ಪರಿಸರ, ಬಫ‌ರ್‌ ವಲಯದಲ್ಲಿ ಗಣಿಗಾರಿಕೆ ನಿಲ್ಲಿಸಿ

Team Udayavani, Mar 14, 2022, 3:02 PM IST

ಪರಿಸರ, ಬಫ‌ರ್‌ ವಲಯದಲ್ಲಿ ಗಣಿಗಾರಿಕೆ ನಿಲ್ಲಿಸಿ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡದಲ್ಲಿ ನಡೆದ ಕಲ್ಲುಗಣಿ ದುರಂತದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡ ಕಾರ್ಮಿಕರ ಕುಟುಂಬದವರಿಗೆ ಪರಿಹಾರ ಘೋಷಿಸಬೇಕು. ಈ ಅಕ್ರಮ ಗಣಿಗಾರಿಕೆ ತನಿಖೆ ನಡೆಸಿ ಅಕ್ರಮ ನಡೆಸಿರುವ ಎಲ್ಲರ ಮೇಲೆಯೂ ಕಾನೂನು ಕ್ರಮ ಜರುಗಿಸಬೇಕು. ಪರಿಸರ ಸೂಕ್ಷ್ಮ ವಲಯ ಹಾಗೂ ಬಫ‌ರ್‌ ವಲಯದಲ್ಲಿ ಗಣಿಗಾರಿಕೆ ನಿಲ್ಲಿಸಬೇಕು ಎಂದು ಪಿಯುಸಿಎಲ್‌ ಜಿಲ್ಲಾ ಅಧ್ಯಕ್ಷ ಡಿ.ಎಸ್‌. ದೊರೆಸ್ವಾಮಿ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೀಪಲ್ಸ್‌ ಯೂನಿಯನ್‌ ಫಾರ್‌ ಸಿವಿಲ್‌ ಲಿಬರ್ಟಿ (ಪಿಯುಸಿಎಲ್‌) ಚಾ.ನಗರ ಸಮಿತಿಯ ತಂಡವು ಮಾ.7ರಂದು ಘಟನೆ ನಡೆದ ಮಡಹಳ್ಳಿ ಗ್ರಾಮದ ಗುಮ್ಮಕಲ್ಲು ಗುಡ್ಡ ಸರ್ವೆ ನಂ.192 ರ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ಸಂದರ್ಭದಲ್ಲಿ ಈ ಗಣಿಗಾರಿಕೆ ವಿಷಯದಲ್ಲಿ ಅನೇಕ ಅಕ್ರಮಗಳು, ಕಾನೂನು ಉಲ್ಲಂಘನೆಗಳು, ಸಂದೇ ಹಾಸ್ಪದ ವಿಷಯಗಳು ಕಂಡು ಬಂದವು ಎಂದರು.

ಇದೊಂದು ಅಕ್ರಮ ವ್ಯವಹಾರ: ದುರ್ಘ‌ಟನೆ ನಡೆದ ಗಣಿಯನ್ನು ಬೊಮ್ಮಲಾಪುರ ಗ್ರಾಮದ ಮಹೇಂದ್ರಪ್ಪ ಬಿನ್‌ ಹುಚ್ಚಪ್ಪ ಎಂಬುವರು 2016 ರ ಜುಲೈನಲ್ಲಿ 5 ವರ್ಷದ ಅವಧಿಗೆ ಗುತ್ತಿಗೆ ಪಡೆದಿದ್ದರು. ಬಳಿಕ ಅದೇ ವರ್ಷದ ಆಗಸ್ಟ್‌ನಲ್ಲಿ 20 ವರ್ಷಕ್ಕೆ ಗುತ್ತಿಗೆ ಅವಧಿ ವಿಸ್ತರಿಸಲಾಗಿದೆ. ಮಹೇಂದ್ರಪ್ಪ ನಂತರ ಕೇರಳದ ಹಕೀಂ ಮತ್ತು ಜಾಫ‌ರ್‌ ಎಂಬುವರಿಗೆ ಉಪಗುತ್ತಿಗೆ ನೀಡಿದ್ದಾರೆ. ಪೊಲೀಸರು ಹಕೀಂ ಎಂಬುವವರ ಮೇಲೆ ಮಾತ್ರ ಎಫ್ಐಆರ್‌ ದಾಖಲಿಸಿದ್ದಾರೆ. ಗುತ್ತಿಗೆ ಪಡೆದವರು ಉಪಗುತ್ತಿಗೆ ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಈ ಪ್ರದೇಶದಲ್ಲಿ ಬಹುತೇಕ ಎಲ್ಲರೂ ಉಪಗುತ್ತಿಗೆ ನೀಡಿದ್ದಾರೆ. ಇದೊಂದು ಅಕ್ರಮ ವ್ಯವಹಾರ ಎಂದು ಆರೋಪಿಸಿದರು.

ಹೊರ ರಾಜ್ಯದಿಂದ ಕಾರ್ಮಿಕರ ನೇಮಕ: ಕಲ್ಲುಗಣಿಗಾರಿಕೆಯಲ್ಲಿ 25 ರಿಂದ 30 ಮಂದಿ ಕೆಲಸ ಮಾಡುತ್ತಾರೆ. ಉದ್ದೇಶ ಪೂರ್ವಕವಾಗಿಯೇ ಸ್ಥಳೀಯರನ್ನು ಬಿಟ್ಟು ಹೊರ ರಾಜ್ಯದವ ಕೂಲಿ ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿದೆ. ಘಟನೆ ನಡೆದು ನಾಲ್ಕೈದು ದಿನಗಳಾಗಿದ್ದರೂ ನಾವು ಹೋದಾಗ ಅಲ್ಲಿ ಒಬ್ಬ ಕೆಲಸಗಾರನೂ ಇರಲಿಲ್ಲ. ಕಾರ್ಮಿಕರ ವಿವರಗಳನ್ನು ಕಾನೂನಿನ ಅನ್ವಯ ಗಣಿ ಕಂಪೆನಿಯಲ್ಲಿ ಬಿ ರಿಜಿಸ್ಟರ್‌ನಲ್ಲಿ ದಾಖಲಿಸಬೇಕು. ಅದನ್ನು ಮ್ಯಾನೇಜರ್‌ ನಿರ್ವಹಿಸಬೇಕು. ಆದರೆ ಇಲ್ಲಿ ಮ್ಯಾನೇಜರ್‌ ಆಗಲೀ ಯಾವುದೇ ರಿಜಿಸ್ಟರ್‌ ಅನ್ನಾಗಲೀ ನಿರ್ವಹಣೆ ಮಾಡುತ್ತಿಲ್ಲ. ಈ ಗಣಿಗಳಿಂದ ತೆಗೆದ ಕಲ್ಲನ್ನು ತೆಗೆದುಕೊಂಡ ಟಿಪ್ಪರ್‌ಗಳು 5 ನಿಮಿಷಕ್ಕೊಂದರಂತೆ ಸಂಚರಿಸುತ್ತವೆ ಎಂದರೆ ಯಾವ ಪ್ರಮಾಣದ ಅವ್ಯಹಾರ ನಡೆಯುತ್ತಿದೆ ಎಂಬುದನ್ನು ಅಂದಾಜಿಸಬಹುದು ಎಂದು ದೊರೆಸ್ವಾಮಿ ಮತ್ತು ವೆಂಕಟರಾಜು ಹೇಳಿದರು.

ಈ ಗಣಿ ಪ್ರದೇಶ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ಸೂಕ್ಷ ವಲಯದ ಬಫ‌ರ್‌ ಝೋನ್‌ ಆಗಿದೆ. ಈ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವಂತೆಯೇ ಇಲ್ಲ. ರಾಜಕೀಯ ಪಕ್ಷದ ಮುಖಂಡರಿಗೆ, ಚುನಾಯಿತ ಪ್ರತಿನಿಧಿಗಳಿಗೆ ಸೇರಿದ ಗಣಿಗಳಿವೆ. ಇದು ಬಹುಕೋಟಿ ಅಕ್ರಮ ಅವ್ಯವಹಾರ ವಾಗಿದೆ. ಕಂದಾಯ, ಗಣಿ, ಅರಣ್ಯ ಮತ್ತು ಇನ್ನಿತರ ಇಲಾಖೆಗಳ ನೌಕರರಿಂದ ಅಧಿಕಾರಿಗಳಿಗೆ ಪಾಲು ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಕಾರ್ಯದರ್ಶಿ ಕೆ.ವೆಂಕಟರಾಜು, ಪಿಯುಸಿಎಲ್‌ ರಾಷ್ಟ್ರೀಯ ಉಪಾಧ್ಯಕ್ಷ ಡಾ. ವಿ. ಲಕ್ಷ್ಮಿನಾರಾಯಣ್‌, ಡಾ. ರತಿ ರಾವ್‌, ರೂಪಾರಾವ್‌, ರಾಜ್ಯ ಕಾರ್ಯದರ್ಶಿ ಕಮಲ್‌ ಗೋಪಿನಾಥ್‌ ಇದ್ದರು.

ಅನುಮಾನಕ್ಕೆ ಆಸ್ಪದ ನೀಡುತ್ತದೆ: ದೊರೆಸ್ವಾಮಿ : ಸರ್ವೆ ನಂ. 192 ರಲ್ಲಿ ಒಟ್ಟು 6 ಜನರಿಗೆ 13 ಎಕರೆ 30 ಗುಂಟೆ ಪ್ರದೇಶವನ್ನು ಗಣಿ ಇಲಾಖೆ ಉಪನಿರ್ದೇ ಶಕರು 2007ರಲ್ಲೇ ಕಲ್ಲು ತೆಗೆಯಲು ಪರವಾನಗಿ ನೀಡಿದ್ದಾರೆ. ಆದರೆ ಕಣ್ಣಳತೆಗೆ ಕಾಣುವ ಕನಿಷ್ಟ ಅಂದಾಜು ತೆಗೆದುಕೊಂಡರೂ 50 ರಿಂದ 60 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಈ ಹೆಚ್ಚುವರಿ ಪ್ರದೇಶ ಅಕ್ರಮವಾಗಿದೆ. ಅಧಿಕೃತ 13 ಎಕರೆ ಪ್ರದೇಶವನ್ನು ಹೊರತುಪಡಿಸಿ, ಇನ್ನುಳಿದ ಪ್ರದೇಶದಲ್ಲಿ ಗಣಿಗಾರಿಕೆ ಮಾಡುತ್ತಿರುವವರು ಯಾರು? ಇದು ಅನುಮಾನಕ್ಕೆ ಆಸ್ಪದ ನೀಡುತ್ತದೆ ಎಂದರು.

ಟಾಪ್ ನ್ಯೂಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.