ಜನರ ನಿರೀಕ್ಷೆ ಹುಸಿಗೊಳಿಸಿದ ಬಜೆಟ್
Team Udayavani, Jul 8, 2023, 5:54 PM IST
ಚಾಮರಾಜನಗರ: ನೆರೆಯ ಜಿಲ್ಲೆ ಚಾಮರಾಜನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಹೆಚ್ಚಿನ ಕೊಡುಗೆಗಳನ್ನು ನೀಡಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಅವರ ಬಜೆಟ್‌ನಲ್ಲಿ ಎರಡು ಕಡೆ ಚಾಮರಾಜನಗರದ ಹೆಸರು ಕಾಣಿಸಿದ್ದು, ಇದರಲ್ಲಿ ಒಂದು ಕಳೆದ ಫೆಬ್ರವರಿಯಲ್ಲಿ ಬೊಮ್ಮಾಯಿಯವರು ಮಂಡಿಸಿದ್ದ ಬಜೆಟ್‌ನಲ್ಲಿದ್ದ ಅಂಶವಾಗಿದೆ. ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ರಾಜ್ಯದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ (ಕೆಎಸ್‌ಎಸ್‌ಐಡಿಸಿ) ವತಿಯಿಂದ ಹುಬ್ಬಳ್ಳಿ, ಕಲಬುರಗಿಯ ಚಿತ್ತಾಪುರ, ಉತ್ತರ ಕನ್ನಡದ ಕೋಡ್ಕಣಿ, ಬೆಳಗಾವಿಯ ಕಣಗಲಾ, ಚಾಮರಾಜನಗರದ ಬದನಗುಪ್ಪೆ, ವಿಜಯಪುರದ ಇಂಡಿ ಮತ್ತು ಯಾದಗಿರಿಯ ಶಹಪೂರ ಹೀಗೆ ಏಳು ಸ್ಥಳಗಳಲ್ಲಿ ಹೊಸದಾಗಿ ಕೈಗಾರಿಕಾ ವಸಾಹತುಗಳನ್ನು ಹಂತ ಹಂತವಾಗಿ ಸ್ಥಾಪಿಸಲಾಗುವುದು ಎಂದು ತಿಳಿಸಲಾಗಿದೆ.
ಈ ಮೇಲಿನ ಅಂಶ ಕಳೆದ ಫೆಬ್ರವರಿಯಲ್ಲಿ ಬಿಜೆಪಿ ಸರ್ಕಾರ ಮಂಡಿಸಿದ್ದ ಬಜೆಟ್‌ನಲ್ಲಿ ಪ್ರಸ್ತಾಪವಾಗಿತ್ತು. ಅದನ್ನೇ ಕಾಂಗ್ರೆಸ್ ಸರ್ಕಾರದ ಬಜೆಟ್‌ನಲ್ಲೂ ಪ್ರಸ್ತಾಪಿಸಲಾಗಿದೆ. ಹೀಗಾಗಿ ಇದರಲ್ಲಿ ವಿಶೇಷವೇನೂ ಇಲ್ಲ. ಈಗಾಗಲೇ ಬದನಗುಪ್ಪೆಯರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಎಐಡಿಬಿ) ಯಿಂದ ಕೈಗಾರಿಕಾ ವಸಾಹತು ಸ್ಥಾಪಿಸಲಾಗಿದೆ. ಆದರೆ ಅದಕ್ಕೆ ಹೆಚ್ಚಿನ ಮೂಲ ಸೌಕರ್ಯಗಳಿಲ್ಲದೇ ಕೈಗಾರಿಕೆಗಳನ್ನು ಸ್ಥಾಪಿಸಲು ಹೆಚ್ಚಿನ ಜನರು ಮುಂದೆ ಬಂದಿಲ್ಲ. ಈ ಬಜೆಟ್‌ನಲ್ಲಿ ಇದೇ ಜಾಗದಲ್ಲಿ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಿಂದ ಹೊಸದಾಗಿ ಕೈಗಾರಿಕಾ ವಸಾಹತು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ. ಇದಕ್ಕೆ ಎಷ್ಟು ಅನುದಾನ, ಎಷ್ಟು ಹೆಕ್ಟೇರ್ ಪ್ರದೇಶ, ಈ ಜಾಗದ ವಿಸ್ತರಣೆಯೋ ಎಂಬುದನ್ನು ಸ್ಪಷ್ಟಪಡಿಸಿಲ್ಲ.
ವಾರದೊಳಗೆ ಸಾರ್ವಜನಿಕರಿಗೆ ಸೇವೆ: ಇನ್ನು ಇ-ಆಡಳಿತ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಗಳಾದ ಫೂÅಟ್ಸ್, ಕುಟುಂಬ, ಜಿಐಎಸ್‌ಗಳನ್ನು ಬಳಸಿಕೊಂಡು ತಾಲೂಕು ಹಂತದ ಕಚೇರಿಗಳಲ್ಲಿ ಶಾಸನಬದ್ಧ ಕಾಲಮಿತಿ ಇರುವಂತಹ ಸೇವೆಗಳನ್ನು ಹೊರತುಪಡಿಸಿ, ಉಳಿದ ಸೇವೆಗಳನ್ನು ತಕ್ಷಣವೇ ಅಥವಾ ಅದೇ ದಿನದಂದು ಅಥವಾ ಅತ್ಯಂತ ಸಂಕೀರ್ಣ ಪ್ರಕರಣಗಳಲ್ಲಿ ಒಂದು ವಾರದೊಳಗೆ ಸಾರ್ವಜನಿಕರಿಗೆ ಒದಗಿಸಲು ಯತ್ನಿಸಲಾಗುವುದು. ಪ್ರಾಯೋಗಿಕವಾಗಿ ಒಂಭತ್ತು ಕೋಟಿ ರೂ.ಗಳ ವೆಚ್ಚದಲ್ಲಿ ಈ ವಿಧಾನವನ್ನು ಜಾರಿಗೆ ತರಲು ಚಿಕ್ಕಬಳ್ಳಾಪುರ, ಕೊರಟಗೆರೆ, ಚಾಮರಾಜನಗರ, ರಾಯಚೂರು, ಧಾರವಾಡ ಮತ್ತು ಬಂಟ್ವಾಳ ತಾಲೂಕುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.
ನಿರಾಶಾದಾಯಕ ಬಜೆಟ್: ಈ ಅಂಶವೊಂದೇ ಇಡೀ ಬಜೆಟ್ ನಲ್ಲಿ ಚಾಮರಾಜನಗರ ಜಿಲ್ಲೆಗೆ ಸಿದ್ದರಾಮಯ್ಯನವರು ನೀಡಿರುವ ಭಾಗ್ಯ. ಇದನ್ನು ಹೊರತುಪಡಿಸಿದರೆ ಜಿಲ್ಲೆಗೆ ರಾಜ್ಯ ಬಜೆಟ್‌ನಲ್ಲಿ ಯಾವುದೇ ಕೊಡುಗೆ ನೀಡಿಲ್ಲ. ಹೀಗಾಗಿ ಜಿಲ್ಲೆಯ ಪಾಲಿಗೆ ಈ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಮೂರು ಶಾಸಕರಿರುವ ಜಿಲ್ಲೆಯ ಜನರಿಗೆ ನಿರಾಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ ನೆರೆಯ ಮೈಸೂರು ಜಿಲ್ಲೆಯವರಾಗಿದ್ದು, ಕಳೆದ ಬಾರಿ ಸಿಎಂ ಆಗಿದ್ದಾಗ ಜಿಲ್ಲೆಗೆ ಹೆಚ್ಚಿನ ಅನುದಾನಗಳನ್ನು ನೀಡಿದ್ದರು. ಬಳಿಕ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಹೇಳಿಕೊಳ್ಳುವಂತಹ ಯೋಜನೆಗಳು ಲಭಿಸಲಿಲ್ಲ. ನಾಲ್ಕು ಶಾಸಕ ಸ್ಥಾನ ಇರುವ ಜಿಲ್ಲೆಯಲ್ಲಿ ಮೂರು ಸ್ಥಾನಗಳಲ್ಲಿ ಮತದಾರರು ಕಾಂಗ್ರೆಸ್ ಶಾಸಕರನ್ನು ಆರಿಸಿ ಕಳುಹಿಸಿದ್ದಾರೆ. ಹೀಗಾಗಿ ಜಿಲ್ಲೆಗೆ ಸಿಎಂ ಅವರು ಹೆಚ್ಚಿನ ಕೊಡುಗೆಗಳನ್ನು ನೀಡಬಹುದೆಂಬ ನಿರೀಕ್ಷೆ ಇತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ನಿರೀಕ್ಷೆಯನ್ನ ಹುಸಿಗೊಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಜಿಲ್ಲಾಡಳಿತದಿಂದ ರಾಜ್ಯ ಸರ್ಕಾರಕ್ಕೆ ಜಿಲ್ಲೆಗೆ ಅಗತ್ಯವಾಗಿ ಬೇಕಾದ ಕೆಲಸಗಳ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಹೊಸ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಅನುದಾನ : ನಗರದಲ್ಲಿ ಈಗಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಚಿಕ್ಕದಾಗಿದ್ದು, ವಿಶಾಲವಾದ ಹೈಟೆಕ್ ಬಸ್‌ನಿಲ್ದಾಣವನ್ನು ಸಂತೆಮರಹಳ್ಳಿ ರಸ್ತೆಯ ರೇಷ್ಮೆ ಇಲಾಖೆ ಕಟ್ಟಡದ ಆವರಣದಲ್ಲಿ ನಿರ್ಮಿಸಲು ಅನುದಾನ ನಿರೀಕ್ಷಿಸಲಾಗಿತ್ತು. ಬಜೆಟ್‌ನಲ್ಲಿ ಇದರ ಸದ್ದಿಲ್ಲ. ಜಿಲ್ಲೆಯಲ್ಲಿ ಒಟ್ಟು ಐದು ತಾಲೂಕುಗಳಿದ್ದು, ಒಂದೇ ಉಪ ವಿಭಾಗ (ಕೊಳ್ಳೇಗಾಲ) ಇದೆ. ಆಡಳಿತದ ಕಾರ್ಯನಿರ್ವಹಣೆಗೆ ಅನುಕೂಲವಾಗಲು ಮತ್ತೂಂದು ಉಪವಿಭಾಗ ರಚನೆ ಮಾಡಬೇಕು. ಹನೂರು ಹೊಸ ತಾಲೂಕಿನ ಕಾರ್ಯನಿರ್ವಹಣೆಗಾಗಿ 10 ಕೋಟಿ ರೂ ವೆಚ್ಚದಲ್ಲಿ ಮಿನಿ ವಿಧಾನ ಸೌಧ ಕಟ್ಟಡ ನಿರ್ಮಾಣ ಮಾಡಬೇಕು. ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 766 ಮತ್ತು 948 ಸಂಪರ್ಕಿಸುವ ಸಂತೆಮರಹಳ್ಳಿ ಮೂಗೂರು ಕ್ರಾಸ್ ವರೆಗಿನ 7 ಕಿ.ಮೀ. ರಸ್ತೆಯನ್ನು 18 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆಯನ್ನು ಜಿಲ್ಲಾಡಳಿತ ಪ್ರಸ್ತಾಪಿಸಿತ್ತು. ಇದರ ಬಗ್ಗೆ ಯಾವುದೇ ಅಂಶ ಇಲ್ಲ.
ಈಡೇರದ ನಿರೀಕ್ಷೆಗಳು ಪ್ರವಾಸಿತಾಣಗಳ ಅಭಿವೃದ್ಧಿಗೆ ಅನುದಾನ: ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಪ್ರವಾಸಿ ತಾಣಗಳ ಅಭಿವೃದ್ಧಿ ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಯೋಜನೆಗಳನ್ನು ರೂಪಿಸಿ ಅಭಿವೃದ್ಧಿ ಪಡಿಸಲು ಅನುದಾನ ನೀಡಬಹುದಿತ್ತು. ರಾಜ್ಯ ಸರ್ಕಾರ ಈ ಬಗ್ಗೆ ನಿರ್ಲಕ್ಷ್ಯ ತಾಳಿದೆ. ಕಾವೇರಿ 2ನೇ ಹಂತ: ಜಿಲ್ಲಾ ಕೇಂದ್ರ ಚಾಮರಾಜನಗರಕ್ಕೆ ತಿ.ನರಸೀಪುರದಿಂದ ಕಾವೇರಿ ನೀರು ಪೂರೈಸಲಾಗುತ್ತಿದ್ದು, ಈಗಿನ ಜನಸಂಖ್ಯೆಗೆ ಈ ನೀರು ಸಾಲುತ್ತಿಲ್ಲ. ಹೀಗಾಗಿ ಪಟ್ಟಣಕ್ಕೆ ಎರಡನೇ ಹಂತದ ಕಾವೇರಿ ಕುಡಿಯುವ ನೀರಿನ ಯೋಜನೆಯನ್ನು ನಿರೀಕ್ಷಿಸಲಾಗಿದೆ. ಮಾಲಂಗಿಯಿಂದ ಪೈಪುಗಳ ಮೂಲಕ ನೀರು ಪೂರೈಸುವ ಈ ಯೋಜನೆಗೆ 279 ಕೋಟಿ ರೂ. ಅಂದಾಜು ತಯಾರಿಸಲಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಹ ಸಲ್ಲಿಸಲಾಗಿದೆ. ಬಜೆಟ್ ನಲ್ಲಿ ಇದರ ಬಗ್ಗೆ ಪ್ರಸ್ತಾವವಿಲ್ಲ.
-ಕೆ.ಎಸ್. ಬನಶಂಕರ ಆರಾಧ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.