ಚಾ.ನಗರ: 30ರಿಂದ ಸಕಾಲ ಸಪ್ತಾಹ
Team Udayavani, Nov 28, 2020, 11:58 AM IST
ಚಾಮರಾಜನಗರ: ನಾಗರಿಕರಿಗೆ ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದ ಸಕಾಲ ಯೋಜನೆ ಕುರಿತು ಹೆಚ್ಚಿನ ಅರಿವು ಮೂಡಿಸಲು ಹಾಗೂ ಸಕಾಲದಡಿ ಸ್ವೀಕರಿಸಿ ಬಾಕಿ ಉಳಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಲು ಜಿಲ್ಲೆಯಲ್ಲಿ 3 ಹಂತಗಳಲ್ಲಿ ಸಕಾಲ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದ್ದಾರೆ.
ನಾಗರಿಕರಿಗೆ ನಿಗದಿತ ಅವಧಿಯೊಳಗೆ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಕಾಲ ಯೋಜನೆ ಜಾರಿಗೆ ತರಲಾಗಿದೆ. ಸಕಾಲ ಯೋಜನೆಯಡಿ ಒಟ್ಟು98 ಇಲಾಖೆ, ಸಂಸ್ಥೆಗಳ1025ಕ್ಕೂ ಹೆಚ್ಚಿನ ನಾಗರಿಕಕೇಂದ್ರಿತ ಸೇವೆ ಸೇರ್ಪಡೆ ಮಾಡಲಾಗಿದೆ. ಸಕಾಲ ಯೋಜನೆ ಬಗ್ಗೆ ಜಾಗೃತಿ ಮೂಡಿಸಿ ಸಕಾಲದಡಿ ಸ್ವೀಕರಿಸಲಾದ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ನ.30ರಿಂದ ಡಿಸೆಂಬರ್ 5ರವರೆಗೆ ಕಂದಾಯ, ನಗರಾಭಿವೃದ್ಧಿ, ಸಾರಿಗೆ ಇಲಾಖೆ, ಆಹಾರ ನಾಗರಿಕಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಸಕಾಲ ಸಪ್ತಾಹ ಆಯೋಜಿಸಲಾಗಿದೆ.
ಡಿ. 7ರಿಂದ 11ರವರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಹಾಗೂ ಡಿ.14ರಿಂದ 19ರವರೆಗೆ ಉಳಿದ ಇಲಾಖೆಗಳಲ್ಲಿಯೂ ಸರ್ಕಾರದ ಆದೇಶ ಅನುಸಾರ ಸಕಾಲ ಸಪ್ತಾಹ ಹಮ್ಮಿಕೊಳ್ಳಲಾಗಿದೆ. ಸಕಾಲ ಯೋಜನೆಯನ್ನು ಪರಿಣಾಮಕಾರಿಯಾಗಿಅನುಷ್ಠಾನಗೊಳಿಸುವ ಸಲುವಾಗಿ ಆಯೋಜಿಸಲಾಗಿರುವ ಸಕಾಲ ಸಪ್ತಾಹಆಚರಣೆ ಸಂಬಂಧ ನೋಡೆಲ್ ಅಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದೆ. ನೋಡೆಲ್ ಅಧಿಕಾರಿಗಳು ಸಪ್ತಾಹದ ಸಂದರ್ಭದಲ್ಲಿ ಇಲಾಖೆ, ಕಚೇರಿಗಳಿಗೆ ಭೇಟಿ ನೀಡಿ ನಿಗದಿತ ಅವಧಿ ಮೀರಿ ಬಾಕಿ ಇರುವ ಅರ್ಜಿಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.