ಮಧ್ಯರಾತ್ರಿ ಚೆಕ್‌ಪೋಸ್ಟ್‌ಗಳ ಪರಿಶೀಲನೆ
Team Udayavani, Apr 19, 2020, 4:17 PM IST
ಚಾಮರಾಜನಗರ: ಕೋವಿಡ್-19 ಮುಂಜಾಗ್ರತಾ ಕ್ರಮಗಳ ಹಿನ್ನೆಲೆಯಲ್ಲಿ ಡೀಸಿ ಡಾ.ರವಿ, ಎಸ್‌ಪಿ ಆನಂದ ಕುಮಾರ್ ತಾಲೂಕಿನ ಬಾಣಹಳ್ಳಿ ಚೆಕ್‌ಪೋಸ್ಟ್, ಕೊಳ್ಳೇಗಾಲ ತಾಲೂಕಿನ ಟಗರಪುರ ಹಾಗೂ ಸತ್ತೇಗಾಲ ಚೆಕ್‌ಪೋಸ್ಟ್‌ಗಳಿಗೆ ಶುಕ್ರವಾರ ಮಧ್ಯರಾತ್ರಿ ಭೇಟಿ ನೀಡಿ ಪರಿಶೀಲಿಸಿದರು.
ಅಂತರ ಜಿಲ್ಲೆ ಸಂಪರ್ಕಿಸುವ ಪ್ರಮುಖ ಚೆಕ್‌ಪೋಸ್ಟ್‌ಗಳಿಗೆ ಯಾವ ಸುಳಿವೂ ನೀಡದೇ ಅನಿರೀಕ್ಷಿತವಾಗಿ ಮಧ್ಯರಾತ್ರಿ ಭೇಟಿ ನೀಡಿದ ವೇಳೆ ಚೆಕ್ ಪೋಸ್ಟ್‌ಗೆ ನಿಯೋಜಿತರಾಗಿದ್ದ ರಾತ್ರಿ ಪಾಳಿಯ ಎಲ್ಲಾ ಅಧಿಕಾರಿ, ಸಿಬ್ಬಂದಿ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದನ್ನು ಪ್ರಶಂಸಿಸಿದರು. ರಾಮನಗರ, ಕನಕಪುರ ಇತರೆ ಪ್ರಮುಖ ಪಟ್ಟಣಗಳಿಂದ ವಿಶೇಷವಾಗಿ ಸತ್ತೇಗಾಲ ಚೆಕ್‌ಪೋಸ್ಟ್ ಮೂಲಕ ರೇಷ್ಮೆಗೂಡಿನ ವಹಿವಾಟಿಗೆ ಸಂಬಂಧಿಸಿದ ಉತ್ಪನ್ನಗಳ ವಾಹನಗಳು ಹಾದು ಹೋಗುವುದರಿಂದ ವಾಹನಗಳ ತಪಾಸಣೆ, ಸ್ಯಾನಿಟೈಸೇಷನ್ ಕೆಲಸ ಹೇಗೆ ನಿರ್ವಹಿಸಲಾಗುತ್ತಿದೆ ಎಂಬ ಬಗ್ಗೆ ಪರಿಶೀಲಿಸಿದರು. ವೈದ್ಯಕೀಯ ಕಾರಣಗಳಿಗಾಗಿ ಅನುಮತಿ ಪಡೆದಿರುವ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಬೇಕು. ಅಗತ್ಯ ವಸ್ತುಗಳ ಸಾಗಣೆ ವಾಹನಗಳನ್ನು ಪರಿಶೀಲಿಸಿ ಅನುಮತಿಸಬೇಕು ಎಂದು ಡೀಸಿ ರವಿ ಸೂಚಿಸಿದರು. ಚೆಕ್ ಪೋಸ್ಟ್‌ಗಳಲ್ಲಿ ನಿಮಗೆ ಊಟ, ಉಪಾಹಾರ, ಕುಡಿಯುವ ನೀರು ಸೌಲಭ್ಯ ಇದೆಯೇ? ಎಂಬ ಬಗ್ಗೆಯೂ ತಿಳಿದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.