ಬ್ರಿಟಿಷರ ಕಾನೂನು ತ್ಯಜಿಸಿ ಸಂವಿಧಾನ ರಚಿಸಿದ ದಿನ


Team Udayavani, Jan 27, 2019, 11:21 AM IST

chamaraj.jpg

ಚಾಮರಾಜನಗರ: ರಾಜ ಮಹಾರಾಜರು ಹಾಗೂ ಪಾಳೇಯಗಾರರ ಸಂಸ್ಥಾನಗಳಲ್ಲಿ ಹರಿದು ಹಂಚಿ ಹೋಗಿದ್ದ ಭಾರತವನ್ನು ಒಗ್ಗೂಡಿಸಿ ಒಕ್ಕೂಟ ರಾಷ್ಟ್ರವ ನ್ನಾಗಿ ಮಾಡಿದ ಗಣರಾಜ್ಯೋತ್ಸವ ದಿನ ಭಾರತದ ಇತಿಹಾಸದಲ್ಲಿ ಮಹತ್ವದ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಹೇಳಿದರು.

ನಗರದ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಜಿಲ್ಲಾಡ ಳಿತದಿಂದ ಆಯೋಜಿಸಿದ್ದ 70ನೇ ಗಣರಾಜೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಬ್ರಿಟಿಷರ ವಿರುದ್ಧ 90 ವರ್ಷಗಳು ಹೋರಾಟ ನಡೆಸಿದ ಫ‌ಲವಾಗಿ 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿತು. 26 ಜನವರಿ 1950ರಲ್ಲಿ ಬ್ರಿಟಿಷರ ಕಾನೂನು ಗಳನ್ನು ತ್ಯಜಿಸಿ ಅಂಬೇಡ್ಕರ್‌ ರಚಿಸಿದ ಸಂವಿಧಾನವನ್ನು ಅಳವಡಿಸಿಕೊಂಡ ದಿನ. ನಮ್ಮ ಸಂವಿಧಾನ ಸಮಾನತೆ, ಸೋದರತ್ವ, ಸಾಮಾಜಿಕ ನ್ಯಾಯದ ಮೇಲೆ ರಚನೆ ಯಾಗಿದೆ. 700ಕ್ಕೂ ಹೆಚ್ಚು ರಾಜರ ಆಳ್ವಿಕೆಯಲ್ಲಿ ಹಂಚಿ ಹೋಗಿದ್ದ 6 ಸಾವಿರಕ್ಕೂ ಹೆಚ್ಚು ಭಾಷಾ ವೈವಿಧ್ಯತೆ ಹೊಂದಿದ್ದ ದೇಶವನ್ನು ಆಡಳಿತಾತ್ಮಕವಾಗಿ ಒಗ್ಗೂಡಿ ಸುವ ಕಾರ್ಯ ಸುಲಭವಾಗಿರಲಿಲ್ಲ. ವೈವಿಧ್ಯತೆ ನಡುವೆ ಏಕತೆ ಸ್ಥಾಪಿಸಿ ಎಲ್ಲರಿಗೂ ಒಂದೇ ತರಹದ ಹಕ್ಕು ಮತ್ತು ಕರ್ತವ್ಯಗಳನ್ನು ಪ್ರತಿಪಾದಿಸುವ ಸಂವಿಧಾನ ‌ವನ್ನು ಅಂಬೇಡ್ಕರ್‌ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಲಮನ್ನಾ: ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಾಧನೆಗಳನ್ನು ತಿಳಿಸಿದ ಅವರು, ಸರ್ಕಾರದ ಮಹತ್ತರ ಯೋಜನೆಯಾದ ರೈತರ ಬೆಳೆ ಸಾಲ ಮನ್ನಾ ಯೋಜನೆಯಲ್ಲಿ ಸಹಕಾರ ಸಂಘಗಳಿಗೆ 191 ಕೋಟಿ ಮತ್ತು ಬ್ಯಾಂಕ್‌ಗಳಿಗೆ 131 ಕೋಟಿ ರೂ. ಬಿಡುಗಡೆಯಾಗ್ದಿದು, ಈಗಾಗಲೇ ಶೇಕಡಾ 90ರಷ್ಟು ಡೇಟಾ ಎಂಟ್ರಿ ಮತ್ತು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ ಎಂದರು.

ಕೃಷಿ ಭಾಗ್ಯ ಯೋಜನೆ, ಕೃಷಿ ಯಾಂತ್ರೀಕರಣ, ಲಘು ನೀರಾವರಿ, ಮಣ್ಣು ಆರೋಗ್ಯ ಅಭಿಯಾನ ಮುಂತಾದ ಯೋಜನೆಗಳಡಿ ರೈತರಿಗೆ ಕಾಲಕಾಲಕ್ಕೆ ಉಪಯೋಗವಾಗುವಂತಹ 376.49 ಲಕ್ಷ ರೂ.ವೆಚ್ಚದಲ್ಲಿ 486 ಕೃಷಿ ಹೊಂಡಗಳ ನಿರ್ಮಾಣ, 229.38 ಲಕ್ಷ ರೂ.ವೆಚ್ಚದಲ್ಲಿ 2889 ವಿವಿಧ ಕೃಷಿ ಯಂತ್ರೋಪಕರಣಗಳ ವಿತರಣೆ, 79.76 ಲಕ್ಷ ರೂ.ಮೌಲ್ಯದ 305 ರೈತರಿಗೆ ಲಘು ನೀರಾವರಿ ಉಪಕರಣ ವಿತರಣೆ ಮಾಡಲಾಗಿದೆ ಎಂದರು.

ಉದ್ಯೋಗ ಖಾತ್ರಿ: ಉದ್ಯೋಗ ಖಾತ್ರಿಯಡಿ ಜಿಲ್ಲೆಗೆ 23.53 ಲಕ್ಷ ಮಾನವ ದಿನಗಳ ಸೃಜನೆಯ ಗುರಿಯನ್ನು ನಿಗದಿಪಡಿಸಲಾಗಿದೆ. ಈ ಪೈಕಿ 16.86 ಲಕ್ಷ ಮಾನವ ದಿನ ಸೃಜಿಸಲಾಗಿದ್ದು, 64.12 ಕೋಟಿ ರೂ.ವ್ಯಯಿಸಲಾಗಿದೆ ಎಂದು ತಿಳಿಸಿದರು.

ಮಾತೃ ಪೂರ್ಣ: ಮಾತೃ ಪೂರ್ಣ ಯೋಜನೆಯಡಿ 5,009 ಗರ್ಭಿಣಿಯರು ಮತ್ತು 6,114 ಬಾಣಂತಿ ಯರು ಹಾಗೂ 1,421 ಅಂಗನವಾಡಿ ಕಾರ್ಯಕರ್ತೆ ಯರು ಮತ್ತು 1,371 ಅಂಗನವಾಡಿ ಸಹಾಯಕಿ ಯರು ಈ ಯೋಜನೆಯ ಪ್ರಯೋಜನ ಪಡೆಯು ತ್ತಿದ್ದಾರೆ. ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಯಡಿ ಗರ್ಭಿಣಿಯರಿಗೆ ಆನ್‌ಲೈನ್‌ ಅರ್ಜಿಗಳ ಮೂಲಕ 5 ಸಾವಿರ ಸಹಾಯಧನ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ 8,454 ಫ‌ಲಾನುಭವಿಗಳು ಆರ್ಥಿಕ ಪ್ರಯೋಜನ ಪಡೆದಿದ್ದಾರೆ. ಅಲ್ಲದೇ ಮುಖ್ಯ ಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯಾದ ಮಾತೃಶ್ರೀ ಯೋಜನೆಯಡಿ ಆದ್ಯತಾ ಕುಟುಂಬದ ಫ‌ಲಾನುಭವಿಗಳಿಗೆ 6 ಸಾವಿರ ಸಹಾಯಧನ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಸಮಾರಂಭದಲ್ಲಿ ಸಂಸದ ಆರ್‌. ಧ್ರುವ ನಾರಾಯಣ, ಜಿಪಂ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಜೆ. ಯೋಗೀಶ್‌, ತಾಪಂ ಅಧ್ಯಕ್ಷೆ ದೊಡ್ಡಮ್ಮ, ಉಪಾಧ್ಯಕ್ಷ ಬಸವಣ್ಣ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಎಸ್ಪಿ ಧರ್ಮೇಂದರ್‌ ಕುಮಾರ್‌ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್‌, ಜಿಪಂ ಸಿಇಒ ಡಾ. ಕೆ. ಹರೀಶ್‌ ಕುಮಾರ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

Mangaluru: ಕರಾವಳಿ ಉತ್ಸವ; ಅರಣ್ಯ ಅನುಭವ!

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

10(1

Mangaluru: ನಗರದ 18 ಕಡೆಗಳಲ್ಲಿ ಪೇ ಪಾರ್ಕಿಂಗ್‌

9(1

Kundapura: ಟಿಟಿ ರೋಡ್‌ನ‌ಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.