ಧ್ರುವಗೆ ಸೋಲಿನ ರುಚಿ ತೋರಿಸುವ


Team Udayavani, Apr 12, 2019, 2:29 PM IST

cha-
ಕೊಳ್ಳೇಗಾಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದ ಮಾದರಿಯಲ್ಲೇ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಸಂಸದ ಆರ್‌. ಧ್ರುವನಾರಾಯಣರನ್ನು ಸೋಲಿಸುವ ಸಲುವಾಗಿ ಕಣಕ್ಕೆ ಇಳಿದಿರುವುದಾಗಿ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್‌ ಪ್ರಸಾದ್‌ ಹೇಳಿದರು.
ನಗರದ ದೇವಾಂಗಪೇಟೆ ಬಡಾವಣೆಯ ವೃತ್ತ, ದೊಡ್ಡ ನಾಯಕರ ಬೀದಿ ವೃತ್ತ, ಭೀಮನಗರ ವೃತ್ತ ಮತ್ತು ಇನ್ನಿತರ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮತಯಾಚನೆಯ ಸಭೆಯಲ್ಲಿ ಹೇಳಿದರು.
 ಸ್ವಾಭಿಮಾನ ಇದೆ: ಕಾಂಗ್ರೆಸ್‌ ನೇತೃತ್ವದಲ್ಲಿ ಸರ್ಕಾರದಲ್ಲಿ ನಾನು ಕಂದಾಯ ಸಚಿವನಾಗಿ ಉತ್ತಮ ಕೆಲಸ ನಿರ್ವಹಿಸುತ್ತಿದ್ಧ ವೇಳೆ ಏಕಾಏಕಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನನ್ನನು ಸಂಪುಟದಿಂದ ಕೈಬಿಟ್ಟರು. ಸಚಿವ ಸ್ಥಾನದಿಂದ ಕೈಬಿಡುತ್ತಿದ್ದಂತೆ ಸ್ವಾಭಿಮಾನ ಬಿಡದ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಿದ್ದರಾಮಯ್ಯರವರ ವಿರುದ್ಧ ತೊಡೆತಟ್ಟಿ ಹೊರಗೆ ಬಂದೆ ಎಂದರು.
ಜನತೆ ಒತ್ತಾಯದ ಮೇರೆಗೆ ಸ್ಫರ್ಧೆ: ನಂತರ ನಂಜನ ಗೂಡು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಸಂಸದ ಆರ್‌.ಧ್ರುವನಾರಾಯಣ್‌, ಸಿದ್ದ ರಾಮಯ್ಯರವರ ಒಳಸಂಚಿಗೆ ಒಳಗಾಗಿ ನನ್ನಮೇಲೆ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿ, ನನ್ನನ್ನು ಸೋಲುವಂತೆ ಮಾಡಿದ್ದಾರೆ ಎಂದು ಸ್ವಾಭಿಮಾನ ಬಿಡದ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ಘೋಷಣೆ ಮಾಡಿದ್ದೆ, ಆದರೆ ಕ್ಷೇತ್ರದ ಅಭಿಮಾನಿಗಳು ಸಿದ್ದರಾಮಯ್ಯರನ್ನು ಸಲ್ಲಿಸಿದ್ದು, ನಂತರ ಅವರ ಸಂಪುಟದ ಸಚಿವರು ಸೋತ್ತಿದ್ದಾರೆ. ಉಳಿದ ಸಂಸದ ಆರ್‌.ಧ್ರುವನಾರಾಯಣ ಮಾತ್ರ ಉಳಿದಿದ್ದು, ಅವರಿಗೂ ಸೋಲಿನ ರುಚಿ ತೋರಿಸಬೇಕೆಂದು ಒತ್ತಾಯಿಸಿದ ಮೇರೆಗೆ ಸ್ಪರ್ಧೆ ಮಾಡಿದ್ದಾನೆ ಎಂದರು.
ದೇಶಾದ್ಯಂತ ಮೋದಿ ಅಲೆ: ಲೋಕಸಭೆಯ 9 ಚುನಾವಣೆಗಳನ್ನು ಎದುರಿಸಿದ್ದು, ಸೋಲು-ಗೆಲುವನ್ನು ಕಂಡಿದ್ದೇನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ಅಲೆಯಿದ್ದು, ದೇಶಾದ್ಯಂತ ಬಿಜೆಪಿಗೆ ಹೆಚ್ಚು ಸ್ಥಾನ ಲಭಿಸಿದ್ದು, ಅವರ ಬೆಂಬಲಕ್ಕೆ ನನ್ನನ್ನು ಆಯ್ಕೆ ಮಾಡಿ ಕಳುಹಿಸಿ ಕೊಡಬೇ ಕೆಂದು ಮತದಾರರಲ್ಲಿ ಮನವಿ ಮಾಡಿದರು.
ಭೀಮನಗರ: ದಲಿತರ ಕಾಲೋನಿಗೆ ಭೀಮನಗರ ವೆಂದು ನಾನು ಸಂಸದರಾಗಿದ್ದ ವೇಳೆಯಲ್ಲಿ ನಾಮಕರಣ ಮಾಡಿಸಿದ್ದೇ, ಬಡಾವಣೆಯಲ್ಲಿ ವಾಸಿಸುವ ಜನರು ಸ್ವಾಭಿಮಾನ ಬೆಳೆಸಿಕೊಳ್ಳಲೆಂದು ಈ ಹೆಸರು ಇಡಲಾಯಿತು. ಮತ್ತು ಬಡಾವಣೆಯ ಎರಡು ಬದಿಯಲ್ಲಿ ನನ್ನ ಸಂಸದರ ಕ್ಷೇತ್ರಾಭಿವೃದ್ಧಿ ನಿಧಿಯಿಂದ ಭೀಮನಗರವೆಂದು ಕಮಾನು ನಿರ್ಮಾಣ ಮಾಡಿ ದಲಿತರ ಸ್ವಾಭಿಮಾನ ಹೆಚ್ಚಿಸಿದ್ದೇನೆ ಎಂದರು.
ಅಂಬೇಡ್ಕರ್‌ ಭವನ: ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಸಚಿವನಾಗಿದ್ದ ವೇಳೆ ದಲಿತರಿಗಾಗಿ ಒಂದು ಸಮುದಾಯ ಭವನ ನಿರ್ಮಾಣ ಮಾಡಬೇಕೆಂದು ಭಯಸಿದ್ದೇ, ಅದರಲ್ಲಿ ನಗರದ ಹೃದಯ ಭಾಗದಲ್ಲಿ ಇದ್ದ ಸ್ಥಳದಲ್ಲಿ ಭವನ ನಿರ್ಮಾಣ
ಮಾಡಲು ಕೈಗೊಳ್ಳುತ್ತಿದ್ದಂತೆ ಇತರ ಸಮಾಜದವರು ಈ ಸ್ಥಳವನ್ನು ನಮಗೆ ನೀಡಬೇಕೆಂದು ಒತ್ತಡ ಹೇರಿದರು. ಅವರ ಒತ್ತಡಕ್ಕೆ ಮಣಿಯದೆ ನಾನು ಭವನ ನಿರ್ಮಾಣ ಮಾಡಲು ಭೂಮಿ ಪೂಜೆ ಮಾಡಿದ್ದೆ, ಆದರೆ ಇದುವರೆಗೂ ಭವನ ಉದ್ಘಾಟನೆಯಾಗಿಲ್ಲ. ಭೂಮಿಪೂಜೆ ಮಾಡಿರುವ ನಾನು ಸಂಸದರಾಗಿ ನನ್ನಿಂದಲೇ ಉದ್ಘಾಟನೆಯಾಗ ಬೇಕಾಗಿ ರುವ ವಾತಾವರಣ ನಿರ್ಮಾಣವಾಗಿದೆ ಎಂದು ತಿಳಿಸಿದರು.
ಮೋದಿ ಕೈ ಬಲ ಪಡಿಸಿ: ಏ.18ರ ಚುನಾವಣೆಯಲ್ಲಿ ಬಿಜೆಪಿಗೆ ಅತಿ ಹೆಚ್ಚು ಮತ ನೀಡಿ, ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಿ ಕಳುಹಿಸಿಕೊಡಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿರವರ ಕೈಬಲಪಡಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ಶಾಸಕ ಹರ್ಷವರ್ಧನ್‌, ಮಾಜಿ ಶಾಸಕರಾದ ಜಿ.ಎನ್‌.ನಂಜುಂಡಸ್ವಾಮಿ, ಗುರುಸ್ವಾಮಿ, ಮಾನಸ ಕಾಲೇಜು ಶಿಕ್ಷಣ ಸಂಸ್ಥೆಯ ದತ್ತೇಶ್‌, ಮುಖಂಡರಾದ ರಾಚಯ್ಯ, ಸವೇಶ್‌ ಬಸವಯ್ಯ, ಇತರರು ಇದ್ದರು.

ಟಾಪ್ ನ್ಯೂಸ್

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Mahadeshwara-Betta-CM-Dcm

Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

Kollegala: ಸ್ಕೂಟಿಯಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.