ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ


Team Udayavani, Sep 13, 2019, 11:55 AM IST

cn-tdy-1

ಸಮೀಪದ ಲೊಕ್ಕನಹಳ್ಳಿಯಲ್ಲಿ ನಿರ್ಮಿಸಲಾಗಿದ್ದ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಶಾಸಕ ಆರ್‌. ನರೇಂದ್ರ ಉದ್ಘಾಟಿಸಿದರು. ಜಿಪಂ ಸದಸ್ಯೆ ಮರಗದಮಣಿ, ತಾಪಂ ಅಧ್ಯಕ್ಷ ರಾಜೇಂದ್ರ ಇದ್ದರು.

ಹನೂರು: ಸಮೀಪದ ಲೊಕ್ಕನಹಳ್ಳಿಯಲ್ಲಿ ನರೇಗಾ ಯೋಜನೆಯಡಿ 13.15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಶಾಸಕ ಆರ್‌. ನರೇಂದ್ರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಗ್ರಾಮದ 1ನೇ ಅಂಗನವಾಡಿ ಕೇಂದ್ರವು ಕಳೆದ ಹಲವು ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿನ ಕಟ್ಟಡದಲ್ಲಿ ನಡೆಯುತ್ತಿತ್ತು. ಆದರೆ ಸಮರ್ಪಕ ಮೂಲ ಸೌಕರ್ಯ ಇರಲಿಲ್ಲ. ಇದರ ಜತೆಗೆ ಕಳೆದ 3 ವರ್ಷಗಳಿಂದೀಚೆ ಕಟ್ಟಡ ಶಿಥಿಲಾ ವಸ್ಥೆ ಯ ಹಂತ ತಲುಪಿತ್ತು. ಇದರಿಂದ ಮಕ್ಕಳು ಹಾಗೂ ನೌಕರರು ತೊಂದರೆ ಪಡುವಂತಾಗಿತ್ತು ಎಂದರು.

ಮೂಲ ಸೌಕರ್ಯ ಕಲ್ಪಿಸಲಾಗಿದೆ: ಕಟ್ಟಡ ನಿರ್ಮಿಸಿ ಕೊಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಈ ಬಗ್ಗೆ ಗ್ರಾಪಂ ಅಧಿಕಾರಿಗಳಿಗೆ ಅಗತ್ಯ ಕ್ರಮವ ಹಿಸುವಂತೆ ಸೂಚನೆ ನೀಡಲಾಗಿತ್ತು. ಈ ದಿಸೆಯಲ್ಲಿ ನರೇಗಾ ಯೋಜನೆಯಡಿಯಲ್ಲಿ ಕಟ್ಟಡ ನಿರ್ಮಿಸ ಲಾಗಿದ್ದು, ಪ್ರತ್ಯೇಕ ಅಡುಗೆ ಕೋಣೆ, ಶೌಚಗೃಹ ಸೇರಿದಂತೆ ಇನ್ನಿತರೆ ಮೂಲ ಸೌಕರ್ಯವನ್ನು ಕಲ್ಪಿಸ ಲಾಗಿದೆ. ಇದರಿಂದ ಮಕ್ಕಳ ಮಕ್ಕಳ ಶಿಕ್ಷಣಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಗುಣಮಟ್ಟದ ಶಿಕ್ಷಣ ನೀಡಿ: ಬಳಿಕ ಸರ್ಕಾರಿ ಶಾಲೆಗೆ ತೆರಳಿದ ಶಾಸಕರು ಆಂಗ್ಲ ಮಾಧ್ಯಮದ ಎಲ್ಕೆಜಿ ಕೇಂದ್ರಕ್ಕೆ ತೆರಳಿ ಅಲ್ಲಿನ ಶಿಕ್ಷಕರಿಂದ ಮಕ್ಕಳ ದಾಖಲಾತಿ ಹಾಗೂ ಶಿಕ್ಷಣದ ಬಗ್ಗೆ ಮಾಹಿತಿ ಪಡೆದುಕೊಂಡು ಗುಣಮಟ್ಟದ ಶಿಕ್ಷಣ ನೀಡುವಂತೆ ಸೂಚಿಸಿದರು.

ಶೌಚಗೃಹ ಉದ್ಘಾಟನೆ: ಗ್ರಾಪಂನ 14ನೇ ಹಣಕಾಸು ಯೋಜನೆಯಡಿ 1.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿ ಸಲಾಗಿದ್ದ ಸಾರ್ವಜನಿಕ ಶೌಚ ಗೃಹವನ್ನು ಜಿಪಂ ಸದಸ್ಯೆ ಮರ ಗದಮಣಿ ಉದ್ಘಾಟಿಸಿ ದರು. ಶಾಸಕರು ಸ್ವಚ್ಛತೆ ಕಾಪಾಡು ವುದರ ಜತೆಗೆ ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಗ್ರಾಪಂ ಅಧಿಕಾರಿಗಳಿಗೆ ಸೂಚಿಸಿದರು.

ಹುತ್ತೂರು ಶಾಲೆಗೆ ಭೇಟಿ: ಬಳಿಕ ಹುತ್ತೂರು ಗ್ರಾಮಕ್ಕೆ ತೆರಳಿದ ಶಾಸಕರು ಅಲ್ಲಿನ ಉನ್ನತೀಕರಿಸಿದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಪ್ರಗತಿ ಹಂತದಲ್ಲಿರುವ ಶಾಲಾ ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿ ಸಂಬಂಧಪಟ್ಟವರಿಗೆ ಕಾಮಗಾರಿ ಗುಣಮಟ್ಟವನ್ನು ಕಾಯ್ದು ಕೊಳ್ಳುವುದರ ಮೂಲಕ ಬೇಗ ಪೂರ್ಣ ಗೊಳಿಸಬೇಕು ಎಂದು ಸೂಚಿಸಿದರು.

ಇದೇ ವೇಳೆ ಬಿಸಿಯೂಟ ಸವಿಯುುತ್ತಿದ್ದ ವಿದ್ಯಾ ರ್ಥಿಗಳ ಬಳಿ ತೆರಳಿ ಊಟದ ರುಚಿ, ಶುಚಿಯ ಬಗ್ಗೆ ಮಕ್ಕಳಿಂದ ಅನಿಸಿಕೆ ಪಡೆದುಕೊಂಡರು. ಈ ವೇಳೆ ಮಕ್ಕಳು ಬಿಸಿಯೂಟ ಉತ್ತಮವಾಗಿ ನೀಡುತ್ತಿದ್ದಾರೆ ಸರ್‌ ಎಂಬ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ತಾಪಂ ಅಧ್ಯಕ್ಷ ರಾಜೇಂದ್ರ, ಸದಸ್ಯೆ ಶಿವಮ್ಮ, ಲೊಕ್ಕನಹಳ್ಳಿ ಗ್ರಾಪಂ ಅಧ್ಯಕ್ಷ ರಂಗಶೆಟ್ಟಿ, ಸದಸ್ಯರಾದ ಮಲ್ಲಯ್ಯ, ರುದ್ರಪ್ಪ, ಸನ್ನಿಯಪ್ಪ, ಇತರರು ಇದ್ದರು.

1.30 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿಪೂಜೆ:

ಲೊಕ್ಕನಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಲೋಕೋ ಪಯೋಗಿ ಇಲಾಖಾ ಎಸ್‌ಇಪಿ, ಟಿಎಸ್‌ಪಿ ಯೋಜನೆಯಡಿ ಮಂಜೂರಾಗಿದ್ದ 1.30 ಕೋಟಿ ರೂ. ವೆಚ್ಚದಲ್ಲಿನ ಸಿ.ಸಿ. ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಆರ್‌. ನರೇಂದ್ರ ಭೂಮಿಪೂಜೆ ನೆರವೇರಿಸಿದರು.

ಕ್ಷೇತ್ರ ವ್ಯಾಪ್ತಿಯ ಕಂಡಯ್ಯನಪಾಳ್ಯ, ಬೂದಿ ಪಡಗ, ಪಿ.ಜಿ ಪಾಳ್ಯ, ಹುತ್ತೂರು ಹಾಗೂ ಇನ್ನಿತರೆ ಗ್ರಾಮಗಳಲ್ಲಿ ಭೂಮಿಪೂಜೆ ನೆರವೇರಿಸಿದ ಬಳಿಕ ಮಾತನಾಡಿ, ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ 400 ಕ್ಕೂ ಹೆಚ್ಚು ಗ್ರಾಮಗಳಿದ್ದು, ಗಿರಿಜನರು, ಪರಿಶಿಷ್ಟ ಜಾತಿ, ಪಂಗಡ, ಅಲ್ಪ ಸಂಖ್ಯಾತರು ಸೇರಿದಂತೆ ಇನ್ನು ಹಲವು ವರ್ಗದ ಜನರಿದ್ದಾರೆ ಎಂದರು.

ಈಗಾಗಲೇ ಕಳೆದ ಅವಧಿಯಲ್ಲಿ ಎಸ್‌ಇಪಿ, ಟಿಎಸ್‌ಪಿ ಯೋಜನೆಯಡಿ ಗಿರಿಜನರು ಹಾಗೂ ಪರಿಶಿಷ್ಟ ಜಾತಿ, ಪಂಗಡದ ಜನರು ವಾಸಿಸುವ ಕಾಲನಿಗಳಲ್ಲಿ ಶೇಕಡ 80ರಷ್ಟು ಸಿ.ಸಿ. ರಸ್ತೆ ಹಾಗೂ ಚರಂಡಿಯನ್ನು ನಿರ್ಮಿಸಲಾಗಿದ್ದು, ಇನ್ನುಳಿದ ಶೇ.20ರಷ್ಟು ಗ್ರಾಮದ ಕೆಲವು ಕಾಲನಿಗಳಲ್ಲಿ ಸಿ.ಸಿ. ಹಾಗೂ ಚರಂಡಿ ರಸ್ತೆ ನಿರ್ಮಿಸಿರಲಿಲ್ಲ. ಈ ಬಗ್ಗೆ ಸರ್ಕಾರಕ್ಕೆ ತಂದು ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು. ಈ ದಿಸೆಯಲ್ಲಿ ಲೊಕ್ಕನಹಳ್ಳಿ ಜಿಪಂ ಕ್ಷೇತ್ರ ವ್ಯಾಪ್ತಿಗೆ 1.30 ಕೋಟಿ ರೂ. ಅನುದಾನ ಮಂಜೂರಾಗಿತ್ತು. ಇದೀಗ ಭೂಮಿಪೂಜೆ ನೆರವೇರಿಸಲಾಗುತ್ತಿದೆ ಎಂದು ತಿಳಿಸಿದರು.

ಗುಣಮಟ್ಟ ಕಾಯ್ದುಕೊಳ್ಳಿ: ಕಾಮಗಾರಿಯ ಜವಾ ಬ್ದಾರಿ ಹೊತ್ತವರು ಗುಣಮಟ್ಟವನ್ನು ಕಾಯ್ದು ಕೊಳ್ಳುವುದರ ಮೂಲಕ ಬೇಗ ಪೂರ್ಣ ಗೊಳಿಸ ಬೇಕು. ಒಂದು ವೇಳೆ ಕಾಮಗಾರಿ ಕಳಪೆಯಿಂದ ಕೂಡಿದ್ದರೆ ಬಿಲ್ ತಡೆಹಿಡಿಯ ಲಾಗುವುದು. ಆಗಾಗಿ ಗುತ್ತಿಗೆದಾರರು ಎಚ್ಚರ ವಹಿಸಬೇಕು. ಈ ಬಗ್ಗೆ ಅಧಿಕಾರಿಗಳು ನಿಗಾ ವಹಿಸಬೇಕು. ಜತೆಗೆ ಗ್ರಾಮಸ್ಥರು ಕಾಮಗಾರಿಯ ವೇಳೆ ಪರಿಶೀಲನೆ ನಡೆಸಬೇಕು. ಕಾಮಗಾರಿ ಕಳಪೆಯಿಂದ ಕೂಡಿದ್ದರೆ ನನ್ನ ಹಾಗೂ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಹೇಳಿದರು. ಜಿಪಂ ಸದಸ್ಯೆ ಮರಗದಮಣಿ, ತಾಪಂ ಅಧ್ಯಕ್ಷ ರಾಜೇಂದ್ರ, ಸದಸ್ಯೆ ಶಿವಮ್ಮ, ಗ್ರಾಪಂ ಅಧ್ಯಕ್ಷೆ ಪುಷ್ಪಾ, ಸದಸ್ಯರಾದ ದಾಸೇಗೌಡ, ಪುಟ್ಟಮ್ಮ, ಪಿಡಬ್ಯುಡಿ ಇಇ ರಮೇಶ್‌, ಎಇಇ ಮಹದೇವ ಸ್ವಾಮಿ, ಗುತ್ತಿಗೆದಾರರಾದ ನಾತೀಕ್‌ ಪಾಷಾ, ಶಿವಶಂಕರ, ಶಾಂತರಾಜು ಮುಖಂಡ ರಾದ ಕೆ.ಸಿ ಮಾದೇಶ್‌, ರವಿಕುಮಾರ್‌ ಇದ್ದರು.

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.