ಧ್ರುವನಾರಾಯಣ ಪರ ರಮೇಶ್ ಮತಯಾಚನೆ
Team Udayavani, Apr 16, 2019, 3:00 AM IST
ಕೊಳ್ಳೇಗಾಲ: ಬಡವರ ಬಡತನ ಹೋಗಲಾಡಿಸುವ ಸಲುವಾಗಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿರವರು ಪ್ರತಿ ವರ್ಷ ಬಡವರಿಗೆ 72 ಸಾವಿರ ರೂ ನೀಡಲು ಪ್ರನಾಳಿಕೆಯಲ್ಲಿ ಘೋಷಣೆ ಮಾಡಿದ್ದು ಎಲ್ಲಾ ಬಡವರ್ಗದ ಜನರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲ ನೀಡಬೇಕೆಂದು ಮಾಜಿ ನಗರಸಭಾ ಅಧ್ಯಕ್ಷ ರಮೇಶ್ ಹೇಳಿದರು.
ನಗರದ ಮೂರು ಮತ್ತು ನಾಲ್ಕನೇ ವಾರ್ಡ್‌ನ ಭೀಮನಗರ ಬಡವಾಣೆೆಯಲ್ಲಿ ಸೋಮವಾರ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಹಾಗೂ ಸಂಸದ ಆರ್.ಧ್ರುವನಾರಾಯಣ ಪರ ಮನೆಮನೆಗೆ ತೆರಳಿ ಕಾಂಗ್ರೆಸ್ ಕರಪತ್ರ ಹಂಚಿ ಮತಯಾಚನೆ ಮಾಡಿದ ಅವರು, ಬಡವರ ಪಕ್ಷ ಕಾಂಗ್ರೆಸ್ ಆಗಿದ್ದು ಕಾಂಗ್ರೆಸ್ ಅಭ್ಯರ್ಥಿಗೆ ಹ್ಯಾಟ್ರಿಕ್ ಗೆಲುವು ತಂದು ಕೊಡಬೇಕು ಎಂದರು.
ನಗರಸಭೆ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಗರದ 31 ವಾರ್ಡ್‌ಗಳಿಗೂ ಕುಡಿಯುವ ನೀರು ರಸ್ತೆ ಚರಂಡಿ ನಿರ್ಮಾಣ ಸ್ವಚ್ಛತೆ ಕುಡಿಯುವ ನೀರು ಪೂರೈಕೆ ಮೊದಲಾದ ಮೂಲಭೂತ ಸೌಕರ್ಯಗಳಿಗೆ ಪ್ರಥಮ ಆದ್ಯತೆ ನೀಡಿ ಉತ್ತಮ ಸೇವೆ ಸಲ್ಲಿಸಿದ್ದೇನೆ, ನಂತರ ನಗರಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಿದ್ದ 3ನೇ ವಾರ್ಡ್‌ನಿಂದ ನನ್ನ ಪತ್ನಿ ಸ್ಪರ್ಧೆ ಮಾಡಿ ಗೆದ್ದಿದ್ದು ವಾರ್ಡ್ ಅನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.
ಮಾಜಿ ಸೆಸ್ಕ್ ನಿರ್ದೇಶಕ ಡಿ.ಸಿದ್ದರಾಜು ಮಾತನಾಡಿ, ದಲಿತರು ಹಲವಾರು ವರ್ಷಗಳಿಂದ ಕಾಂಗ್ರೆಸ್ ಬೆಂಬಲಿಸಿಕೊಂಡು ಬಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಸದೀನ ದಲಿತರಿಗೆ ಬಡವರಿಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ ಮತ್ತು ಸಾಮಾಜಿಕ ನ್ಯಾಯವನ್ನು ತಂದುಕೊಟ್ಟಿದ್ದು ಈ ಬಾರಿ ಲೋಕಸಭಾ ಚುನಾವಣೆ ಏ.18 ರಂದು ನಡೆಯಲಿದ್ದು ಮತದಾರರು ಧ್ರುವನಾರಾಯಣಗೆ ಜಯತಂದು ಕೋಡಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ನಗರಸಭಾ ಸದಸ್ಯರಾದ ಮಂಜುನಾಥ, ರಾಘವೇಂದ್ರ, ಎ.ಪಿ.ಶಂಕರ್, ಸುರೇಶ, ಶಾಂತರಾಜು, ಮನೋಹರ್, ಕಲೀಂಉಲ್ಲಾಖಾನ್, ಮಾಜಿ ಸದಸ್ಯರಾದ ಅಕ್ಮಲ್‌ಪಾಷಾ, ಹರ್ಷ, ನಂಜುಂಡ, ಶಾಂತರಾಜು, ಮಲ್ಲಿಕಾರ್ಜುನ, ಕೃಷ್ಣಯ್ಯ, ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ನಾಗರಾಜು, ಮುಖಂಡರಾದ ಕಿರಣ್, ಆನಂದ್, ನಾಗರಾಜು ಇತರರು ಇದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.