ಲಸಿಕೆ ಪಡೆದರೂ ನಾಲ್ವರು ವೈದ್ಯರಿಗೆ ಕೋವಿಡ್ ಪಾಸಿಟಿವ್!
ಕಳೆದ 7 ದಿನಗಳಲ್ಲಿ ಚಾ.ನಗರ ಜಿಲ್ಲಾಸ್ಪತ್ರೆಯ 7 ವೈದ್ಯರಿಗೆ ಕೋವಿಡ್
Team Udayavani, Jan 30, 2021, 8:44 AM IST
ಚಾಮರಾಜನಗರ: ಕೋವಿಡ್ ಪ್ರಕರಣಗಳು ಗಣನೀಯ ಪ್ರಕರಣದಲ್ಲಿ ಕಡಿಮೆಯಾಗುತ್ತಿವೆ ಎಂದು ನಿಟ್ಟುಸಿರು ಬಿಡುತ್ತಿರುವ ನಡುವೆಯೇ ಜಿಲ್ಲಾಸ್ಪತ್ರೆಯ ಏಳು ಮಂದಿ ವೈದ್ಯರಿಗೆ ಕೋವಿಡ್ ಪಾಸಿಟಿವ್ ಆಗಿರುವುದು ಆತಂಕಕಾರಿಯಾಗಿದೆ. ಇವರಲ್ಲಿ ನಾಲ್ವರು ವೈದ್ಯರು ಕೋವಿಡ್ ಲಸಿಕೆ ಪಡೆದಿದ್ದರು ಎಂಬುದು ಗಮನಾರ್ಹ.
ಜಿಲ್ಲಾ ಕೋವಿಡ್ ಆಸ್ಪತ್ರೆಯ, ಕೋವಿಡ್ ನೋಡೆಲ್ ಅಧಿಕಾರಿಯಾಗಿರುವ ಅರವಳಿಕೆ ತಜ್ಞ ಡಾ. ಮಹೇಶ್, ಸಿಮ್ಸ್ ಸಹಾಯಕ ಪ್ರಾಧ್ಯಾಪಕ ಡಾ. ಹರ್ಷ, ವೈದ್ಯರಾದ ಡಾ. ದಮಯಂತಿ, ಡಾ. ಗಿರೀಶ್ ಪಾಟೀಲ್, ಡಾ. ಶಶಾಂಕ್, ಡಾ. ನವೀನ್‌ಚಂದ್ರ, ಡಾ. ಚೇತನ್ ಅವರಿಗೆ ಕಳೆದ 7 ದಿನಗಳ ಅಂತರದಲ್ಲಿ ಕೋವಿಡ್ ಪಾಸಿಟಿವ್ ಆಗಿದೆ.
ಕೋವಿಡ್ ಆಸ್ಪತ್ರೆಯ ನೋಡೆಲ್ ಅಧಿಕಾರಿ ಡಾ. ಮಹೇಶ್ ಅವರು, ಪ್ರತಿದಿನ 90-100 ಪ್ರಕರಣಗಳಿದ್ದ ಸಂದರ್ಭದಲ್ಲಿ ಆಸ್ಪತ್ರೆಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದರೂ ಕೋವಿಡ್ ಸೋಂಕು ತಗುಲಿರಲಿಲ್ಲ. ಈಗ ಕೋವಿಡ್ ಆಸ್ಪತ್ರೆಯಲ್ಲಿ ಮೂರ್ನಾಲ್ಕು ಪ್ರಕರಣಗಳಿರುವಾಗ ಕೋವಿಡ್ ಪಾಸಿಟಿವ್ ಆಗಿರುವುದು ವಿಪರ್ಯಾಸ.
ಇದನ್ನೂ ಓದಿ:ಪಕ್ಷಕ್ಕೆ ಹಮಾಲಿ ಮಾಡಿದ್ದು ನಾವು, ಬೇರೆಯವರು ಅಧಿಕಾರ ಅನುಭವಿಸುತ್ತಿದ್ದಾರೆ: ರೇಣುಕಾಚಾರ್ಯ
ಕೋವಿಡ್ ಪಾಸಿಟಿವ್ ಆಗಿರುವ ಏಳು ಮಂದಿ ವೈದ್ಯರೂ ಚಿಕಿತ್ಸೆ ಪಡೆಯುತ್ತಿದ್ದು, ಹೆಚ್ಚಿನ ಸೋಂಕು ಲಕ್ಷಣಗಳಿಲ್ಲ. ಓರ್ವ ವೈದ್ಯರು ಮಾತ್ರ ಮಗು ಮನೆಯಲ್ಲಿರುವ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೆಲ್ಲರೂ ಹೋಂ ಐಸೋಲೇಷನ್ ಆಗಿದ್ದಾರೆ. ಇವರಲ್ಲಿ ನಾಲ್ವರು ವೈದ್ಯರು ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯ ಒಂದು ಡೋಸ್ ಪಡೆದಿದ್ದರು.
ಕೋವಿಡ್ ನಿರೋಧಕ ಲಸಿಕೆ ಪಡೆದಿದ್ದರೂ ಸೋಂಕು ತಗುಲಿರುವ ಬಗ್ಗೆ ಸ್ಪಷ್ಟೀಕರಣ ನೀಡಿದ ಕೋವಿಡ್ ನೋಡೆಲ್ ಅಧಿಕಾರಿ ಡಾ. ಮಹೇಶ್, ನಾವು ಇದೀಗ ಕೋವಿಡ್ ಲಸಿಕೆ ಪಡೆದಿದ್ದೇವೆ. ಲಸಿಕೆಯ ಎರಡನೇ ಡೋಸ್ ಪಡೆದ ಬಳಿಕವಷ್ಟೇ ಅದು ಪರಿಣಾಮ ಬೀರುತ್ತದೆ. ಹಾಗಾಗಿ ಒಂದು ಡೋಸ್ ಲಸಿಕೆ ಪಡೆದವರು, ತಮಗೆ ಕೋವಿಡ್ ಬರುವುದಿಲ್ಲ ಎಂದು ಮೈಮರೆಯುಂತಿಲ್ಲ ಎಂದರು.
ಇನ್ನು ಮೂರು ದಿನಗಳಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಶೂನ್ಯ ರೋಗಿ!: ಈ ನಡುವೆ ಇನ್ನೊಂದು ಸಮಾಧಾನಕರ ಸಂಗತಿ ಎಂದರೆ ಎರಡು ಮೂರು ದಿನಗಳಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆ ಕೋವಿಡ್ ರೋಗಿಗಳಿಂದ ಮುಕ್ತವಾಗಲಿದೆ. ಪ್ರಸ್ತುತ ಮೂವರು ಕೋವಿಡ್ ಪಾಸಿಟಿವ್ ಹೊಂದಿರುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಗುಣಮುಖರಾಗುತ್ತಿದ್ದು ಇನ್ನು ಮೂರು ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ. ಪ್ರಸ್ತುತ 17 ಮಂದಿ ಸೋಂಕಿತರು ಹೋಂ ಐಸೋಲೇಷನ್‌ನಲ್ಲಿದ್ದಾರೆ. ಜಿಲ್ಲೆಯಲ್ಲಿ ಈಗ 21 ಸಕ್ರಿಯ ಪ್ರಕರಣಗಳಿವೆ.
ಇದನ್ನೂ ಓದಿ: ಮಹಾನ್ ವಂಚಕ ಯುವರಾಜನ ಮತ್ತೂಂದು ದೋಖಾ ಬಯಲು
ನೆಗೆಟಿವ್ ಆದರೂ ಕೋವಿಡ್ ಲಕ್ಷಣ: ಉಸಿರಾಟದ ತೊಂದರೆ ಮತ್ತು ಸುಸ್ತಿನ ಕಾರಣ ಜನವರಿ ಆರಂಭದಲ್ಲಿ ಆಸ್ಪತ್ರೆಯಲ್ಲಿ 4-5 ಮಂದಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರಿಗೆ ಕೋವಿಡ್ ಪಾಸಿಟಿವ್ ಇರಲಿಲ್ಲ. ಕೋವಿಡ್ ಸೋಂಕು 21 ದಿನಗಳವರೆಗೆ ಗಂಟಲಲ್ಲಿರುತ್ತದೆ. ಅನಂತರ ಪರೀಕ್ಷೆಯಲ್ಲಿ ಸೋಂಕು ಪತ್ತೆಯಾಗುವುದಿಲ್ಲ. ಆರಂಭದಲ್ಲಿ ಹೊರಗೆ ಚಿಕಿತ್ಸೆ ಪಡೆದು ನಂತರ ಉಸಿರಾಟದ ತೊಂದರೆಯಾದಾಗ ಅಂಥ ರೋಗಿಗಳು ಬರುತ್ತಾರೆ. ಆಗ ಅವರಿಗೆ ನೆಗೆಟಿವ್ ಬಂದರೂ ಕೋವಿಡ್ ಚಿಕಿತ್ಸೆ ನೀಡಬೇಕಾಗುತ್ತದೆ ಎಂದು ವೈದ್ಯರು ಹೇಳುತ್ತಾರೆ. ಈಗ ಅಂಥ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿವೆ.
ಆದ್ದರಿಂದ ನೆಗಡಿ, ಕೆಮ್ಮು, ಜ್ವರದ ಲಕ್ಷಣ ಕಂಡು ಬಂದರೆ ಜನರು ನಿರ್ಲಕ್ಷ್ಯ ವಹಿಸಬೇಡಿ. ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಿರಿ ಎಂದು ವೈದ್ಯರು ಸಲಹೆ ನೀಡುತ್ತಾರೆ. ಅಲ್ಲದೇ ಜನರು ಇನ್ನೂ ಕೆಲವು ದಿನಗಳ ಕಾಲ ಸಾಮಾಜಿಕ ಅಂತರ ಕಾಪಾಡುವಿಕೆ, ಮಾಸ್ಕ್ ಧರಿಸುವುದು, ಸೋಪಿನಿಂದ ಕೈ ತೊಳೆದು ಕೊಳ್ಳುವುದನ್ನು ಮುಂದುವರೆಸುವುದು ಸೂಕ್ತ ಎಂದು ತಿಳಿಸಿದ್ದಾರೆ.
ಕೆ.ಎಸ್. ಬನಶಂಕರ ಆರಾಧ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.