ಮಾದಪ್ಪನ ಬೆಟ್ಟದಲ್ಲಿ ಬೆಳ್ಳಿ ರಥ ಲೋಕಾರ್ಪಣೆ


Team Udayavani, Jun 26, 2023, 2:50 PM IST

ಮಾದಪ್ಪನ ಬೆಟ್ಟದಲ್ಲಿ ಬೆಳ್ಳಿ ರಥ ಲೋಕಾರ್ಪಣೆ

ಹನೂರು: ಶ್ರೀ ಕ್ಷೇತ್ರದಲ್ಲಿ ಪ್ರತಿದಿನ ಬೆಳಗ್ಗೆ 8 ಗಂಟೆಗೆ ಬೆಳ್ಳಿ ರಥೋತ್ಸವದ ಸಮಯವನ್ನು ನಿಗದಿ ಮಾಡಲಾಗಿದ್ದು ಹರಕೆ ಹೊತ್ತ ಭಕ್ತಾದಿ ಗಳು 2,001 ರೂ. ಗಳನ್ನು ಪಾವತಿಸಬೇಕು ಎಂದು ಪ್ರಾಧಿಕಾರದ ಕಾರ್ಯದರ್ಶಿ ಕಾರ್ಯಾಯಿನಿ ದೇವಿ ಹೇಳಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಬೆಳ್ಳಿ ರಥದ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸ ಲಾಗಿತ್ತು. ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಬೇಡಗಂಪಣ ಅರ್ಚಕರಿಂದ ವಿಧಿವಿಧಾನಗಳೊಂದಿಗೆ ಬೆಳ್ಳಿ ರಥಕ್ಕೆ ಹೂ ತಳಿರು ತೋರಣ ಗಳಿಂದ ಸಿಂಗರಿಸಿ ವಿಶೇಷ ಪೂಜಾ ಕೈಂಕರ್ಯವನ್ನು ನೆರವೇರಿಸಲಾಯಿತು. ಬಳಿಕ ದೇವಾಲಯದ ಸುತ್ತಲೂ ಒಂದು ಪ್ರದಕ್ಷಿಣೆ ಹಾಕುವ ಮೂಲಕ ಬೆಳ್ಳಿ ರಥವನ್ನು ಲೋಕಾ ರ್ಪಣೆ ಗೊಳಿಸಲಾಯಿತು.

ರಥದ ವಿಶೇಷತೆಗಳು: ಶ್ರೀ ಕ್ಷೇತ್ರ ಮಲೆ ಮಹ ದೇಶ್ವರ ಬೆಟ್ಟದಲ್ಲಿ ನೂತನ ಬೆಳ್ಳಿ ರಥವನ್ನು ನಿರ್ಮಾಣ ಮಾಡಲು ಕಳೆದ 5 ವರ್ಷಗಳ ಹಿಂದೆ ಪ್ರಾಧಿಕಾರದ ಸಭೆಯಲ್ಲಿ ಅನುಮೋ ದನೆ ಪಡೆದುಕೊಂಡು ಮೊದಲಿಗೆ ತೇಗದ ಮರದ ರಥವನ್ನು 2020ರಲ್ಲಿ ಸಿದ್ಧ ಪಡಿಸಲಾಯಿತು. ಬಳಿಕ ಅಂದಾಜು ಸುಮಾರು 3 ಕೋಟಿ ರೂ. ವೆಚ್ಚದಲ್ಲಿ 450 ಕೆ.ಜಿ. ಬೆಳ್ಳಿ ಬಳಕೆ ಮಾಡಿ ಈ ರಥವನ್ನು ಸಿದ್ಧಪಡಿಸಲಾಗಿದೆ.

ಈ ರಥವು 17 ಅಡಿ ಎತ್ತರವಿದ್ದು ಕಳೆದ 3 ವರ್ಷಗಳ ಕರಕುಶಲ ಕರ್ಮಿಗಳ ಅವಿತರ ಶ್ರಮದಿಂದ ಭಾನುವಾರ ಲೋಕಾರ್ಪಣೆಗೊಳಿಸಲಾಗಿದೆ. ಈ ರಥಕ್ಕೆ ಅವಶ್ಯ ವಾಗಿದ್ದ ಬೆಳ್ಳಿಯನ್ನು ಭಕ್ತಾದಿಗಳಿಂ ದಲೇ ಸಂಗ್ರಹ ಮಾಡಿದ್ದು ಬೆಂಗಳೂರು ಮೂಲಕ ಲಕ್ಷ್ಮೀಪತಿ ಎಂಬ ಭಕ್ತಾದಿಗಳು 25 ಕೆ.ಜಿ. ಬೆಳ್ಳಿಯನ್ನು ಡಿ.2ರಂದು ಶ್ರೀ ಕ್ಷೇತ್ರಕ್ಕೆ ಸಲ್ಲಿಸಿದ್ದರು.

ಇನ್ನು ಈ ರಥಕ್ಕೆ ಮಜೂರಿ ಹಣವಾಗಿ 24 ಲಕ್ಷ ರೂ. ವೆಚ್ಚ ತಗುಲಿದ್ದು ಈ ಮಜೂರಿ ಹಣವನ್ನು ನೆರೆಯ ತಮಿಳುನಾಡು ರಾಜ್ಯದ ಮೋಹನ್‌ ರಾಮ್‌ ಶೇ.50 ಮತ್ತು ಬೆಂಗಳೂರಿನ ರಾಜಾಜಿನಗರದ ಲಿಂ. ಹುಲಿಕುಂಟೆ ಶಿವಣ್ಣ ಮತ್ತು ಸಿದ್ಧಮ್ಮ ದಂಪತಿ ಸುಪುತ್ರರಾದ ಎಸ್‌.ಸೋಮಶೇಖರ್‌ ಮತ್ತು ಸುಜಾತ ಸೋಮಶೇಖರ್‌ ಕುಟುಂಬಸ್ಥರು ಭರಿಸಿದ್ದಾರೆ.

ಶಾಸಕ ಎಂ.ಆರ್‌.ಮಂಜು ನಾಥ್‌, ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭ ವಸ್ವಾಮಿ, ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜು, ಸ್ಥಳೀಯ ಮುಖಂಡರು ಹಾಗೂ ಭಕ್ತಾದಿಗಳು ಇದ್ದರು.

ಟಾಪ್ ನ್ಯೂಸ್

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

10-gundlupete

Gundlupete: ಬೈಕ್ ಸವಾರನ ಮೇಲೆ ದಾಳಿಗೆ ಮುಂದಾದ ಕಾಡಾನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.