ಕೂಲಿ ಕಾರ್ಮಿಕರಿಗೆ ಶ್ರಮಯೋಗಿ ಮಾನ್‌ಧನ್‌ ಆಸರೆ


Team Udayavani, Dec 8, 2019, 3:00 AM IST

koolikarmika

ಗುಂಡ್ಲುಪೇಟೆ: ಕೂಲಿ ಕಾರ್ಮಿಕರು ತಮ್ಮ ವೃದ್ಧಾಪ್ಯದಲ್ಲಿ ತಮ್ಮ ಕುಟುಂಬ ನಿರ್ವಹಣೆ ಮಾಡಲು ಕಷ್ಟವಾಗಬಾರದು ಎಂಬ ಸದುದ್ದೇಶದಿಂದ ಕೇಂದ್ರ ಸರ್ಕಾರದ ಕಾರ್ಮಿಕ ಕಲ್ಯಾಣ ಇಲಾಖೆ ವತಿಯಿಂದ ಶ್ರಮಯೋಗಿ ಮಾನ್‌ಧನ್‌ಯೋಜನೆಯನ್ನು ಅನುಷ್ಠಾನಗೊಳಿಸಿದೆ ಎಂದು ಕಾರ್ಮಿಕ ಕಲ್ಯಾಣ ಇಲಾಖೆ ಅಧಿಕಾರಿ ನಾರಾಯಣ ಮೂರ್ತಿ ಹೇಳಿದರು.

ಪಟ್ಟಣದ ಟಿ.ಬಿ.ಬಡಾವಣೆಯಲ್ಲಿರುವ ತಾಲೂಕು ಬೀಡಿ ಕಾರ್ಮಿಕರ ಅಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಿಂಚಿಣಿ ಅದಾಲತ್‌ ಮತ್ತು ಆರೋಗ್ಯ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಕಾರ್ಮಿಕರ ಕಲ್ಯಾಣ ಇಲಾಖೆಯ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರು ಕೂಲಿ ಕಾರ್ಮಿಕರು ತಮ್ಮ ನಿವೃತ್ತಿ ಜೀವನದಲ್ಲಿ ಕುಟುಂಬ ನಿರ್ವಹಣೆ ಮಾಡಲು ಅನುಕೂಲವಾಗುವಂತೆ ಶ್ರಮಯೋಗಿ ಮಾನ್‌ಧನ್‌ಯೋಜನೆ (ಪಿಎಂಎಸ್‌ವೈಎಂ) ಅಸಂಘಟಿಕ ಕಾರ್ಮಿಕರ ಕನಿಷ್ಠ ಖಾತರಿ ಪಿಂಚಣಿ ಯೋಜನೆ ಜಾರಿಗೆ ತಂದಿದ್ದಾರೆ.

ಈ ಯೋಜನೆಯ ಫ‌ಲಾನುಭವಿಗೆ 60 ವರ್ಷಗಳ ನಂತರ ಜೀವನ ಪರ್ಯಂತ ಮಾಸಿಕ ಮೂರು ಸಾವಿರ ರೂ.ಗಳನ್ನು ಪಿಂಚಣಿ ರೂಪದಲ್ಲಿ ಪಡೆಯಬಹುದಾಗಿದೆ. ಈ ಪಿಂಚಣಿ ಕಾರ್ಡ್‌ ಪಡೆಯಲು 18-40 ವರ್ಷಗಳಾಗಿರಬೇಕು. ಮಾಸಿಕ ಅದಾಯ ಹದಿನೈದು ಸಾವಿರ ರೂ.ಗಳನ್ನು ದಾಟಿರಬಾರದು ಎಂದು ಮಾಹಿತಿ ನೀಡಿದರು.

ದಾಖಲಾತಿಗಾಗಿ ಅಧಾರ್‌ಕಾರ್ಡ್‌, ಬ್ಯಾಂಕ್‌ ಪಾಸ್‌ ಪುಸ್ತಕ ಕಡ್ಡಾಯವಾಗಿದೆ. ತಾಲೂಕಿನ ಕೂಲಿ ಕಾರ್ಮಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಮಿಕ ಇಲಾಖೆ ಅಧಿಕಾರಿ ಗಣೇಶ್‌ ಮಾತನಾಡಿ, ಕೇಂದ್ರ ಸರ್ಕಾರ ಈಗಾಗಲೇ ಕೂಲಿ ಕಾರ್ಮಿಕರ ಶ್ರಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಆದರೂ ಸಹ ಅನಕ್ಷರತೆಯ ಕಾರಣ ಕೂಲಿ ಕಾರ್ಮಿಕರು ಸರ್ಕಾರದ ಯೋಜನೆಯನ್ನು ಬಳಸಿಕೊಳ್ಳುವಲ್ಲಿ ಸಂಪೂರ್ಣವಾಗಿ ವಿಫ‌ಲರಾಗಿದ್ದಾರೆ.

ಕೂಲಿ ಕಾರ್ಮಿಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಇದರಿಂದ ಇಲಾಖೆಯ ಎಲ್ಲಾ ಯೋಜನೆಯ ಅನುಕೂಲತೆಯನ್ನು ಪಡೆಯಲು ಸಾಧ್ಯವಾಗಲಿದೆ. ಇಲಾಖೆ ಮೂಲಕವೂ ಯೋಜನೆಗಳ ಬಗ್ಗೆ ತಾಲೂಕು ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು. ಕಾರ್ಮಿಕ ಸಂಘಟನೆ ಅಧ್ಯಕ್ಷ ಸಿದ್ಧರಾಜು, ಕಾರ್ಮಿಕರ ಆಸ್ಪತ್ರೆಯ ವೈದ್ಯೆ ಡಾ.ಸಂಜೀತಾ, ನರ್ಸ್‌ ಜಿ.ಅನಿತಾ ಹಾಗೂ ಅಟೆಂಡರ್‌ ರಂಗಸ್ವಾಮಿ ಸೇರಿದಂತೆ ಕೂಲಿ ಕಾರ್ಮಿಕರು, ಕುಟುಂಬದವರು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.