ಎಸ್ಸೆಸ್ಸೆಲಿ ಪರೀಕ್ಷೆಗೆ ಶೇ.99.73ವಿದ್ಯಾರ್ಥಿಗಳು ಹಾಜರು
Team Udayavani, Jul 20, 2021, 12:21 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿ ನಡೆಯಿತು.ಶೇ. 99.73 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ನೋಂದಾಯಿಸಿದ್ದ 11,963 ಮಂದಿ ವಿದ್ಯಾರ್ಥಿಗಳಲ್ಲಿ, ಕೇವಲ 32 ಮಂದಿ ಮಾತ್ರ ಗೈರಾಗಿದ್ದರು.
ಜಿಲ್ಲೆಯಲ್ಲಿ ಒಟ್ಟು 11,963 ವಿದ್ಯಾರ್ಥಿಗಳು ಪರೀಕ್ಷೆಗೆನೋಂದಣಿ ಮಾಡಿಕೊಂಡಿದ್ದು, ಇವರ ಪೈಕಿ 11,931 ಮಂದಿಪರೀಕ್ಷೆಗೆ ಹಾಜರಾಗಿದ್ದರು. 6,244 ಮಂದಿ ಬಾಲಕರು, 5719ಬಾಲಕಿಯರು ಪರೀಕ್ಷೆ ತೆಗೆದುಕೊಂಡಿದ್ದರು. ಇವರಲ್ಲಿ 6,226ಬಾಲಕರು, 5,705 ಬಾಲಕಿಯರು ಪರೀಕ್ಷೆ ಬರೆದರು. 18ಬಾಲಕರು ಹಾಗೂ 14 ಬಾಲಕಿಯರು ಗೈರು ಹಾಜರಾದರು.ಅನಾರೋಗ್ಯದ ಕಾರಣ 3 ಮಂದಿ ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದರು.
ಕೋವಿಡ್ ಹಿನ್ನೆಲೆಯಲ್ಲಿ ಸರಳ ವಿಧಾನದ ಪರೀಕ್ಷೆ ನಡೆಸಲಾಯಿತು. ಕೋರ್ ವಿಷಯಗಳ ಬಹು ಆಯ್ಕೆಉತ್ತರದಲ್ಲಿ ಒಂದನ್ನು ಗುರುತಿಸುವ ನೂತನ ವಿಧಾನದಲ್ಲಿ ಪರೀಕ್ಷೆ ನಡೆಯಿತು. ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಜಿಲ್ಲೆಯ 85 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಯಿತು.ಜಿಲ್ಲೆಯ ಚಾಮರಾಜನಗರ, ಗುಂಡ್ಲುಪೇಟೆ, ಹನೂರು, ಕೊಳ್ಳೇಗಾಲ ಹಾಗೂ ಯಳಂದೂರು ತಾಲೂಕು ವ್ಯಾಪ್ತಿಯಲ್ಲಿತೆರೆಯಲಾಗಿದ್ದ 85 ಕೇಂದ್ರಗಳಲ್ಲಿ ಕೋರ್ ವಿಷಯಗಳಾದ ಗಣಿತ, ವಿಜ್ಞಾನ ಹಾಗೂ ಸಮಾಜವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಿತು. ವಿದ್ಯಾರ್ಥಿಗಳು ಉತ್ಸಾಹದಿಂದಲೇ ಪರೀûಾ ಕೇಂದ್ರಗಳಿಗೆ ಆಗಮಿಸಿದರು.
ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳ ಸಿಬ್ಬಂದಿ ಹೂ ನೀಡಿ ಸ್ವಾಗತಿಸಿದರು. ಕೋವಿಡ್ ನಿಯಮಗಳ ಪಾಲನೆಯೊಂದಿಗೆಪರೀಕ್ಷೆ ನಡೆಯಿತು. ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದವಿದ್ಯಾರ್ಥಿಗಳಿಗೆ ಆಮ್ಲಜನಕ ಮಟ್ಟ, ತಾಪಮಾನ ಪರೀಕ್ಷೆ ನಡೆಸಲಾಯಿತು.
ಪ್ರತಿ ವಿದ್ಯಾರ್ಥಿಗಳಿಗೂ ಸ್ಯಾನಿಟೈಸರ್ ಹಾಕಿ ಪರೀಕ್ಷಾ ಕೊಠಡಿಗಳಿಗೆ ತೆರಳಲು ಅವಕಾಶ ಕಲ್ಪಿಸಲಾಗಿತ್ತು. ಪ್ರತಿ ಕೊಠಡಿಯಲ್ಲೂ 12 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಇತ್ತು.ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಭೇಟಿ ನೀಡಿಪರಿಶೀಲಿಸಿದರು. ಅಲ್ಲದೇ ಪರೀಕ್ಷೆ ಬರೆಯಲು ಆಗಮಿಸಿದವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಪರೀಕ್ಷೆಗೆ ಶುಭಕೋರಿದರು.
ನಗರದ ಸರ್ಕಾರಿ ಮಹಿಳಾ ಪಿಯು ಕಾಲೇಜಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಂದಮಾಹಿತಿ ಪಡೆದುಕೊಂಡರು ಬಳಿಕ ಮಾತನಾಡಿ, ರಾಜ್ಯದಲ್ಲಿಪ್ರಥಮ ಬಾರಿಗೆ ಕೋವಿಡ್ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆಪ್ರಾರಂಭವಾಗಿದೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳುಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ಹಾಕಿಕೊಳ್ಳುವಮೂಲಕಕೋವಿಡ್‌ನಿಯಮಪಾಲನೆಯೊಂದಿಗೆ ಪರೀಕ್ಷೆ ಬರೆಯಲು ಸೂಚಿಸಲಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳುಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯುತ್ತಿದ್ದಾರೆ. ಅಲ್ಲದೇ ಪರೀಕ್ಷಾ ಹಿನ್ನೆಲೆಯಲ್ಲಿ ಸುರಕ್ಷಿತಕ್ರಮ ತೆಗೆದುಕೊಳ್ಳಲಾಗಿದೆ.ಈ ಬಾರಿಯ ಪರೀಕ್ಷೆಯಲ್ಲಿ ಗೈರುಕಡಿಮೆ ಇದೆ. ಒಂದುಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶಕಲ್ಪಿಸಲಾಗಿದೆ. ಪೋಷಕರು ಸಹ ಕೋವಿಡ್ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಸಹಕರಿಸುತ್ತಿದ್ದಾರೆ.– ಡಾ.ಎಂ.ಆರ್.ರವಿ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.