ಗುಂಡ್ಲುಪೇಟೆ: ಮೊಲ ಬೇಟೆ; ಇಬ್ಬರ ಬಂಧನ
Team Udayavani, Feb 22, 2022, 7:46 PM IST
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನದ ಕುಂದಕೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕಾಡುಪ್ರಾಣಿ ಮೊಲ ಬೇಟೆಯಾಡಿ ಮಾಂಸದಡುಗೆ ತಯಾರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಅಣ್ಣೂರುಕೇರಿ ಗ್ರಾಮದ ಮಹೇಶ ಮತ್ತು ಕೋಡಹಳ್ಳಿಯ ಕುಮಾರ ಬಂಧಿತರು. ಫೆ.22 ಬೆಳಗಿನ ಜಾವ 3.30ರ ಸಮಯದಲ್ಲಿ ಕುಂದುಕರೆ ವಲಯದ ಕುಂದುಕರೆ ಶಾಖೆಯ, ಕಡಬೂರು ಬೀಟ್‍ನ ಕುರುಬರಹುಂಡಿ ಮಡಿವಾಳಪ್ಪನವರ ಜಮೀನಿನ ಹತ್ತಿರ ಇಬ್ಬರು ವ್ಯಕ್ತಿಗಳು ಕಾಡು ಪ್ರಾಣಿಯಾದ ಮೊಲ ಮಾಂಸವನ್ನು ಬೇಯಿಸುತ್ತಿದ್ದರು.
ಈ ಬಗ್ಗೆ ದೊರೆತ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ನನ್ನ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಶ್ರೀನಿವಾಸನಾಯಕ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಬಂಧಿತ ಆರೋಪಿಗಳಿಂದ ದ್ವಿಚಕ್ರ ವಾಹನ, ನಾಡ ಬಂದೂಕು, ತಲೆ ಬ್ಯಾಟರಿ, ಬಿಳಿ ಬಣ್ಣದ ಪ್ಲಾಸ್ಟಿಕ್ ಬ್ಯಾಗ್, ಮಾಂಸ ಬೇಯಿಸಿದ ದೊಡ್ಡ ಪಾತ್ರೆ, ಅನ್ನ ಬೇಯಿಸಿದ ಚಿಕ್ಕ ಪಾತ್ರೆ-1 ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ಜಿ.ಎಂ.ಎಫ್.ಸಿ. ನ್ಯಾಯಾಲಯ, ಗುಂಡ್ಲುಪೇಟೆ ರವರ ಮುಂದೆ ಹಾಜರುಪಡಿಸಲಾಗಿದೆ ಎಂದು ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಪರಮೇಶ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.