ಇಂದಿನ ಅಧಿಕಾರಿಗಳಿಗೆ ಶ್ರೀನಿವಾಸ್‌ ಕಾರ್ಯ ವೈಖರಿ ಮಾದರಿ


Team Udayavani, Sep 13, 2019, 11:57 AM IST

cn-tdy-2

ಹನೂರು: ತನ್ನ ಪ್ರಾಣಕ್ಕೆ ಅಪಾಯವಿದೆ ಎಂಬುದು ತಿಳಿದಿದ್ದರೂ ನರಹಂತಕ ವೀರಪ್ಪನ್‌ ಬಳಿಗೆ ಹೋಗಿ ಮೃತಪಟ್ಟ ದಿ.ಪಿ.ಶ್ರೀನಿವಾಸ್‌ ಅವರು ತಮ್ಮ ಕೆಲಸ ಕಾರ್ಯಗಳ ಮೂಲಕ ಜನಮಾನಸದಲ್ಲಿ ಜೀವಂತ ವಾಗಿದ್ದಾರೆ ಎಂದು ಕಾವೇರಿ ವನ್ಯಜೀವಿ ವಲಯದ ಡಿಎಫ್ಒ ರಮೇಶ್‌ ಕುಮಾರ್‌ ಬಣ್ಣಿಸಿದರು.

ಸಮೀಪದ ಕಾವೇರಿ ವನ್ಯಧಾಮದ ಎರಕೆಯಂ ಅರಣ್ಯ ಪ್ರದೇಶದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತ ನಾಡಿ, ಅರಣ್ಯಾಧಿಕಾರಿ ಯಾಗಿದ್ದರೂ ಸದಾ ಜನರ ಸುಖದುಃಖಗಳಿಗೆ ಭಾಗಿಯಾಗುವ ಮೂಲಕ ಎಲ್ಲರ ವಿಶ್ವಾಸ ಗಳಿಸಿದ್ದ ಶ್ರೀನಿವಾಸ್‌, ವೀರಪ್ಪನ್‌ ಮನಪರಿವರ್ತನೆ ಮಾ ಡಲು ಹೋಗಿ ಅವನ ಕುತಂತ್ರಕ್ಕೆ ಬಲಿಯಾ ದರು. ತನಗೆ ಆತನಿಂದ ಅಪಾಯವಿದೆ ಎಂಬ ಅರಿವಿದ್ದರೂ ಆತನ ಮನಸ್ಸು ಬದಲಾಯಿ ಸಲು ಪ್ರಯತ್ನಿಸಿದ ಶ್ರೀನಿವಾಸ್‌ ಅವರ ದೃಢಸಂಕಲ್ಪ ಇಂದಿನ ಅಧಿಕಾರಿಗಳಿಗೆ ಮಾದರಿಯಾಗಿದೆ ಎಂದರು.

ನಿವೃತ್ತ ಡಿಎಫ್ಒ ಉದಯ್‌ಕುಮಾರ್‌ ಮಾತನಾಡಿ, ವೀರಪ್ಪನ್‌ನನ್ನು ಕೊಲ್ಲುವುದಕ್ಕಿಂತ ಆತನನ್ನು ಜೀವಂತವಾಗಿ ಹಿಡಿದು ಅವನ ಮನಃಪರಿವರ್ತನೆ ಮಾಡುವುದೇ ಶ್ರೀನಿವಾಸ್‌ ಅವರ ಗುರಿಯಾಗಿತ್ತು. ಆದರೆ ತಾನು ಶರಣಾಗು ವುದಾಗಿ ಹೇಳಿದಾಗ ಅತ್ಯಂತ ಖುಷಿಯಿಂದಲೇ ಆತನ ಬಳಿಗೆ ಹೋದ ಅವರು ದಾರುಣವಾಗಿ ಹತ ರಾದರು. ಅವರ ಕಾರ್ಯವೈಖರಿಯನ್ನು ಇಂದಿನ ಸಿಬ್ಬಂದಿ ಮೈಗೂಡಿಸಿಕೊಳ್ಳಬೇಕಿದೆ ಎಂದರು.

ಮಾದರಿ ಅಧಿಕಾರಿ: ಮಲೆಮಹದೇಶ್ವರ ವನ್ಯ ಧಾಮದ ಡಿಎಫ್ಒ ಏಡುಕುಂಡಲು ಮಾತನಾಡಿ, ಶ್ರೀನಿವಾಸ್‌ ಅವರು ವೀರಪ್ಪನ್‌ನಿಂದ ಹತರಾಗಿ ಇಂದಿಗೆ 27 ವರ್ಷಗಳು ಕಳೆದರೂ ಗೋಪಿನಾಥಂ ಜನತೆ ಅವರನ್ನು ಇಂದಿಗೂ ನೆನೆಪಿಸಿ ಕೊಳ್ಳುತ್ತಿ ರುವುದು ಸಂತಸದ ವಿಚಾರ. ಜನ ಸಾಮಾನ್ಯ ರೊಂ ದಿಗೆ ಬೆರೆಯುತ್ತಿದ್ದ ವ್ಯಕ್ತಿತ್ವ ಇಂದು ಎಲ್ಲಾ ಅರಣ್ಯಾ ಧಿಕಾರಿಗಳಿಗೆ ಮಾದರಿಯಾಗಬೇಕಿದೆ ಎಂದರು.

13 ಲಕ್ಷ ಪರಿಹಾರ ವಿತರಣೆ: ಕಾವೇರಿ ವನ್ಯ ಧಾಮದ ನಾಗಮಲೆ ಬೀಟ್‌ನಲ್ಲಿ ಕಳೆದ ನಾಲ್ಕು ತಿಂಗಳ ಹಿಂದೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ ಹಲಗತಂಬಡಿ ಕುಟುಂಬಕ್ಕೆ 13 ಲಕ್ಷ ಪರಿಹಾರ ವಿತರಿಸಲಾಯಿತು. ಸಹಾಯಕ ಅರಣ್ಯ ಸಂರಕ್ಷ ಣಾಧಿಕಾರಿ ಅಂಕರಾಜು, ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಾಸುದೇವಮೂರ್ತಿ, ಗೋಪಿನಾಥಂ ಗ್ರಾಪಂ ಅಧ್ಯಕ್ಷ ಮುರುಗೇಶ್‌, ವಲಯ ಅರಣ್ಯಾಧಿಕಾರಿಗಳಾದ ಸುಂದರ, ಮಹದೇವಸ್ವಾಮಿ, ರಾಜೇಶ್‌ಗವಾಲ್, ಸಯ್ನಾದ್‌ ಸಾಬಾ ನಧಾಫ್, ವಿನಯ್‌, ಕಿರಣ್‌ಕುಮಾರ್‌, ನಿಶ್ಚಿತ್‌ ಇತರರು ಇದ್ದರು.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.