ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹ
Team Udayavani, Dec 13, 2019, 12:41 PM IST
ಚಾಮರಾಜನಗರ: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡ ಬೇಕೆಂಬ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದ ಗೇಟ್ ಆವರಣದಲ್ಲಿ ಜಮಾಯಿಸಿದ ಪ್ರತಿಭಟನೆಕಾರರು ಅಲ್ಲಿಂದ ಮೆರವಣಿಗೆ ಹೊರಟು ಜಿಲ್ಲಾಡಳಿತ ಭವನ ಆವರಣಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ಕುಮಾರ್ ಮಾತನಾಡಿ, ರಾಜ್ಯದಲ್ಲಿ 6 ಕೋಟಿ ಕನ್ನಡಿಗರಿರ್ಧಧೂ. ಕೇಂದ್ರ ಅಥವಾ ರಾಜ್ಯ ಸರ್ಕಾರದಲ್ಲಾಗಲಿ ಉದ್ಯೋಗದಲ್ಲಿ ಮೀಸಲಾತಿಯಿಲ್ಲ. ಇದರಿಂದ ಕನ್ನಡಿಗರಿಗೆ ಅನ್ಯಾಯ ವಾಗಿದೆ ಎಂದು ಆರೋಪಿಸಿದರು.
ಕರ್ನಾಟಕದಲ್ಲಿ ಆಡಳಿತ ಭಾಷೆ ಕನ್ನಡವಾಗಿದ್ದರೂ ರಾಜ್ಯದ ಸರ್ಕಾರಿ ಕಚೇರಿಗಳ ಕಡತಗಳಲ್ಲಿ ಕನ್ನಡ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ನಾಮಫಲಕ ಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯಾಗಬೇಕೆಂದು ಹೇಳಿದ್ದರೂ, ಅನ್ಯ ಭಾಷೆಗಳ ಹಾವಳಿಯಿಂದ ಸಂಪೂರ್ಣವಾಗಿ ಕನ್ನಡ ಬಾಷೆ ಬಳಕೆಯಾಗುತ್ತಿಲ್ಲ. ಇದರಿಂದ ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಧಕ್ಕೆಯಾಗುತ್ತಿದೆ. ರಾಜ್ಯದಲ್ಲಿ ವಾಸಿಸುತ್ತಿರುವ ಕನ್ನಡಗರಿಗೆ ಕನ್ನಡ ಭಾಷೆಗೆ, ಸಾಮಾಜಿಕ ನ್ಯಾಯ ದೊರಕಬೇಕಾದರೆ ರಾಜ್ಯ ಸರ್ಕಾರದ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಒತ್ತಾಯಿಸಿದರು. ಕರ್ನಾಟಕ ಕನ್ನಡ ರಕ್ಷಣೆ ವೇದಿಕೆ ಅಧ್ಯಕ್ಷ ಚಾ.ಗು. ನಾಗರಾಜು ಮಾತನಾಡಿ, 1983ರಲ್ಲಿ ಲೋಕಸಭೆ ಸದಸ್ಯರಾಗಿದ್ದ ಸರೋಜಿನಿ ನಾಯ್ಡು ರಾಜ್ಯಾದ್ಯಂತ ಅಧ್ಯಯನ ಮಾಡಿ ಆಯೋಗ್ಯಕ್ಕೆ ವರದಿ ಸಲ್ಲಿಸಿದ್ದಾರೆ.
ಆದರೂ ಕೂಡ ಇಲ್ಲಿ ತನಕ ಆಡಳಿತ ನಡೆಸಿದ ಸರ್ಕಾರಗಳ ಕನ್ನಡಿಗರ ಮೇಲಿನ ಇಚ್ಛಾಶಕ್ತಿ ಕೊರತೆಯಿಂದ ಜಾರಿಗೆ ತರುವಲ್ಲಿ ವಿಫಲವಾಗಿವೆ. ಈಗಿನ ರಾಜ್ಯ ಸರ್ಕಾರ ಕನ್ನಡಿಗರ ಹಿತದೃಷ್ಟಿಯಿಂದ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಇಲ್ಲದಿದ್ದರೆ, ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ಅಂಬರೀಶ್, ತಾಲೂಕು ಅಧ್ಯಕ್ಷ ಸಿದ್ದಾರ್ಥ, ಟೌನ್ ಅಧ್ಯಕ್ಷ ಮಂಜುನಾಥ್, ಗೌರವ ಅಧ್ಯಕ್ಷ ಶಂಕರ್, ಕಾರ್ಮಿಕ ಸಂಘಟನೆ ಅಧ್ಯಕ್ಷ ಸ್ವಾಮಿ, ಮರಪ್ಪ, ಮಲ್ಲೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.