ಸಿಂಗಾನಲ್ಲೂರು ರಸ್ತೆ ಅಭಿವೃದ್ಧಿಗೆ ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ ಭರವಸೆ
Team Udayavani, Feb 6, 2021, 1:47 PM IST
ವಿಧಾನಪರಿಷತ್ತು: ಮಲೆಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ಬರುವ ಸಿಂಗಾನಲ್ಲೂರು ಗ್ರಾಮಕ್ಕೆ ರಸ್ತೆ ಹಾಗೂ ಅಲ್ಲಿಗೆ ಬಂದು ಭಕ್ತಾದಿಗಳು ತಂಗಲು ಮೂಲಸೌಕರ್ಯಗಳನ್ನು ಕಲ್ಪಿಸುವ ಯೋಜನೆಯನ್ನು ತಕ್ಷಣ ಕಾರ್ಯಗತಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಆರ್.ಧರ್ಮಸೇನ ವಿಷಯ ಪ್ರಸ್ತಾಪಿಸಿ, ಸಿಂಗಾನಲ್ಲೂರು ವರನಟ ಡಾ.ರಾಜಕುಮಾರ ಅವರ ಊರು. ಮಲೆಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳು ಸಿಂಗಾನಲ್ಲೂರು ಗ್ರಾಮದಲ್ಲಿ ಒಂದು ರಾತ್ರಿ ವಾಸ್ಯವ್ಯ ಮಾಡಿ ಮುಂದಕ್ಕೆ ಹೋಗುವ ಪ್ರತೀತಿ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಬರುತ್ತಾರೆ. ಆದರೆ, ಅವರಿಗೆ ಸಿಂಗಾನಲ್ಲೂರಿಗೆ ಬರಲು ಸರಿಯಾದ ರಸ್ತೆ ಇಲ್ಲ ಮತ್ತು ಅಲ್ಲಿ ತಂಗಲು ಮೂಲಭೂತ ಸೌಕರ್ಯಗಳಿಲ್ಲ. ಈ ಬಗ್ಗೆ 2017ರಲ್ಲಿ ಪ್ರಸ್ತಾವನೆ ಸಲ್ಲಿಸಿದ್ದೆ. 30 ಲಕ್ಷ ರೂ.ಗೆ ಯೋಜನೆಗೆ ಒಪ್ಪಿಗೆ ಸಿಕ್ಕಿತ್ತು.ಆದರೆ, ಈವರೆಗೆ ಅದು ಕಾರ್ಯಗತಗೊಂಡಿಲ್ಲ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ವಿಚಾರ ಈಗಷ್ಟೇ ನನ್ನ ಗಮನಕ್ಕೆ ಬಂದಿದೆ. ತಕ್ಷಣ ಯೋಜನೆಯನ್ನು ಕಾರ್ಯಗತೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದನ್ನೂ ಓದಿ : ಕೃಷಿ ಸುಧಾರಣೆಯು ದೇಶಿಯ ನೀತಿಯಾಗಿದೆ : ಬ್ರಿಟಿಷ್ ಸರ್ಕಾರ
ಇದಕ್ಕೂ ಮೊದಲು ಧರ್ಮಸೇನ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಎರಡು ವರ್ಷಗಳಲ್ಲಿ ಮೈಸೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣನ ರಸ್ತೆಗಳನ್ನು ಅಭಿವೃದ್ಧಿಪಡಿಸಲು ವಿವಿಧ ಯೋಜನೆಗಳಡಿ ನಿಗದಿಪಡಿಸಿದ ಒಟ್ಟು 26,605.63 ಲಕ್ಷ ರೂ. ಪೈಕಿ 3,539.39 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. 13,066.24 ಲಕ್ಷ ರೂ. ಬಿಡುಗಡೆ ಮಾಡಬೇಕಿದೆ. ಅದೇ ರೀತಿ ಚಾಮರಾಜನಗರ ಜಿಲ್ಲೆ ವ್ಯಾಪ್ತಿಯ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ವಿವಿಧ ಯೋಜನೆಗಳಡಿ 19,082.39 ಲಕ್ಷ ರೂ.ಗಳಲ್ಲಿ 7,056.27 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. 12,026.12 ಲಕ್ಷ ರೂ. ಬಿಡುಗಡೆ ಮಾಡಲು ಕ್ರಮಕೈಗೊಳ್ಳಬೇಕಿದ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.