ನಾಳೆಯಿಂದ ಚಾ.ನಗರದಲ್ಲಿ 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ


Team Udayavani, Feb 14, 2021, 7:02 PM IST

Sahitya sammelana

ಚಾಮರಾಜನಗರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ.15, 16 ರಂದು ನಗರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ. ಎಸ್‌.ವಿನಯ್‌ ತಿಳಿಸಿದರು.

ನಗರದಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿ, ಫೆ.15 ರಂದು ನಗರದ ಜೆ.ಎಚ್‌.ಪಟೇಲ್‌  ಸಭಾಂಗಣದಲ್ಲಿ ಸಮ್ಮೇಳನ ನಡೆಯಲಿದ್ದು ಬೆಳಗ್ಗೆ 8.30ಕ್ಕೆ ಎಸ್ಪಿ ದಿವ್ಯಾ ಸಾರಾ ಥಾಮಸ್‌ ರಾಷ್ಟ್ರಧ್ವಜ,  ಎಡಿಸಿ ಕಾತ್ಯಾ ಯಿನಿ ದೇವಿ ಅವರು ನಾಡಧ್ವಜಾರೋಹಣ ನೆರವೇರಿಸಲಿದ್ದಾರೆ.

ಬೆಳಗ್ಗೆ 9.30ಕ್ಕೆ ಸಮ್ಮೇಳನದ ಸರ್ವಾಧ್ಯಕ್ಷ ಮಂಜು ಕೋಡಿಉಗನೆ ಅವರನ್ನು ಕಲಾತಂಡಗಳ ಮೆರವಣಿಗೆಯಲ್ಲಿ ಜಿಲ್ಲಾಡಳಿತ ಭವನದ ಪ್ರವೇಶದ್ವಾರ ದಿಂದ ಸಭಾ ಮಂಟ ಪಕ್ಕೆ ಕರೆತರಲಾಗುವುದು. ಬೆಳಗ್ಗೆ 10.30ಕ್ಕೆ ಜಿಲ್ಲಾಡಳಿತ ಭವನದ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮ ಶೇಖರ್‌ ಸಮಾರಂಭ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ ಕುಮಾರ್‌ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು ಸಂಸದ ವಿ.ಶ್ರೀನಿವಾಸಪ್ರಸಾದ್‌ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆಂದು ತಿಳಿಸಿದರು.

ಸಮ್ಮೇಳನಾಧ್ಯಕ್ಷ ಮಂಜು ಕೋಡಿಉಗನೆ ಅವರು ಸಮ್ಮೇಳನಾಧ್ಯಕ್ಷರ ಭಾಷಣ ಮಾಡಲಿದ್ದಾರೆ. ಈ ವೇಳೆ ಕವಿಗಳ ಪುಸ್ತಕಗಳು ಲೋಕಾರ್ಪಣೆ ಗೊಳ್ಳಲಿವೆ. ನಂತರ ವಿಶೇಷ ಸಾಧಕರು ಹಾಗೂ ಕೊರೊನಾ  ಯೋಧರನ್ನು ಸನ್ಮಾನಿಸಲಾಗುವುದೆಂದರು.

ಮಧ್ಯಾಹ್ನ 2 ರಿಂದ 3.30 ರವರೆಗೆ ಕನ್ನಡ ಸಾಹಿತ್ಯಕ್ಕೆ ಜಿಲ್ಲೆಯ ಕೊಡುಗೆ ವಿಚಾರ ಕುರಿತು ಮೊದಲ ಗೋಷ್ಠಿ ನಡೆಯಲಿದ್ದು ಪ್ರಾಂಶುಪಾಲರಾದ ಡಾ.ಎಚ್‌.ಎಸ್‌.ಪ್ರೇಮಲತಾ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ  3.30 ರಿಂದ ಸಂಜೆ 5.30ವರೆಗೆ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ.ಡಿ. ದೊಡ್ಡ ಲಿಂಗೇ ಗೌಡರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದ್ದು, ಜಿಲ್ಲೆಯ ಹಲವು ಕವಿಗಳು ಸ್ವರಚಿತ ಕವನ ವಾಚನ ಮಾಡಲಿದ್ದಾರೆ. ಸಂಜೆ 5.30ಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಸನ್ಮಾನ ನಡೆಯಲಿದೆ. ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರಾಜಪ್ಪ, ಗೌರವ ಕೋಶಾಧ್ಯಕ್ಷ  ನಿರಂಜನಕುಮಾರ್‌, ಹೋಬಳಿ ಅಧ್ಯಕ್ಷ ರವಿಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿ ಆನೆ ದಾಳಿ:ವಿಡಿಯೋ ವೈರಲ್

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.