಯಗಳಿವೆ ಎಂಬ ಬಗ್ಗೆ ಕೂಡಲೇ ಪರಿಶೀಲಿಸಿಕೊಳ್ಳಬೇಕು, ತಾಂತ್ರಿಕ ತೊಂದರೆಅಥವಾ ನಿರ್ವಹಣೆ ಕಾರ್ಯದಲ್ಲಿ ಬದಲಾವಣೆ ಅಗತ್ಯವಿದ್ದರೆ ಕೂಡಲೇ ಸರಿಪಡಿಸಬೇಕು. ಬಾಕಿಇರುವ ಶುದ್ಧ ಕುಡಿವ ನೀರಿನ ಘಟಕಗಳ ಅಳವಡಿಕೆಕಾಮಗಾರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದರು.ಬೇಸಿಗೆ ವೇಳೆ ಜಾನುವಾರುಗಳಿಗೂ ನೀರಿನ ಕೊರತೆ ಕಾಡಬಾರದು. ಮೇವು ಪೂರೈಕೆಯಲ್ಲಿಯೂ ಯಾವುದೇ ವ್ಯತ್ಯಯವಾಗಬಾರದು ಎಂದರು.
ಅರಿವು ಮೂಡಿಸಿ: ಬೇಸಿಗೆ ವೇಳೆ ಸಾಮಾನ್ಯವಾಗಿಎದುರಾಗಬಹುದಾದ ನಿರ್ಜಲೀಕರಣ, ಮಕ್ಕಳಿಗೆ ಕಾಣಿಸಿಕೊಳ್ಳಬಹುದಾದ ಅನಾರೋಗ್ಯದಂತಹಸಮಸ್ಯೆಗಳನ್ನು ಹೇಗೆ ನಿವಾರಿಸಿಕೊಳ್ಳಬೇಕು ಎಂಬಬಗ್ಗೆಯೂ ಸೇರಿ ಆರೋಗ್ಯ ಸಂಬಂಧಿ ಸಲಹೆಗಳನ್ನು ತಾಲೂಕು ಆರೋಗ್ಯಾಧಿಕಾರಿಗಳಿಂದ ನೀಡುವ ವ್ಯವಸ್ಥೆಯಾಗಬೇಕು ಎಂದರು.
ಸಮರ್ಪಕ ತ್ಯಾಜ್ಯ ವಿಲೇವಾರಿ ಮಾಡಿ: ಗ್ರಾಪಂ, ನಗರಸಭೆ, ಪುರಸಭೆ, ಪಪಂ ವ್ಯಾಪ್ತಿಯಲ್ಲಿ ಸ್ವತ್ಛತೆಗೆವಿಶೇಷ ಗಮನ ಹರಿಸಬೇಕು. ಕಸ ಇತರ ತ್ಯಾಜ್ಯ ವಿಲೇವಾರಿ ನಿಗದಿತ ಸಮಯದೊಳಗೆ ಮುಗಿಯಬೇಕು. ಚರಂಡಿ ಶುಚಿಗೊಳಿಸಿಶುದ್ಧವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿ ದೇವಿ, ಉಪವಿಭಾಗಾಧಿಕಾರಿ ಡಾ.ಗಿರೀಶ್ ದಿಲೀಪ್ ಬಡೋಲೆ, ತಹಶೀಲ್ದಾರ್‌ರಾದ ಕೆ.ಕುನಾಲ್,ಚಿದಾನಂದ ಗುರುಸ್ವಾಮಿ, ನಾಗರಾಜು, ತಾಪಂ ಇಒ ಪ್ರೇಮ್‌ಕುಮಾರ್, ಶ್ರೀಕಂಠರಾಜೇಅರಸ್, ಜಿಪಂ ಸಹಾಯಕ ಯೋಜನಾಧಿಕಾರಿ ಕುಲದೀಪ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾನಿರ್ದೇಶಕ ಕೆ.ಸುರೇಶ್, ಜಂಟಿ ಕೃಷಿ ನಿರ್ದೇಶಕಿ ಚಂದ್ರಕಲಾ, ಪಶುಪಾಲನಾ ಇಲಾಖೆಉಪನಿರ್ದೇಶಕ ವೀರಭದ್ರಯ್ಯ, ಇತರೆ ಇಲಾಖೆಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.