![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 13, 2020, 8:18 PM IST
ಕೋವಿಡ್ ಸೋಂಕಿನಿಂದ ಮೃತಪಟ್ಟ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ವೃದ್ಧ ವ್ಯಕ್ತಿಯ ಅಂತ್ಯಕ್ರಿಯೆಯನ್ನು ಚಾಮರಾಜನಗರದ ಹೊರವಲಯದಲ್ಲಿ ಪಿಎಫ್‌ಐ ಕಾರ್ಯಕರ್ತರು ನಡೆಸಿದರು.
ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿಗೆ ಎರಡನೇ ಸಾವು ಸಂಭವಿಸಿದೆ.
ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ 65 ವರ್ಷದ ವೃದ್ಧ ಕೋವಿಡ್ 19 ಮಹಾಮಾರಿಗೆ ಬಲಿಯಾದವರಾಗಿದ್ದಾರೆ.
ಈ ವೃದ್ಧ ಜ್ವರದಿಂದ ಬಳಲುತ್ತಿದ್ದು, ಅವರು ಚಿಕಿತ್ಸೆಗಾಗಿ ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಗೆ ಭಾನುವಾರ ತೆರಳಿದ್ದರು.
ಇದನ್ನೂ ಓದಿ: ಚಾಮರಾಜನಗರದಲ್ಲಿ ಇಂದು 14 ಹೊಸ ಕೋವಿಡ್ 19 ಪ್ರಕರಣ
ಅಲ್ಲಿ ಅವರಿಗೆ ವೈದ್ಯರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚಿಸಿದ್ದರು. ಹಾಗಾಗಿ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ಈ ವೃದ್ಧ ಮೃತಪಟ್ಟಿದ್ದಾರೆ,
ಬಳಿಕ ಉಪ ವಿಭಾಗ ಆಸ್ಪತ್ರೆಯಲ್ಲಿ ಇವರ ಗಂಟಲು ದ್ರವ ಮಾದರಿ ಸಂಗ್ರಹಿಸಿ, ನಗರದ ಪ್ರಯೋಗಾಲಯದಲ್ಲಿ ಪರೀಕ್ಷಿಸಿದಾಗ RT-PCR ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ.
PFI ಕಾರ್ಯಕರ್ತರಿಂದ ಅಂತ್ಯಕ್ರಿಯೆ: ಸೋಮವಾರ ಮೃತ ಶರೀರವನ್ನು ನಗರಕ್ಕೆ ತರಲಾಯಿತು. ನಗರದ ಹೊರವಲಯದ ಎಡಬೆಟ್ಟ ಬಳಿ ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಯ ಮಾರ್ಗಸೂಚಿಗಳನ್ವಯ ಜಿಲ್ಲಾಡಳಿತದಿಂದ ಅಂತ್ಯಕ್ರಿಯೆ ನಡೆಸಲಾಯಿತು. ಮೊದಲನೇ ಸಾವಿನ ಪ್ರಕರಣದ ಅಂತ್ಯಕ್ರಿಯೆ ನಡೆಸಿದ್ದಂತೆಯೇ PFI ಕಾರ್ಯಕರ್ತರು ಈ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿಕೊಟ್ಟರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.