Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ
Team Udayavani, Jun 24, 2024, 4:32 PM IST
ಗುಂಡ್ಲುಪೇಟೆ(ಚಾಮರಾಜನಗರ): ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎರಡು ವಾಹನಗಳು ಜಖಂಗೊಂಡಿರುವ ಘಟನೆ ತಾಲೂಕಿನ ಕೇರಳ ರಸ್ತೆಯ ಮದ್ದೂರು ಪೊಲೀಸ್ ತನಿಖಾ ಠಾಣಾ ಮುಂಭಾಗದಲ್ಲಿ ನಡೆದಿದೆ.
ಅಪಘಾತದಲ್ಲಿ ಗೂಡ್ಸ್ ಚಾಲಕ ಕೇರಳ ಮೂಲದ ಶಾರುಣ್ ರಾಜ್(29), ಹಾಗೂ ಅನೂಪ್(28) ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾಃತ್ ಬಸ್‍ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗು ಗುಂಡ್ಲುಪೇಟೆಯಿಂದ ಕೇರಳಕ್ಕೆ ತೆರಳುತ್ತಿದ್ದ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದಿಂದ ಬಸ್ಸಿನ ಎಡಭಾಗ ಜಖಂಗೊಂಡಿದ್ದು, ಗೂಡ್ಸ್ ವಾಹನದ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಅಪಘಾತದಲ್ಲಿ ಗಾಯಗೊಂಡ ಗೂಡ್ಸ್ ವಾಹನ ಚಾಲಕನನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನೂ ಘಟನೆ ವೇಳೆ ಗುಂಡ್ಲುಪೇಟೆ-ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಪೊಲೀಸರು ಅಪಘಾತದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಘಟನೆ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎರಡು ವಾಹನಗಳನ್ನು ವಶಕ್ಕೆ ಪಡೆದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: Shimoga; ವಾಲ್ಮೀಕಿನಿಗಮದ ಚಂದ್ರಶೇಖರ್ ಆತ್ಮಹತ್ಯೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.