ಹಿರಿಯ ನಾಗರಿಕರಿಗಿಲ್ಲ ಮಾದಪ್ಪನ ನೇರ ದರ್ಶನ

Team Udayavani, Jul 19, 2023, 3:51 PM IST

ಹಿರಿಯ ನಾಗರಿಕರಿಗಿಲ್ಲ ಮಾದಪ್ಪನ ನೇರ ದರ್ಶನ

ಹನೂರು(ಚಾ.ನಗರ): ಹಿರಿಯ ನಾಗರಿಕರಿಗೆ ದೇವಾಲಯಗಳಲ್ಲಿ ನೇರ ದರ್ಶನ ವ್ಯವಸ್ಥೆ ಕಲ್ಪಿಸಬೇಕು ಎಂದು ಸರ್ಕಾರ ಆದೇಶಿಸಿದ್ದರೂ, ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಈ ಆದೇಶ ಪಾಲನೆಯಾಗುತ್ತಿಲ್ಲ.

ಸರ್ಕಾರದ ಕಾಯ್ದೆಗಳು, ಆದೇಶಗಳು ಸಮರ್ಪಕವಾಗಿ ಜಾರಿಯಾಗದೆ ಕೇವಲ ಕಾಗದದ ಮೇಲೆ ಮಾತ್ರ ಉಳಿಯುತ್ತಿದೆ ಎನ್ನುವುದಕ್ಕೆ ಇದು ನಿದರ್ಶನ. ಕಳೆದ ಸೋಮವಾರ ಭೀಮನ ಅಮಾವಾಸ್ಯೆ ದಿನದಂದು ಧರ್ಮ ದರ್ಶನದ ಸಾಲಿನಲ್ಲಿ ಸಾವಿರಾರು ಜನರು ಕ್ಯೂ ನಿಂತಿದ್ದರು. ಹಲವು ಹಿರಿಯ ನಾಗರಿಕರು ನೇರ ದರ್ಶನದ ಸರದಿ ಸಾಲನ್ನು ಹುಡುಕಿದರು. ಆದರೆ, ಹಿರಿಯ ನಾಗರಿಕರ ನೇರ ದರ್ಶನಕ್ಕೆ ಯಾವ ವ್ಯವಸ್ಥೆಯೂ ಇರಲಿಲ್ಲ. ಹಿರಿಯ ನಾಗರಿಕರು ದೇವಾಲಯದ ಸಿಬ್ಬಂದಿಯನ್ನು ಕೇಳಿದರೆ ಸರ್ಕಾರ ಮಾಡಿದೆ ಅಷ್ಟೇ, ನಮ್ಮಲ್ಲಿ ಇನ್ನೂ ವ್ಯವಸ್ಥೆ ಮಾಡಿಲ್ಲ ಎಂಬ ಉತ್ತರ ಸಿಬ್ಬಂದಿಯಿಂದ ಬಂದಿತು.

ಸರ್ಕಾರದ ಆದೇಶವೇನಿದೆ: ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದೇವಾಲಯಗಳ ಎ ಮತ್ತು ಬಿ ಶ್ರೇಣಿಯ ಸಂಸ್ಥೆಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನೇರ ದರ್ಶನ ಸೌಲಭ್ಯ ಕಲ್ಪಿಸಬೇಕು. ಇತ್ತೀಚಿನ ದಿನಗಳಲ್ಲಿ ದೇಗುಲಗಳಿಗೆ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ಕಷ್ಟವಾಗುತ್ತಿದೆ.

ನೇರ ದರ್ಶನ ಸೌಲಭ್ಯ ಕಲ್ಪಿಸಿ: ಈ ನಿಟ್ಟಿನಲ್ಲಿ 65 ವರ್ಷ ತುಂಬಿರುವ ಬಗ್ಗೆ ವಯಸ್ಸಿನ ದೃಢೀಕರಣ ಅಥವಾ ಆಧಾರ್‌ ಕಾರ್ಡ್‌ ತೋರಿದಲ್ಲಿ ನೇರ ದರ್ಶನ ಸೌಲಭ್ಯ ಕಲ್ಪಿಸಬೇಕು. ಸಾಧ್ಯವಾದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸ್ಥಳ ಕಾಯ್ದಿರಿಸಬೇಕು. ಹಿರಿಯ ನಾಗರಿಕರ ಅನುಕೂಲಕ್ಕಾಗಿ ಸಹಾಯ ಕೇಂದ್ರವನ್ನು ತೆರೆದು, ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿ ನಿಯೋಜಿಸಿ ತ್ವರಿತ ದರ್ಶನಕ್ಕೆ ಕ್ರಮವಹಿಸಬೇಕು ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು ಜೂ.21 2023ರಂದು ಆದೇಶ ಹೊರಡಿಸಿದ್ದಾರೆ.

ಹಿರಿಯರ ಗೋಳು ಕೇಳುವವರ್ಯಾರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಪುಣ್ಯ ಕ್ಷೇತ್ರಗಳಲ್ಲೊಂದಾದ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ದೇವಾಲಯ ಹಳೇ ಮೈಸೂರು ಭಾಗದ ಬಡವರು ಮತ್ತು ಮಧ್ಯಮ ವರ್ಗದವರ ಆರಾಧ್ಯದೈವ ಮಲೆ ಮಾದಪ್ಪ ನೆಲೆಯೂರಿದ ಪುಣ್ಯಕ್ಷೇತ್ರವಾಗಿದೆ. ಈ ಪುಣ್ಯ ಕ್ಷೇತ್ರಕ್ಕೆ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿಯೇ ಆಗಮಿಸುತ್ತಿದ್ದಾರೆ.

ಆದೇಶ ಜಾರಿ ಪ್ರಾಧಿಕಾರದ ಕರ್ತವ್ಯ: ಅಮಾವಾಸ್ಯೆ, ಹುಣ್ಣಿಮೆ, ವಿಶೇಷದ ದಿನಗಳಲ್ಲಿ ದರ್ಶನಕ್ಕಾಗಿ ಧರ್ಮದರ್ಶನ ಸಾಲಿನಲ್ಲಿ ನಿಂತರೆ ಕನಿಷ್ಠ 6 ತಾಸಿನಿಂದ 8 ತಾಸು ಸಮಯಾವಕಾಶ ತಗುಲುತ್ತದೆ. ಹಿರಿಯ ನಾಗರಿಕರು, ಅದರಲ್ಲೂ ಕಾಯಿಲೆ ಉಳ್ಳವರು ಹೆಚ್ಚು ಹೊತ್ತು ನಿಲ್ಲಲಾಗದೇ ಬಸವಳಿಯುತ್ತಿದ್ದಾರೆ. ರಾಜ್ಯ ಸರ್ಕಾರ ತಂದಿರುವ ಆದೇಶವನ್ನು ಜಾರಿಗೊಳಿ ಸಬೇಕಾ ದುದು ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕರ್ತವ್ಯ. ಆದರೆ, ಜಾರಿಯಲ್ಲಿ ವಿಳಂಬವಾಗುತ್ತಿದೆ.

ಪ್ರಾಧಿಕಾರ ಆದೇಶ ಪಾಲಿಸಲಿ: ಹಿರಿಯ ನಾಗರಿಕರಿಗೆ ನೇರ ದರ್ಶನ ವ್ಯವಸ್ಥೆಗಾಗಿ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಾಜಗೋಪುರದ ಮುಂಭಾಗದ ಪ್ರವೇಶದ್ವಾರ 4ರಲ್ಲಿ ವ್ಯವಸ್ಥೆ ಮಾಡ ಲಾಗುತ್ತಿದೆ. ಓರ್ವ ಸಿಬ್ಬಂದಿಯನ್ನು ನೇಮಿಸಿ ವಯಸ್ಸಿನ ದೃಢೀಕರಣ ಪರಿಶೀಲಿಸಿ ಹಿರಿಯ ನಾಗರಿಕರಿಗೆ ನೇರ ದರ್ಶನ ವ್ಯವಸ್ಥೆ ಮಾಡುವುದಾಗಿ ಪ್ರಾಧಿಕಾರದ ನಿರ್ಗಮಿತ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಜೂ.23ರಂದು ಉದಯವಾಣಿ ಪತ್ರಿಕೆಗೆ ತಿಳಿಸಿದ್ದರು. ಆದರೆ, ಈ ಆದೇಶ ಇನ್ನೂ ಜಾರಿಗೆ ಬಂದಿಲ್ಲ.

ವಿಶೇಷ ದಿನಗಳಲ್ಲಿ ಸ್ವಾಮಿ ದರ್ಶನಕ್ಕೆ ಬಂದಾಗ ಗಂಟೆಗಟ್ಟಲೆ ಕ್ಯೂ ನಿಲ್ಲಬೇಕು. ಸರ್ಕಾರ ಹಿರಿಯ ನಾಗರಿಕರಿಗೆ ಪ್ರತ್ಯೇಕವಾಗಿ ನೇರ ದರ್ಶನಕ್ಕೆ ಆದೇಶ ನೀಡಿದೆ. ಈ ಆದೇಶವನ್ನು ಬೆಟ್ಟದಲ್ಲಿ ಜಾರಿಗೊಳಿಸಬೇಕು. ●ಸಾವಿತ್ರಮ್ಮ, ಹಿರಿಯ ನಾಗರಿಕರು. ಮಂಡ್ಯ.

ಹಿರಿಯ ನಾಗರಿಕರು, ದಿವ್ಯಾಂಗರು, ಗರ್ಣಿಣಿ ಮಹಿಳೆಯರು, ಮಗುವಿನ ಜೊತೆ ಬಂದಿರುವ ಮಹಿಳೆಯರನ್ನು 500ರೂ ದರ್ಶನದ ವಿಶೇಷ ದರ್ಶನ ಸಾಲಿನಲ್ಲಿ ನೇರವಾಗಿ ಬಿಡಲು ಸಿಬ್ಬಂದಿಗೆ ತಿಳಿಸಿ ಸೂಚನೆ ನೀಡಲಾಗಿದೆ. ಒಂದೊಮ್ಮೆ ಆ ರೀತಿ ಸಮಸ್ಯೆಯಾಗಿದ್ದಲ್ಲಿ 500 ರೂ. ವಿಶೇಷ ಪ್ರವೇಶ ದ್ವಾರದ ಬಳಿ ಬೋರ್ಡ್‌ ಹಾಕಲು ಕ್ರಮವಹಿಸಲಾಗುವುದು. 2 ಎಕರೆಯಲ್ಲಿದ್ದ ಜೋಳದ ●ಗೀತಾ ಹುಡೇದ, ಮಹದೇಶ್ವರ ಕ್ಷೇತ್ರ ಪ್ರಾಧಿಕಾರದ ಕಾರ್ಯದರ್ಶಿ

-ವಿನೋದ್‌ ಎನ್‌.ಗೌಡ

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.