ಶಕ್ತಿ ಯೋಜನೆ: ನಾರಿ ಶಕ್ತಿಗೆ ಮುರಿದ ಬಸ್ ಬಾಗಿಲು!
Team Udayavani, Jul 30, 2023, 10:42 AM IST
ಯಳಂದೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಮೇಲೆ ವಿವಿಧ ಕಡೆ ಬಸ್ ಹತ್ತುವ ಧಾವಂತದಲ್ಲಿ ಬಾಗಿಲು ಮುರಿಯುತ್ತಿದ್ದು, ಪಟ್ಟಣದ ಬಸ್ ನಿಲ್ದಾಣದಲ್ಲೂ ಶನಿವಾರ ಇಂತಹದೊಂದು ಘಟನೆ ನಡೆದಿದೆ.
ಬಿಳಿಗಿರಿರಂಗನ ಬೆಟ್ಟದಲ್ಲಿ ಶನಿವಾರ ಏಕಾದಶಿ, ದೇವರ ವಾರವಾಗಿರುವು ದರಿಂದ ವಿಶೇಷ ಪೂಜಾ ಕೈಂಕರ್ಯ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು, ಬೆಂಗಳೂರು, ಮಂಡ್ಯ ಸೇರಿ ವಿವಿಧ ಜಿಲ್ಲೆಗಳಿಂದ ಸಾವಿರಾರು ಜನರು ಪಟ್ಟಣ ಬಸ್ ನಿಲ್ದಾಣಕ್ಕೆ ಆಗಮಿಸುತ್ತಾರೆ. ಆದರೆ, ಬೆಟ್ಟಕ್ಕೆ ಹೋಗಲು ಸಾಕಷ್ಟು ಕೆಎಸ್ ಆರ್‌ಟಿಸಿ ಬಸ್‌ಗಳ ಸೌಲಭ್ಯ ಇಲ್ಲ. ಹೀಗಾಗಿ ಬಸ್‌ಗೆ ಏರಲು ನೂಕುನುಗ್ಗಲು ಉಂಟಾಗುತ್ತಿದೆ. ಮಹಿಳೆಯರೇ ಹೆಚ್ಚಾ ಗಿದ್ದರಿಂದ ಬಸ್ ಹತ್ತುವ ಧಾವಂತದಲ್ಲಿ ಬಾಗಿಲನ್ನು ಹಿಡಿದು ಹತ್ತಿದ್ದರಿಂದ ಮುರಿದು ಬಂದಿದೆ.
ಪ್ರತಿ ಶನಿವಾರ, ಭಾನುವಾರ ಹಾಗೂ ಸರ್ಕಾರಿ ರಜಾ ದಿನಗಳಲ್ಲಿ ಬೆಟ್ಟಕ್ಕೆ ಭಕ್ತರು, ಪ್ರವಾಸಿಗರ ದಂಡೇ ಆಗಮಿಸುತ್ತದೆ. ಆದರೆ, ಇಲ್ಲಿಗೆ ಹೆಚ್ಚುವರಿ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಒದಗಿಸಬೇಕು ಎಂಬ ಬೇಡಿಕೆ ಇದ್ದರೂ, ನಿಗಮದ ಅಧಿಕಾರಿಗಳು ಈ ಬಗ್ಗೆ ತಲೆಕಡಿಸಿಕೊಂಡಿಲ್ಲ ಎಂದು ಭಕ್ತರಾದ ಮನು, ಮಲ್ಲು ಆರೋಪವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.