Biligiri Rangana Betta: ಬಿಳಿಗಿರಿರಂಗನ ಬೆಟ್ಟದಲ್ಲಿ ಶುದ್ಧ ನೀರಿಗೆ ಪರದಾಟ
Team Udayavani, Dec 13, 2023, 3:20 PM IST
ಯಳಂದೂರು: ತಾಲೂಕಿನ ಪ್ರಮುಖ ಪ್ರವಾಸಿ ತಾಣ, ಪುಣ್ಯ ಕ್ಷೇತ್ರವೂ ಆದ ಬಿಳಿಗಿರಿರಂಗನಬೆಟ್ಟಕ್ಕೆ ನಾಡಿನಾದ್ಯಂತ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸಮರ್ಪಕ ಕುಡಿ ಯುವ ನೀರಿನ ವ್ಯವಸ್ಥೆ ಮಾಡದಿರುವುದು ಅಧಿಕಾರಿ ಗಳ ನಿರ್ಲಕ್ಷ್ಯಕ್ಕೆ ಹಿಡಿತ ಕೈಗನ್ನಡಿಯಾಗಿದೆ.
ಬೆಟ್ಟದಲ್ಲಿ ಒಂದು ಶುದ್ಧ ಕುಡಿಯುವ ನೀರಿನ ಘಟಕವಿಲ್ಲ. ಜತೆಗೆ ಇಲ್ಲಿರುವ ಕುಡಿಯುವ ನೀರಿನ ತೊಟ್ಟಿಗಳು ಪಾಚಿ ಕಟ್ಟಿ, ಸುತ್ತಲೂ ಕೊಳಚೆ ನೀರು ನಿಂತಿದೆ. ಈ ನೀರು ಕುಡಿಯಲು ನಗರ ಪ್ರದೇಶದಿಂದ ಬರುವ ಪ್ರವಾಸಿಗರು ಹಿಂದೇಟು ಹಾಕುತ್ತಾರೆ. ಇತ್ತ ಪಂಚಾಯ್ತಿಯು ಗಮನಹರಿಸುತ್ತಿಲ್ಲ. ಇದರಿಂದ ಈ ನೀರನ್ನು ಕುಡಿಯಲು ಭಕ್ತರು, ಪ್ರವಾಸಿಗರು ಹಿಂದೇಟು ಹಾಕುತ್ತಾರೆ. ಇಲ್ಲಿ ಆಗಾಗ ವಿದ್ಯುತ್ ವ್ಯತ್ಯಯ ಆಗುತ್ತಿರುತ್ತದೆ. ಇಲ್ಲಿ ಕರೆಂಟ್‌ನ ಸಮಸ್ಯೆಯಾದರೆ ಕುಡಿಯುವ ನೀರಿಗೆ ಪರದಾಡುವ ಸಂಭವ ಹೆಚ್ಚಾಗಿದೆ. ಇತ್ತ ಪ್ಲಾಸ್ಟಿಕ್ ಬಾಟಲ್ ನೀರನ್ನು ಸೇವಿಸೋಣ ಎಂದರೆ ಅದಕ್ಕೂ ನಿಷೇಧ ಹೇರಲಾಗಿದೆ. ಇದರಿಂದ ಪ್ರವಾಸಿಗರು ಪರದಾಡುವಂತೆ ಆಗಿದೆ.
ಗ್ರಾಪಂನಿಂದ ಶುದ್ಧ ಕುಡಿಯುವ ನೀರಿಲ್ಲ: ಬಿಳಿಗಿರಿ ರಂಗನಬೆಟ್ಟ ಪ್ರತ್ಯೇಕ ಪಂಚಾಯ್ತಿ ಆಗಿ ಹಲವು ವರ್ಷಗಳೇ ಕಳೆದಿವೆ. ಇದೊಂದು ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಪ್ರಕೃತಿಯನ್ನು ವೀಕ್ಷಿಸಲು, ಇಲ್ಲಿರುವ ಪುರಾತನ ಬಿಳಿಗಿರಿರಂಗನಾಥಸ್ವಾಮಿ ದೇಗುಲ, ಸ್ವಾಮಿ ದರ್ಶನ ಪಡೆಯಲು ದಿನನಿತ್ಯ ಸಾವಿರಾರು ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. ಆದರೆ, ಅವರಿಗೆ ಸೂಕ್ತ ಸೌಲಭ್ಯವಿಲ್ಲ.
ನಾಲ್ಕೈದು ಕಡೆ ಶುದ್ಧ ನೀರು ಒದಗಿಸಬೇಕು: ಬಸ್ ನಿಲ್ದಾಣ, ದೇಗುಲದ ಬಳಿ, ತೇರಿನ ಬೀದಿ, ಗಂಗಾಧ ರೇಶ್ವರ ದೇಗುಲದ ಬಳಿ ಇರುವ ಸರ್ಕಲ್‌ನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿ ಭಕ್ತರಿಗೆ ಅನುಕೂಲ ಮಾಡಿಕೊಡಬೇಕು ಎಂಬುದು ಭಕ್ತರಾದ ಗೋವಿಂದ, ರಮ್ಯಾ, ರಕ್ಷಿತಾರ ಆಗ್ರಹವಾಗಿದೆ.
ಬೆಟ್ಟಕ್ಕೆ ಪ್ರತಿವಾರ ದೇಶವಿದೇಶಗಳಿಂದಲೂ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಯಾವುದೇ ಶುದ್ಧ ಕುಡಿಯುವ ನೀರಿನ ಘಟಕಗಳು ಇಲ್ಲ. ಬಾಟಲಿ ನೀರು ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಹಾಗಾಗಿ ಬರುವ ಪ್ರವಾಸಿಗರು ಕುಡಿಯಲು ನೀರು ಇಲ್ಲದೆ ಪ್ರಯಾಸ ಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. -ವೆಂಕಟೇಶ್, ಸ್ಥಳೀಯ ನಿವಾಸಿ
ಬಿಆರ್‌ಟಿ ಹುಲಿರಕ್ಷಿತ ಅರಣ್ಯ ಪ್ರದೇಶ ವಾಗಿದೆ. ಇದು ಪ್ಲಾಸ್ಟಿಕ್ ನಿಷೇಧ ಪ್ರದೇಶವಾಗಿ ಘೋಷಿಸಲಾಗಿದೆ. ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರನ್ನು ಚೆಕ್ ಪೋಸ್ಟ್‌ನಲ್ಲೇ ಪರಿಶೀಲಿಸಿ ಪ್ಲಾಸ್ಟಿಕ್ ಬಾಟಲಿ ಕೊಂಡೊಯ್ಯದಂತೆ ಜಾಗೃತಿ ಮೂಡಿಸಲಾಗುತ್ತಿದೆ. ಈಗಾಗಲೇ ಇಲ್ಲಿನ ಗ್ರಾಪಂ, ದೇಗುಲದ ಆಡಳಿತ ಮಂಡಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಒದಗಿಸಲು ಮೌಖೀಕವಾಗಿ ಮನವಿ ಮಾಡಿದ್ದೇವೆ. -ನಾಗೇಂದ್ರ ನಾಯಕ, ಆರ್‌ಎಫ್ಒ ಯಳಂದೂರು ವಲಯ
-ಫೈರೋಜ್ ಖಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.