ಪ್ರವಾಸಿತಾಣ ಅಭಿವೃದ್ಧಿ ಕಾಮಗಾರಿ ತ್ವರಿತ ಪೂರ್ಣಗೊಳಿಸಿ

Team Udayavani, Jan 16, 2023, 1:07 PM IST

tdy-11

ಚಾಮರಾಜನಗರ: ಜಿಲ್ಲೆಯಲ್ಲಿ ಅನೇಕ ಪ್ರವಾಸಿ ತಾಣಗಳ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ ಇದ್ದು, ಆರ್ಥಿಕ ಚಟುವಟಿಕೆಗಳಿಗೂ ಅನುಕೂಲವಾಗಲಿದೆ. ಇಲ್ಲಿನ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರನ್ನು ಸೆಳೆಯಲು ವಾರಾಂತ್ಯ ಪ್ರವಾಸಗಳನ್ನು ಆಯೋಜಿ ಸಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದಕ್ಕಾಗಿ ವಾರಾಂತ್ಯದಲ್ಲಿ, ರಜೆ ದಿನಗಳಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಕರೆದೊಯ್ಯುವ ವಿಶೇಷ ಪ್ಯಾಕೇಜ್‌ ಟೂರ್‌ ಆಯೋಜನೆ ಮಾಡಬಹುದು. ಕೆಎಸ್‌ಆರ್‌ ಟಿಸಿ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಅಗತ್ಯ ರೂಪುರೇಷೆ ತಯಾರಿಸಬೇಕೆಂದು ಸೂಚನೆ ನೀಡಿದರು.

ಪ್ರವಾಸಿ ತಾಣಗಳು, ಧಾರ್ಮಿಕ ಪ್ರವಾಸಿ ಕ್ಷೇತ್ರಗಳಲ್ಲಿ ಪ್ರವಾಸಿಗರು, ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಈಗಾ ಗಲೇ ಅನೇಕ ಅಭಿವೃದ್ಧಿ ಕಾಮಗಾರಿಗಳು ಜಿಲ್ಲೆಯಲ್ಲಿ ಆರಂಭವಾಗಿವೆ. ಇನ್ನೂ ಹಲವು ಕೆಲಸಗಳು ಪೂರ್ಣವಾಗಬೇಕಿದೆ. ವಿಳಂಬ ಮಾಡದೇ ಇಂತಹ ಕಡೆ ವಿಶೇಷ ಗಮನ ನೀಡಿ ಕಾಮಗಾರಿ ಆದಷ್ಟು ಶೀಘ್ರ ವಾಗಿ ನಿರ್ವಹಿಸಬೇಕೆಂದು ತಿಳಿಸಿದರು. ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ಪ್ರವಾಸಿ ಸ್ಥಳಗಳಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿ ಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದ ಕೆಲಸಗಳು ನಡೆಯಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕ ವಿಶ್ರಾಂತಿ ಧಾಮಗಳು, ಡಾರ್ಮಿಟರಿ, ಯಾತ್ರಿನಿವಾಸ ಯಾವುದೇ ಇರಲಿ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಪ್ರವಾಸಿಗರ ವಾಸ್ತವ್ಯಕ್ಕೆ ಅಗತ್ಯ ಸೌಕರ್ಯ ಅನುಕೂಲಗಳು ಇರಬೇಕು ಎಂದು ಸೂಚಿಸಿದರು.

ಬಿಳಿಗಿರಿರಂಗನಬೆಟ್ಟದ ಬಿಳಿಗಿರಿರಂಗ ನಾಥಸ್ವಾಮಿ ದೇವಾಲಯದಲ್ಲಿ ಪೂರ್ಣಗೊಳಿಸಿರುವ ನೆಲಹಾಸು ಕೆಲಸದ ವಿವರ ಪಡೆದ ಜಿಲ್ಲಾಧಿಕಾರಿಯವರು ಮಧ್ಯರಂಗ ದೇವಾಲಯದಲ್ಲಿಯೂ ನೆಲಹಾಸು ಕಾಮಗಾರಿ ಪೂರ್ಣಗೊಳ್ಳಲು ಅಗತ್ಯವಿರುವ ಪ್ರಸ್ತಾವನೆ ಸಲ್ಲಿಸಬೇಕು. ಜಿಲ್ಲೆಯಲ್ಲಿ ಅಭಿವೃಧಿª ಪಡಿಸಬೇಕಿರುವ ಪ್ರವಾಸಿ ಸ್ಥಳಗಳು ಧಾರ್ಮಿಕ ಪ್ರವಾಸಿ ಕ್ಷೇತ್ರಗಳ ಬಗ್ಗೆ ಸೂಕ್ತ ಸಮಗ್ರ ಮಾಹಿತಿಯುಳ್ಳ ಪ್ರಸ್ತಾವನೆ ನೀಡಬೇಕು ಎಂದರು.

ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್‌ ಕುಮಾರ್‌, ಲೋಕೋಪ ಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಆರ್‌.ಸಿ. ಕೆಂಪರಾಜು, ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಕಾರ್ಯಪಾಲಕ ಎಂಜಿನಿಯರ್‌ ರಮೇಶ್‌, ಜಿಲ್ಲಾ ಪರಿಸರ ಅಧಿಕಾರಿ ಉಮಾಶಂಕರ್‌, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೆಶಕ ರಾಘವೇಂದ್ರ, ಜಿಲ್ಲಾ ಛೇಂಬರ್‌ ಆಫ್ ಕಾಮರ್ಸ್‌ ಅಧ್ಯಕ್ಷ ವಿ. ಪ್ರಭಾಕರ್‌, ಜಿಲ್ಲಾ ಹೋಟೆಲ್‌ ಮಾಲೀಕರ ಸಂಘದ ಜಂಟಿ ಕಾರ್ಯದರ್ಶಿ ಅಂಕಶೆಟ್ಟಿ ಇದ್ದರು.

ಟಾಪ್ ನ್ಯೂಸ್

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.