ವಹ್ನಿಕುಲ ಕ್ಷತ್ರಿಯಕ್ಕೆ ಅಭಿವೃದ್ಧಿಗೆ ಮಂಡಳಿಗೆ ಮನವಿ
Team Udayavani, Feb 18, 2019, 7:27 AM IST
ಹನೂರು: ಕಳೆದ ಬಜೆಟ್‌ನಲ್ಲಿ ಸವಿತಾ ಸಮಾಜ ಹಾಗೂ ಕ್ರೈಸ್ತರಿಗೆ ಅಭಿವೃದ್ಧಿ ಮಂಡಳಿ ರಚನೆ ಘೋಷಣೆ ಮಾಡಲಾಗಿದೆ. ಹಾಗೆಯೇ ವಹ್ನಿಕುಲ ಕ್ಷತ್ರಿಯಕ್ಕೂ ಅಭಿವೃದ್ಧಿ ಮಂಡಳಿ ರಚಿಸುವಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಗೆ ಮನವಿ ಮಾಡಲಾಗುವುದು ಎಂದು ಸಂಸದ ಆರ್. ಧ್ರುವನಾರಾಯಣ್ ಹೇಳಿದರು.
ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಭಾನುವಾರ ವಹ್ನಿಕುಲ ಕ್ಷತ್ರಿಯ ಸಮುದಾಯದ ವತಿಯಿಂದ ಆಯೋಜಿಸಿದ್ಧ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಾಗಿರುವ ವಹ್ನಿಕುಲ ಕ್ಷತ್ರಿಯ ಸಮುದಾಯದ ಜನತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ.
ಆಗಾಗಿ ಪಾಲಕರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವುದರ ಮೂಲಕ ಸರ್ಕಾರದಿಂದ ದೊರಕುವ ಸವಲತ್ತು ಪಡೆದು ಅಭಿವೃದ್ಧಿ ಹೊಂದಬೇಕು ಎಂದರು. ಕಳೆದ ಬಜೆಟ್‌ನಲ್ಲಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸವಿತಾ ಸಮಾಜಕ್ಕೆ ಹಾಗೂ ಕ್ರೈಸ್ತರ ಅಭಿವೃದ್ಧಿಗೆ ಮಂಡಳಿ ರಚಿಸುವುದರ ಬಗ್ಗೆ ಘೋಷಣೆ ಮಾಡಿದ್ದಾರೆ. ವಹ್ನಿಕುಲ ಕ್ಷತ್ರಿಯ ಅಭಿವೃದ್ಧಿ ಮಂಡಳಿ ರಚಿಸುವಂತೆ ಸಿಎಂ ಅವರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಪಿ.ಆರ್.ರಮೇಶ್ ಸಚಿವರಾಗಬೇಕು: ವಿಧಾನ ಪರಿಷತ್ ಸದಸ್ಯರಾಗಿರುವ ಪಿ.ಆರ್.ರಮೇಶ್ ವಹ್ನಿಕುಲ ಕ್ಷತ್ರಿಯ ಸಮುದಾಯದ ಮುಖಂಡರಾಗಿದ್ದು, ಉತ್ತಮ ವಿಚಾರವಾದಿಯಾಗಿದ್ದಾರೆ. ಇವರು ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದ್ದಾರೆ. ಆದರೆ ಇವರು ರಾಜಕೀಯದಲ್ಲಿ ಅವಕಾಶ ವಂಚಿತರಾಗಿದ್ದಾರೆ. ವಹ್ನಿಕುಲ ಕ್ಷತ್ರಿಯ ಅಭಿವೃದ್ಧಿಯಾಗಬೇಕಾದರೆ ಇವರನ್ನು ಸಚಿವರನ್ನಾಗಿ ಆಯ್ಕೆ ಮಾಡಬೇಕಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೂ ತರಲಾಗುವುದು ಎಂದು ಹೇಳಿದರು.
ಸಿಎಂಗೆ ಮನವಿ ಮಾಡಲಾಗುವುದು: ಬಲ್ಲಾಳ ಹಾಗೂ ವಹ್ನಿಕುಲ ಕ್ಷತ್ರಿಯ ಸಮುದಾಯದಲ್ಲಿ ಸರ್ಕಾರಿ ನೌಕರಿ ಪಡೆಯುವ ಅಭ್ಯರ್ಥಿಗಳಿಗೆ ಕೆಲವು ತೊಡಕುಗಳಿಂದ ಸಿಂಧುತ್ವ ಪ್ರಮಾಣ ಪ್ರಮಾಣ ಪತ್ರ ನೀಡಲು ತೊಡಕಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಗಮನಕ್ಕೆ ತಂದು ತದ ನಂತರ ಕೇಂದ್ರ ಸರ್ಕಾರದ ಗಮನ ಸೆಳೆಯುವುದತರ ಮೂಲಕ ಸಿಂಧುತ್ವ ಪ್ರಮಾಣ ಪತ್ರ ಕೊಡಿಸಲು ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಶಾಸಕ ಆರ್. ನರೇಂದ್ರ ಮಾತನಾಡಿ, ಹನೂರು ಕ್ಷೇತ್ರದಲ್ಲಿ ಹಲವು ಸಮುದಾಯದ ಜನತೆ ವಾಸವಾಗಿದ್ದು, ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಈಗಾಗಲೇ ವಹ್ನಿಕುಲ ಕ್ಷತ್ರಿಯ ಸಮುದಾಯದವರಿಗೆ ರಾಜಕೀಯ ಪ್ರಾತಿನಿಧ್ಯ ನೀಡಲಾಗಿದ್ದು, ಜಿಪಂ, ತಾಪಂ ಹಾಗೂ ಗ್ರಾಪಂ ಸದಸ್ಯರಿದ್ದಾರೆ. ಅಲ್ಲದೇ ಈ ಸಮುದಾಯದ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತು ನೀಡಿದ್ದು, ಕಳೆದ ಅವಧಿಯಲ್ಲಿ ಕ್ಷೇತ್ರ ವ್ಯಾಪ್ತಿಯ ಅಜ್ಜೀಪುರ, ಕಾಂಚಳ್ಳಿ ಹಾಗೂ ಪುದುರಾಮಾಪುರದಲ್ಲಿ ಸಮುದಾಯ ಭವನಗಳನ್ನು ನಿರ್ಮಿಸಲಾಗಿದೆ ಎಂದರು.
ಹಕ್ಕುಪತ್ರ ವಿತರಣೆಗೆ ಅಗತ್ಯ ಕ್ರಮ: ಕಳೆದ 6 ದಶಕದ ಹಿಂದೆ ಗೋಪಿನಾಥಂ ಜಲಾಶಯ ಹೊಡೆದು ಹೋಗಿದ್ದ ವೇಳೆ ಇಲ್ಲಿನ 60-70 ಮನೆಗೆ ನೀರು ನುಗ್ಗಿತ್ತು. ಈ ವೇಳೆ ಕುಟುಂಬಗಳ ಜನರನ್ನು ಜಾಗೇರಿ ಗ್ರಾಮಕ್ಕೆ ಸ್ಥಳಾಂತರಿಸಲಾಗಿತ್ತು. ಗ್ರಾಮದ ಜನರು ಸೇರಿದಂತೆ ಇಲ್ಲಿನ ಜನರು 12.5 ಸಾವಿರ ಎಕರೆ ಅರಣ್ಯ ಪ್ರದೇಶದ ಭೂಮಿಯಲ್ಲಿ ಕೃಷಿ ಮಾಡುತಿದ್ದರು. ಆದರೆ ಕೃಷಿ ಭೂಮಿ ಅರಣ್ಯ ಪ್ರದೇಶಕ್ಕೆ ಒಳಪಟ್ಟಿತ್ತು. ರೈತರು ಹಕ್ಕು ಪತ್ರ ಕೊಡಿಸುವ ಬಗ್ಗೆ ಮನವಿ ಮಾಡಿದ್ದರು. ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದ್ದು,
12.5 ಸಾವಿರ ಎಕರೆ ಅರಣ್ಯ ಭೂಮಿಯಲ್ಲಿ 2.894 ಎಕರೆ ಕೃಷಿ ಭೀಮಿಯನ್ನು ರೈತರಿಗೆ ನೀಡವಂತೆ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ತಿಳಿದರು. ಪಟ್ಟಣದ ಪ್ರಮುಖ ಬೀದಿಯಲ್ಲಿ ಕುಂಭಕಳಸ ಹೊತ್ತ ಮಹಿಳೆಯರು ವಾದ್ಯ ಮೇಳದೊಂದಿಗೆ ಮೆರವಣಿಗೆ ನಡೆಸಿದರು. ವಹ್ನಿಕುಲ ಕ್ಷತ್ರಿಯ ಸಂಘದ ರಾಜ್ಯಾಧ್ಯಕ್ಷ ಸಿ.ಜಯರಾಜ್, ಜಿಪಂ ಅಧ್ಯಕ್ಷೆ ಶಿವಮ್ಮ, ಸದಸ್ಯ ಬಸವರಾಜು, ತಾಪಂ ಅಧ್ಯಕ್ಷ ರಾಜೇಂದ್ರ, ಪಪಂ ಅಧ್ಯಕ್ಷೆ ಮಮತಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.