ದೌರ್ಜನ್ಯ ಸಂತ್ರಸ್ತರಿಗೆ ಕಾನೂನು ನೆರವು ಒದಗಿಸಿ


Team Udayavani, Jun 24, 2023, 2:43 PM IST

tdy-12

ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಲ್ಲಿ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ ಅಗತ್ಯ ಕಾನೂನಿನ ನೆರವು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟರ ಮೇಲಿನ ದೌರ್ಜನ್ಯಗಳ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ಯಾವುದೇ ವಿಳಂಬ ಧೋರಣೆ ಬೇಡ. ದೌರ್ಜನ್ಯ ಪ್ರಕರಣಗಳ ಇತ್ಯರ್ಥಕ್ಕೆ ಹಾಗೂ ಬಾಕಿ ಉಳಿದಿರುವ ಪ್ರಕರಣಗಳ ವಿರುದ್ಧ ಕ್ರಮ ವಹಿಸಲು ಹೆಚ್ಚು ಒತ್ತು ನೀಡಬೇಕು. ಪರಿಶಿಷ್ಟರ ಮೇಲೆ ಅಮಾನವೀಯ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿಯಲ್ಲಿ ನಡೆದಿರುವ ವಿಷ ಪ್ರಾಶನ ಪ್ರಕರಣವು ತುಂಬಾ ಗಂಭೀರ ಪ್ರಕರಣವಾಗಿದ್ದು, ಸಂತ್ರಸ್ತ ಕುಟುಂಬದವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ಇಲಾಖೆ ವತಿಯಿಂದ ಶಿಬಿರಗಳನ್ನು ಆಯೋಜಿಸಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು. ಸಂತ್ರಸ್ತರ ಆರೋಗ್ಯ ತಪಾಸಣೆಯನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ತಿಳಿಸಿದರು.

ಸೂಕ್ತ ದಾಖಲೆಗಳನ್ನು ಒದಗಿಸಿ: ಕೊಳ್ಳೇಗಾಲ ತಾಲೂಕು ನರೀಪುರ ಗ್ರಾಮದಲ್ಲಿ ಪರಿಶಿಷ್ಟರಿಗೆ ನಿವೇಶನ ನೀಡಿದ್ದು, ಸೂಕ್ತ ದಾಖಲೆಗಳನ್ನು ತಾಲೂಕು ತಹಶೀಲ್ದಾರ್‌ ಅವರು ಒದಗಿಸಬೇಕು. ಸುಳ್ವಾಡಿ ಪ್ರಕರಣದಲ್ಲಿ ನೊಂದ ಕುಂಟುಂಬಗಳಿಗೆ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಯೋಜನೆಯಡಿ ಸಂತ್ರಸ್ತ ಕುಟುಂಬಕ್ಕೆ 2 ಎಕರೆ ಜಮೀನು ನೀಡಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಸೂಚನೆ ನೀಡಿದರು.

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಸದಸ್ಯ ಕೆಂಪನಪಾಳ್ಯ ಸಿದ್ದರಾಜು, ಆಸಿಫ್ ಉಲ್ಲಾ, ಗುಂಡ್ಲುಪೇಟೆ ಸಿದ್ದರಾಜು, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಜೆ. ಉದೇಶ್‌, ಉಪವಿಭಾಗಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ

Naxal-Vikram-Sister

Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

Russia-Putin

‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಅಣ್ವಸ್ತ್ರ ದಾಳಿ ಎಚ್ಚರಿಕೆ!

Peetabail-Naxal-encounter-Vikram

Encounter: ನಕ್ಸಲ್‌ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್‌ ಮಾರುವೇಷ’!

Frud

Mangaluru: “ಡ್ರೀಮ್‌ ಡೀಲ್‌’ ಲಕ್ಕಿ ಡ್ರಾ: ವಂಚನೆ ಜಾಲತಾಣದಲ್ಲಿ ವೀಡಿಯೋ ವೈರಲ್‌

Naxal-Subramanya

Subhramanya: 9 ತಿಂಗಳ ಹಿಂದೆ ಪೊಲೀಸರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದನೇ ವಿಕ್ರಂ ಗೌಡ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ

Naxal-Vikram-Sister

Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

Russia-Putin

‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಅಣ್ವಸ್ತ್ರ ದಾಳಿ ಎಚ್ಚರಿಕೆ!

Peetabail-Naxal-encounter-Vikram

Encounter: ನಕ್ಸಲ್‌ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್‌ ಮಾರುವೇಷ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.