ಗೋ.ಮಧುಸೂದನ್‌ಗೆ ಸೇರಿದ ಜಮೀನು ವಶ
Team Udayavani, Mar 12, 2017, 3:45 AM IST
ಚಾಮರಾಜನಗರ: ಜಿಲ್ಲೆಯ ಬಂಡೀಪುರ ಅರಣ್ಯ ಸಮೀಪ ಮಂಗಲ ಗ್ರಾಮದ ಸನಿಹ, ಕೃಷಿಗಾಗಿ ಎಂದು ಮಾಹಿತಿ ನೀಡಿ ಜಮೀನು ಖರೀದಿಸಿ ನಂತರ ಅದನ್ನು ಕೃಷಿಯೇತರ ಚಟುವಟಿಕೆಗೆ (ಟೈಗರ್ ರಾಂಚ್ ರೆಸಾರ್ಟ್ ನಿರ್ಮಾಣಕ್ಕಾಗಿ) ಬಳಸಿಕೊಂಡ ಹಿನ್ನೆಲೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಗೋ. ಮಧುಸೂದನ್ ಹಾಗೂ ಅವರ ಸಂಬಂಧಿಯ 44 ಎಕರೆ ಜಮೀನನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮೈಸೂರು ಪ್ರಾದೇಶಿಕ ಆಯುಕ್ತರು ಆದೇಶ ನೀಡಿದ್ದಾರೆ.
ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಂತೆ ಇರುವ ಮಂಗಲ ಗ್ರಾಮದ ಬಳಿ ಸರ್ವೆ ನಂ.20ರಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಗೋ. ಮಧುಸೂದನ್ 24 ಎಕರೆ ಹಾಗೂ ಅವರ ಸಂಬಂಧಿ ಟಿ.ಎಲ್. ಜಯಲಕ್ಷ್ಮೀ ಎಂಬುವರು 20 ಎಕರೆ ಜಮೀನನ್ನು ಖರೀದಿಸಲು ಕರ್ನಾಟಕ ಭೂಸುಧಾರಣಾ ಕಾಯ್ದೆ 1961 ಕಲಂ 80ರಡಿ ನಂಜನಗೂಡು ಉಪ ವಿಭಾಗಾಧಿಕಾರಿಯವರಿಂದ 1995ರ ಜನವರಿಯಲ್ಲಿ ಅನುಮತಿ ಪಡೆದಿದ್ದರು. ಈ ವೇಳೆ ತಾವು ಕೃಷಿಕರು ಎಂದು ಮಧುಸೂದನ್ ದಾಖಲೆಗಳಲ್ಲಿ ಘೋಷಿಸಿಕೊಂಡಿದ್ದರು. ಆದರೆ ಕೃಷಿಕರೆಂಬುದಕ್ಕೆ ಸೂಕ್ತ ದಾಖಲೆಗಳಿರಲಿಲ್ಲ. ನಿಯಮದಂತೆ, ಆ ಜಮೀನನ್ನು ಕೃಷಿ ಉದ್ದೇಶಕ್ಕಾಗಿ ಬಳಸದೇ, ಟೈಗರ್ ರಾಂಚ್ ಹೆಸರಿನ ರೆಸಾರ್ಟ್ ಮಾಡಲು, ಭೂಮಿಯನ್ನು ಅಲಿನೇಷನ್ ಮಾಡಿಸಿದ್ದರು. ಬಂಡೀಪುರ ಅರಣ್ಯಕ್ಕೆ ಹೊಂದಿಕೊಂಡಿರುವುದರಿಂದ ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕಿತ್ತು. ಅದನ್ನೂ ಉಲ್ಲಂ ಸಲಾಗಿತ್ತು. ಉಪವಿಭಾಗಾಧಿಕಾರಿಗಳ ಹಂತದಲ್ಲೇ ನಿಯಮಗಳನ್ನು ಗಾಳಿಗೆ ತೂರಲಾಗಿತ್ತು.
ಕರ್ನಾಟಕ ಭೂಸುಧಾರಣಾ ಕಾಯ್ದೆ 1961ರ ಕಲಂ, 118 ಎ ರನ್ವಯ 2012 ಜುಲೈ 19ರಂದು ಜಿಲ್ಲಾಧಿಕಾರಿ ಹಾಗೂ ಹುಲಿ ಯೋಜನೆ ಹೆಚ್ಚುವರಿ ನಿರ್ದೇಶಕರು ಪುನರ್ ಪರಿಶೀಲನಾ ಅರ್ಜಿಯನ್ನು ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಿದ್ದರು. ಜಮೀನು ಖರೀದಿಸುವ ಮುನ್ನ ಕೃಷಿಗೆ ಎಂದು ಮಾಹಿತಿ ನೀಡಿ ಖರೀದಿಸಿದ ಬಳಿಕ ಕಾಯಿದೆಗೆ ವಿರುದ್ಧವಾಗಿ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗೆ ಬಳಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆ ಜಮೀನನ್ನು ಮುಟ್ಟುಗೋಲು ಹಾಕಿಕೊಂಡು, ಅದನ್ನು ಕಂದಾಯ ದಾಖಲೆಗಳಲ್ಲಿ ನಮೂದಿಸುವಂತೆ ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ ಜಿಲ್ಲಾಧಿಕಾರಿಯವರಿಗೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.