ಶೀಘ್ರದಲ್ಲೇ ಬಸ್‌ನಿಲ್ದಾಣ ಕಾಮಗಾರಿ ಪೂರ್ಣ
ನಿಲ್ದಾಣದ ಮೊದಲನೆ ಅಂತಸ್ತು ಕಾಮಗಾರಿ ಎರಡು ತಿಂಗಳ ಒಳಗಾಗಿ ಪೂರ್ಣ: ವಿನೋದ್‌ಕುಮಾರ್
Team Udayavani, Jul 5, 2019, 10:00 AM IST
ಪಟ್ಟಣದಲ್ಲಿ ರಸ್ತೆ ಸಾರಿಗೆ ಸಂಸ್ಥೆ ಯಿಂದ ನಿರ್ಮಾಣವಾಗುತ್ತಿರುವ ಮೊದಲನೇ ಅಂತಸ್ತಿನ ಬಸ್‌ನಿಲ್ದಾಣದ ಕಟ್ಟಡ.
ಕೊಳ್ಳೇಗಾಲ: ರಸ್ತೆ ಸಾರಿಗೆ ಇಲಾಖೆಗೆ ಎಲ್ಲಾ ತಾಲೂಕುಗಳಲ್ಲಿ ಸುಸರ್ಜಿತ ಬಸ್ ನಿಲ್ದಾಣ ನಿರ್ಮಿಸಿ ಪ್ರಯಾಣಿಕರಿಗೆ ಸೌಕರ್ಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಟ್ಟಣದ ಬಸ್ ನಿಲ್ದಾಣ ನಿರ್ಮಾಣದ ಕಾಮಗಾರಿ ಬರದಿಂದ ಸಾಗುತ್ತಿದ್ದು, ಮೊದಲನೇ ಅಂತಸ್ತಿನ ಕಾಮಗಾರಿ ಪೂರ್ಣಗೊಂಡಿದೆ.
ರಾಜ್ಯದಲ್ಲಿ ಕಳೆದ ಬಾರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಟ್ಟಣದಲ್ಲಿ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಬಸ್ ನಿಲ್ದಾಣ ನಿರ್ಮಾಣಕ್ಕೆ 22 ಕೋಟಿ ರೂ. ಅಂದಾಜಿನಲ್ಲಿ 3 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡಿಸುವಲ್ಲಿ ಕ್ಷೇತ್ರದ ಶಾಸಕ ಎಸ್.ಜಯಣ್ಣ ಮುಂದಾಗಿದ್ದನ್ನು ಸ್ಮರಿಸಬಹುದು.
ವಿಭಜನೆ: ತಾಲೂಕು ಕೇಂದ್ರದಲ್ಲಿ ಎರಡು ವಿಧಾನಸಭಾ ಕ್ಷೇತ್ರ ಹೊಂದಿರುವ ಕೊಳ್ಳೇಗಾಲ ಅತ್ಯಂತ ದೊಡ್ಡ ತಾಲೂಕಾಗಿದ್ದು, ಸರ್ಕಾರ ಹನೂರನ್ನು ಬೇರ್ಪಡಿಸಿ ಪ್ರತ್ಯೇಕ ತಾಲೂಕು ಕೇಂದ್ರವನ್ನಾಗಿ ಮಾಡುವ ಮೂಲಕ ರಾಜ್ಯದಲ್ಲೇ ಬೃಹತ್ ತಾಲೂಕು ಕೇಂದ್ರವಾಗಿದ್ದನ್ನು ಎರಡು ತಾಲೂಕು ಕೇಂದ್ರವನ್ನಾಗಿ ಮಾಡಿ ಜನರಿಗೆ ಮತ್ತಷ್ಟು ಸೇವಾ ಸೌಕರ್ಯಗಳನ್ನು ಕಲ್ಪಿಸಿಕೊಡುವಲ್ಲಿ ಸರ್ಕಾರ ಮುಂದಾಗಿದೆ.
ಪ್ರಸಿದ್ಧ ದೇವಾಲಯ: ತಾಲೂಕು ಕೇಂದ್ರದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯ ಮತ್ತು ಅಂತಾರಾಜ್ಯದಿಂದ ಲಕ್ಷಾಂತರ ಭಕ್ತರು ಆಗಮಿಸಿ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಹಾಗೂ ಅಪಾರ ಆದಾಯ ತಂದುಕೊಡುವ ದೇವಾಲಯ ಮತ್ತು ತಾಲೂಕಿನ ಶಿವನಸಮುದ್ರದ ಸಮೂಹ ದೇವಾಲಯ ಮತ್ತು ಗಗನಚುಕ್ಕಿ, ಭರಚುಕ್ಕಿ ಜಲಪಾತ, ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಾಲಯ, ಕುರುಬನಕಟ್ಟೆಯ ಚೆನ್ನಯ್ಯ, ಲಿಂಗಯ್ಯ ಗದ್ದುಗೆ ಸೇರಿದಂತೆ ಅನೇಕ ಪವಾಡ ಪುರುಷರ ನೆಲೆಬೀಡಿನ ದೇವಾಲಯಗಳು ಖ್ಯಾತಿ ಪಡೆದಿದೆ.
ವ್ಯಾಪಾರ ಕೇಂದ್ರ: ಪವಾಡ ಪುರುಷರು ನೆಲೆಸಿರುವ ಸ್ಥಳಗಳಿಗೆ ಭಕ್ತಾದಿಗಳು ಮತ್ತು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡೇ ವೀಕ್ಷಣೆ ಮಾಡಿ ರೇಷ್ಮೆನಗರಿ ಎಂದು ಖ್ಯಾತಿ ಪಡೆದಿರುವ ಕೊಳ್ಳೇಗಾಲದಲ್ಲಿ ರೇಷ್ಮೆ ಸೀರೆ ಮತ್ತು ಬಟ್ಟೆಗಳನ್ನು ಖರೀದಿಸಿ ವ್ಯಾಪಾರ ಕೇಂದ್ರವಾಗಿ ಹೆಸರುವಾಸಿಯಾಗಿತ್ತು.
ಬರದ ಸಿದ್ಧತೆ: ದೇವಾಲಯ ಮತ್ತು ಪ್ರವಾಸಿ ತಾಣಗಳ ಬಿಡಾಗಿರುವ ತಾಲೂಕು ಕೇಂದ್ರದಲ್ಲಿ ರಸ್ತೆ ಸಾರಿಗೆ ಇಲಾಖೆ ಬಸ್ ನಿಲ್ದಾಣ ನಿರ್ಮಾಣ ಮಾಡಿ ಪ್ರಯಾಣಿಕರಿಗೆ ಮತ್ತಷ್ಟು ಸೌಕರ್ಯಗಳನ್ನು ಕಲ್ಪಿಸಲು ಬಸ್ ನಿಲ್ದಾಣದ ಮೊದಲನೇ ಅಂತಸ್ತಿನ ಕಾಮಗಾರಿ ಎರಡು ತಿಂಗಳ ಒಳಗಾಗಿ ಪೂರ್ಣಗೊಳ್ಳಲು ಕಾಮಗಾರಿ ಬರದ ಸಿದ್ಧತೆ ಕಾರ್ಯ ನಡೆಯುತ್ತಿದೆ.
ತಾತ್ಕಾಲಿಕ ಬಸ್ ನಿಲ್ದಾಣ: ಪಟ್ಟಣದ ಬಸ್ ನಿಲ್ದಾಣದ ಕಾಮಗಾರಿ ಆರಂಭಗೊಂಡ ಬಳಿಕ ಪ್ರಯಾಣಿಕರಿಗೆ ಬೇರೆಡೆಗೆ ತೆರಳಲು ಅವಕಾಶ ಕಲ್ಪಿಸುವ ಸಲುವಾಗಿ ನಗರಸಭಾ ವತಿಯಿಂದ ಹೊಸ ಅಣಗಳ್ಳಿ ಬಡಾವಣೆಯ ಸಮೀಪ ಇರುವ ಖಾಸಗಿ ಜಮೀನೊಂದರಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸಿದ್ದು, ನಿಲ್ದಾಣದಲ್ಲಿ ಮೂಲಭೂತ ಸೌಕರ್ಯದ ಕೊರತೆಯಿಂದಾಗಿ ಅದನ್ನು ನಿವಾರಣೆ ಮಾಡಲು ಪ್ರಥಮ ಅಂತಸ್ತು ನಿಲ್ದಾಣವನ್ನು ಪ್ರಯಾಣಿಕ ರಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿ ಗಳು ಪ್ರಯತ್ನಿಸುತ್ತಿದ್ದಾರೆ.
ಮೊದಲನೆ ಅಂತಸ್ತು: ನಿಲ್ದಾಣದ ಮೊದಲನೆ ಅಂತಸ್ತು ಕಾಮಗಾರಿ ಎರಡು ತಿಂಗಳ ಒಳಗಾಗಿ ಪೂರ್ಣಗೊಳಿಸಲು ಕಾಮಗಾರಿಯನ್ನು ಚುರುಕುಗೊಳಿಸಿದ್ದು, ಶೀಘ್ರದಲ್ಲಿ ಸಿದ್ಧವಾಗಲಿದೆ ಎಂದು ಅಪೂರ್ವ ಕನ್ಸ್‌ಸ್ಟ್ರಕ್ಷನ್ ಪ್ರಾಜೆಕ್ಟ್ ವ್ಯವಸ್ಥಾಪಕ ವಿನೋದ್ ಕುಮಾರ್ ಉದಯವಾಣಿಗೆ ತಿಳಿಸಿದ್ದಾರೆ.
● ಡಿ.ನಟರಾಜು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.