ಪಠ್ಯಕ್ರಮದಲ್ಲಿ ಬೌದ್ಧ ಧರ್ಮ ತೆಗೆದಿರುವುದು ಅಕ್ಷಮ್ಯ: ಧ್ರುವನಾರಾಯಣ
Team Udayavani, Feb 21, 2021, 1:41 PM IST
ಯಳಂದೂರು: 6ನೇ ತರಗತಿಯ ಸಮಾಜ ವಿಜ್ಞಾನ ವಿಷಯದಲ್ಲಿ ಹೊಸ ಧರ್ಮಗಳ ಉದಯ ಅಧ್ಯಾಯದ ಪಠ್ಯದಲ್ಲಿದ್ದ ಬೌದ್ಧಧರ್ಮ ಪರಿಚಯದ ಕೆಲವು ಅಂಶಗಳನ್ನು ಬೋಧನೆ, ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸ ಬಾರದು ಎಂಬ ಸರ್ಕಾರದ ಸುತ್ತೋಲೆ, ಅಕ್ಷಮ್ಯ ಅಪರಾಧವಾಗಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಆರೋಪಿಸಿದರು.
ಅವರು ಈ ಬಗ್ಗೆ ಯರಿಯೂರು ಗ್ರಾಮದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೌದ್ಧ ಹಾಗೂ ಜೈನ ಧರ್ಮಗಳು ಭಾರತದ ಕಳಶ ಗಳಿದ್ದಂತೆ. ಪ್ರಧಾನಿ ನರೇಂದ್ರ ಮೋದಿವಿಶ್ವಸಂಸ್ಥೆಯ 74ನೇ ಸಮಾವೇಶದಲ್ಲಿ ಭಾಗವಹಿಸಿ ನಮ್ಮ ದೇಶ ಬುದ್ಧನನ್ನು ಕೊಟ್ಟಿದೆ, ಯುದ್ಧವನ್ನಲ್ಲ ಎಂಬ ಸಂದೇಶ ನೀಡಿದ್ದರು. ವಿದೇಶಗಳಿಗೆ ಹೋದಾಗ ಬುದ್ಧ ಇವರು ಬುದ್ಧನೊಂದಿಗೆಗುರುತಿಸಿಕೊಳ್ಳುತ್ತಾರೆ. ಆದರೆ, ತಮ್ಮದೇ ದೇಶದ ಪಠ್ಯದಿಂದ ಇದನ್ನು ಕೈಬಿಟ್ಟಿರುವುದು ಯಾವ ಪುರುಷಾರ್ಥಕ್ಕೆ. ಶಾಂತಿ, ಸಹಬಾಳ್ವೆ, ಸಹಿಷ್ಣುತೆಗೆ ಬೌದ್ಧ ಧರ್ಮದಿಂದ ಇಡೀ ಜಗತ್ತೆ ಪಾಠ ಕಲಿತಿದೆ. ಪಠ್ಯದಲ್ಲೂ ಆರ್‌ಎಸ್‌ಎಸ್ ಮನಸ್ಥಿತಿ ನುಸುಳಿದಂತೆ ಕಾಣುತ್ತಿದೆ ಎಂದರು.
ನಮ್ಮದು ಪ್ರಜಾಪ್ರಭುತ್ವ, ಜಾತ್ಯತೀಯ ರಾಷ್ಟ್ರವಾಗಿದ್ದು ಎಲ್ಲವನ್ನೂ ಸಮನಾಗಿ ಕಾಣುವ ಆಲೋಚನೆ ಸರ್ಕಾರಕ್ಕೆ ಇದ್ದಂತಿಲ್ಲ ಎಂಬುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ. ಮೆಕಾಲೆ ಶಿಕ್ಷಣ ನೀತಿಯನ್ನು ವಿರೋಧಿಸುತ್ತಿರುವ ಇವರ ಮನಸ್ಥಿತಿ ಗುರುಕುಲ ಮಾದರಿಯನ್ನು ಮತ್ತೆ ಪರಿಚಯಿಸುವ ಹುನ್ನಾರಗಳು ನಡೆಯುತ್ತಿವೆ. ಪಠ್ಯದಿಂದ ಶಿಕ್ಷಣ ಇಲಾಖೆಯ ಈ ವಿಷಯವನ್ನು ಕೈಬಿಟ್ಟಿರುವುದು ಖಂಡನೀಯವಾಗಿದೆ. ಇದನ್ನು ಪಠ್ಯಕ್ಕೆ ಸೇರಿಸಬೇಕು ಇಲ್ಲವಾದಲ್ಲಿ ಮುಂದಿನ ದಿನ ಗಳಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಕೃಷಿ ಕಾಲೇಜಿಗೆ 25 ಕೋಟಿ ರೂ. ಸ್ವಾಗತ: ಚಾಮರಾಜನಗರದಲ್ಲಿ ಕಳೆದ 3 ವರ್ಷಗಳ ಹಿಂದೆ ಕೃಷಿ ಕಾಲೇಜಿಗೆ 75 ಎಕರೆ ಜಮೀನು ಮಂಜೂರಾಗಿತ್ತು. ಈಗ ರಾಜ್ಯ ಸರ್ಕಾರ ಇದಕ್ಕೆ 25 ಕೋಟಿ ರೂ. ಬಿಡುಗಡೆ ಮಾಡಿದ್ದು ಇದಕ್ಕೆ ನಾನು ವೈಯುಕ್ತಿಕವಾಗಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಇದರೊಂದಿಗೆ ಜಿಲ್ಲೆಯಲ್ಲಿ ಕಾನೂನು ಕಾಲೇಜಿನ ಕಟ್ಟಡ ನಿರ್ಮಾಣಕ್ಕೂ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.
ಮಾಜಿ ಶಾಸಕ ಎಸ್. ಬಾಲರಾಜು, ಜಿಪಂ ಸದಸ್ಯ ಜೆ. ಯೋಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್ .ವಿ. ಚಂದ್ರು, ಆಲ್ದೂರು ರಾಜಶೇಖರ್, ಕೃಷ್ಣಾಪುರ ದೇವರಾಜು ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.