ಗ್ರಾಮೀಣ ಮಕ್ಕಳೇ ಹೆಚ್ಚು ಪ್ರತಿಭಾವಂತರು
Team Udayavani, Sep 12, 2019, 3:00 AM IST
ಹನೂರು: ನೂತನ ತಾಲೂಕಾಗಿರುವ ಹನೂರು ತಾಲೂ ಕು ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು, ಇಲ್ಲಿನ ಮಕ್ಕಳಲ್ಲಿ ಉತ್ತ ಮ ಸಾಮರ್ಥ್ಯ ಮತ್ತು ಪ್ರತಿಭೆಯಿದೆ. ಆ ಪ್ರತಿಭೆ ಹೊರತರುವಲ್ಲಿ ಕ್ರೀಡೆಯೂ ಪ್ರಮುಖ ಪಾತ್ರವಹಿಸಲಿದ್ದು, ಕ್ರೀಡಾಕೂಟಗಳ ಮೂಲಕ ಹೊಸ ಹೊಸ ಪ್ರತಿಭೆಗಳು ಅನಾವರಣಗೊಳ್ಳಬೇಕು ಎಂದು ಶಾಸಕ ಆರ್.ನರೇಂದ್ರ ಹೇಳಿದರು.
ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಪಂ ಚಾಮರಾಜನಗರ ವತಿಯಿಂದ 2019-20ನೇ ಸಾಲಿನ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂ ಕು ಮಟ್ಟದ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕ್ರೀಡೆಯಿಂದ ಮಾನಸಿಕ ಸಮತೋಲನ: ದೈಹಿಕ ಮತ್ತು ಮಾನಸಿಕ ಸಮತೋಲನ ಕಾಯ್ದುಕೊಳ್ಳುವಲ್ಲಿ ಕ್ರೀಡೆ ಬಹುಮುಖ್ಯ ಪಾತ್ರವಹಿಸುತ್ತದೆ. ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಸಾಮರ್ಥ್ಯಗಳಿಸಬಹುದಾಗಿದೆ. ದೈಹಿಕ ಸಾಮರ್ಥ್ಯ ಸಮರ್ಥವಾಗಿದ್ದಲ್ಲಿ ಮಾನಸಿಕ ಸಮತೋಲನವನ್ನೂ ಕಾಯ್ದುಕೊಳ್ಳಬಹುದು. ಇದರಿಂದ ಏಕಾಗ್ರತೆ ದೊರೆತು ಓದಿನ ಕಡೆ ಹೆಚ್ಚಿನ ಗಮನವನ್ನೂ ಹರಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಶಿಕ್ಷಕರು ಮಕ್ಕಳ ಪ್ರತಿಭೆ ಹೊರತನ್ನಿ: ಹನೂರು ತಾಲೂ ಕು ಗುಡ್ಡಗಾಡು ಪ್ರದೇಶದಿಂದ ಕೂಡಿದ್ದರೂ ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದು ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿಯೂ ಭಾಗವಹಿಸಿದ್ದಾರೆ. ಈ ಭಾಗದಲ್ಲಿ ಇನ್ನೂ ಉತ್ತಮ ಸಾಮರ್ಥ್ಯ ಮತ್ತು ಪ್ರತಿಭೆವುಳ್ಳ ವಿದ್ಯಾರ್ಥಿಗಳಿದ್ದು ಕ್ರೀಡಾಕೂಟಗಳ ಮೂಲಕ ಹೊಸ ಹೊಸ ಪ್ರತಿಭೆಗಳನ್ನು ಅನಾವರಣ ಮಾಡಬೇಕು. ಅಂತೆಯೇ ವಿದ್ಯಾರ್ಥಿಗಳೂ ಸಹ ಕ್ರೀಡಾಕೂಟದಲ್ಲಿ ಭಾಗವಹಿಸಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಸೋಲೆ ಗೆಲುವಿನ ಸೋಪಾನ ಎಂದು ಭಾಗವಹಿಸಬೇಕು ಎಂದು ಕಿವಿಮಾತು ಹೇಳಿದರು.
ಆಕರ್ಷಕ ಪಥ ಸಂಚಲನ: ಕಾರ್ಯಕ್ರಮದಲ್ಲಿ ಧ್ವಜಾರೋಹಣದ ಬಳಿಕ ವಿವೇಕಾನಂದ ಶಾಲೆ, ಕ್ರಿಸ್ತರಾಜ ಶಾಲೆ, ಸಂತ ಅಂಥೋಣಿ ಶಾಲೆ ಸೇರಿದಂತೆ ವಿವಿಧ ಶಾಲೆಗಳ ಮಕ್ಕಳು ಆಕರ್ಷಕ ಪಥಸಂಚಲನ ನಡೆಸಿಕೊಟ್ಟರು. ಬಳಿಕ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ತಾಪಂ ಅಧ್ಯಕ್ಷ ಕ್ರೀಡಾಜ್ಯೋತಿ ಬೆಳಗಿದರು. ಇದೇ ವೇಳೆ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ದೈಹಿಕ ಶಿಕ್ಷಕರು ಕ್ರೀಡೆಯಲ್ಲಿ ನಮ್ಮವರು ತಮ್ಮವರು ಎಂದು ಭೇದ ಭಾವವಿಲ್ಲದೆ ನಿಷ್ಪಕ್ಷಪಾತವಾಗಿ ತೀರ್ಪು ಪ್ರಕಟಿಸುವುದಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ: ಹನೂರು ನೂತನ ತಾಲೂಕು ಕೇಂದ್ರವಾಗಿದ್ದರೂ ಯುವಜನ ಮತ್ತು ಕ್ರೀಡಾ ಇಲಾಖೆಯಿಂದ ಆಯೋಜಿಸಿರುವ ದಸರಾ ಕ್ರೀಡಾಕೂಟವನ್ನು ಹನೂರು ಕೇಂದ್ರದಲ್ಲಿ ಆಯೋಜಿಸಿರದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಾಸಕ ನರೇಂದ್ರ, ಸರ್ಕಾರ ಬರ್‌ಬಾದ್ ಆಗಿಹೋಗಿದ್ದು ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ. ಈ ಹಿಂದೆ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ 53 ತಾಲೂ ಕು ಕೇಂದ್ರಗಳನ್ನು ರಚಿಸಲಾಗಿತ್ತು. ಬಳಿಕ ನೂತನ ತಾಲೂಕಾದ ಹನೂರಿಗೆ ಗ್ರೇಡ್-1 ತಹಶೀಲ್ದಾರ್, ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಕ ಮಾಡಿ ಅಗತ್ಯ ಸಿಬ್ಬಂದಿ ನೇಮಕಕ್ಕೆ ಆದೇಶ ಹೊರಡಿಸಲಾಗಿತ್ತು.
ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನೂತನ ತಾಲೂಕು ಕೇಂದ್ರಗಳಿಗೆ ಯಾವುದೇ ಅಧಿಕಾರಿಗಳನ್ನು ನೇಮಕ ಮಾಡಬಾರದು ಮತ್ತು ಹೊಸ ಕಚೇರಿಗಳನ್ನು ತೆರೆಯಲು ಅನುಮತಿ ನೀಡಬಾರದು ಎಂದು ಆರ್ಥಿಕ ಇಲಾಖೆಗೆ ಜ್ಞಾಪನಾ ಪತ್ರ ನೀಡಿದೆ. ಈ ಹಿನ್ನೆಲೆ ನೂತನ ತಾಲೂಕುಗಳಿಗೆ ನೀಡಬೇಕಿದ್ದ ಅನುದಾನವನ್ನು ಸ್ಥಗಿತಗೊಳಿಸಲಾಗಿದೆ ಎಂದು ಕಿಡಿಕಾರಿದರು.
ಜಿಪಂ ಅಧ್ಯಕ್ಷೆ ಶಿವಮ್ಮ ಕೃಷ್ಣ, ಸದಸ್ಯೆ ಮರುಗದಮಣಿ, ತಾಪಂ ಅಧ್ಯಕ್ಷ ರಾಜೇಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ, ಪಪಂ ಸದಸ್ಯರಾದ ಹರೀಶ್‌ಕುಮಾರ್, ಸಂಪತ್, ಸೋಮಣ್ಣ, ಗಿರೀಶ್, ನಾಗರಾಜು, ಮಹೇಶ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಶಿವಮಲ್ಲು, ನಂಜುಂಡಸ್ವಾಮಿ, ಗುರುಸ್ವಾಮಿ, ಕೃಷ್ಣೇಗೌಡ, ದೈಹಿಕ ಶಿಕ್ಷಕರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.