ಶಿಕ್ಷಕರ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳ ಆಕ್ರೋಶ


Team Udayavani, Dec 1, 2019, 10:57 AM IST

cn-tdy-1

ಹನೂರು: ಇಬ್ಬರು ಶಿಕ್ಷಕರ ಮುಸುಕಿನ ಗುದ್ದಾಟದ ಪರಿಣಾಮ ವಿದ್ಯಾರ್ಥಿಗಳ ಮೇಲೆ ಬೀರಿದೆ. ಶಿಕ್ಷಕರವರ್ಗಾವಣೆಯನ್ನು ವಿರೋಧಿಸಿ ಶಾಲಾ ಮಕ್ಕಳು ಒಂದೆಡೆ ಶಿಕ್ಷಕನನ್ನು ಸುತ್ತುವರೆದು ಕಣ್ಣೀರು ಹಾಕಿದರೆ, ಮತ್ತೂಂದೆಡೆ ಶಾಲೆಗೆ ಸೇರಿದ ಪೀಠೊಪಕರಣಗಳನ್ನು ಧ್ವಂಸ ಮಾಡಿ ಆಕ್ರೋಶ ವ್ಯಕ್ತಡಿಸಿದ ಘಟನೆ ತಾಲೂಕಿನ ಮೀಣ್ಯಂ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಏನಿದು ಘಟನೆ?: ಹನೂರು ತಾಲೂಕಿನ ಮೀಣ್ಯಂ ಉನ್ನತೀಕರಿಸಿದ ಸರ್ಕಾರಿ ಶಾಲೆಯಲ್ಲಿ ಪ್ರಭಾರಮುಖ್ಯ ಶಿಕ್ಷಕರಾಗಿ ಬಾಲು ನಾಯ್ಕ ಮತ್ತು ಸಹಶಿಕ್ಷಕರಾಗಿ ಮಹದೇವ ಕಾರ್ಯನಿರ್ವಹಿಸುತ್ತಿದ್ದರು.ಪ್ರಾರಂಭದಲ್ಲಿ ಅತ್ಯುತ್ತಮ ಬಾಂಧವ್ಯದೊಂದಿಗೆ ಕೆಲಸ ನಿರ್ವಹಿಸುತ್ತಿದ್ದ ಶಿಕ್ಷಕರಲ್ಲಿ ಕಾಲ ಕ್ರಮೇಣ ವೃತ್ತಿ ವೈಮನಸ್ಸು ಪ್ರಾರಂಭವಾಗಿದೆ. ಕೊನೆಗೆ ವೃತ್ತಿ ವೈಷಮ್ಯದಿಂದ ಆ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನೇ 2 ಗುಂಪುಗಳನ್ನಾಗಿ ಮತ್ತು ಆ ವಿದ್ಯಾರ್ಥಿಗಳ ಪೋಷಕರನ್ನೂ 2 ಗುಂಪುಗಳನ್ನಾಗಿ ವಿಂಗಡಿಸುವಷ್ಟರ ಮಟ್ಟಿಗೆ ತಲುಪಿತ್ತು. ಈ ವೇಳೆ ಕೆಲ ಗ್ರಾಮಸ್ಥರುಪ್ರಭಾರ ಮುಖ್ಯ ಶಿಕ್ಷಕ ಬಾಲು ನಾಯ್ಕ ವಿರುದ್ಧ ದೂರು ಸಲ್ಲಿಸಿದ್ದರು. ಹೀಗಾಗಿ ತನಿಖೆ ಕೈಗೊಂಡಿದ್ದಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಭಾರ ಮುಖ್ಯ ಶಿಕ್ಷಕನನ್ನು ಕಳೆದ 3 ತಿಂಗಳ ಹಿಂದೆಯೇ ಬೇರೆಶಾಲೆಗೆ ನಿಯೋಜಿಸಿ ಆದೇಶಿಸಿದ್ದರು. ಇದೇ ಸಂದರ್ಭದಲ್ಲಿ ಮತ್ತೆ ಕೆಲವರು ಸಹ ಶಿಕ್ಷಕ ಮಹದೇವ ಹಾಜರಾತಿಯನ್ನು ತಿದ್ದಿದ್ದಾನೆ ಎಂದು ದೂರು ನೀಡಿದ್ದರು.

ಸಚಿವರ ಶಾಲಾ ವಾಸ್ತವ್ಯದ ದಿನ ಪ್ರತಿಭಟನೆ: ಈ ಎಲ್ಲಾ ಬೆಳವಣಿಗೆಯ ಮಧ್ಯೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ನ.18ರಂದು ತಾಲೂಕಿನ ಗೋಪಿನಾಥಂ ಶಾಲೆಯಲ್ಲಿ ವಾಸ್ತವ್ಯ ಹೂಡಿ ನ.19ರಂದು ತಾಲೂಕಿನ ವಿವಿಧ ಗ್ರಾಮಗಳ ಶಾಲೆಗಳಿಗೆ ತೆರಳಿಪರಿಶೀಲನೆ ನಡೆಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆಗೆ ಈ ಬಗ್ಗೆ ಮಾಹಿತಿ ಪಡೆದ ಕೆಲ ಗ್ರಾಮಸ್ಥರು, ನ.18ರಂದು ಶಾಲೆಗೆ ಬೀಗ ಜಡಿದು ವಿದ್ಯಾರ್ಥಿಗಳನ್ನು ಶಾಲೆಗೆ ಬಿಡದೆ ಪ್ರತಿಭಟನೆ ನಡೆಸಿದ್ದರು.

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯಕ್ಕೆ ಪರಿಶೀಲನೆಗಾಗಿ ಆಗಮಿಸಿದ್ದ ವೇಳೆ ಮೀಣ್ಯಂ ಗ್ರಾಮದ ಕೆಲ ಗ್ರಾಮಸ್ಥರು ಅವರ ಬಳಿ ಮಾತನಾಡಿ, ಶಿಕ್ಷಕ ಬಾಲುನಾಯ್ಕ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ.= ಆತನನ್ನೇ ಮುಂದುವರಿಸಿದರೆ ಸುಳ್ವಾಡಿ ವಿಷಪ್ರಸಾದದಲ್ಲಿ ವಿಷ ಹಾಕಿದಂತೆ ಶಾಲೆಯ ಮಕ್ಕಳಿಗೂ ವಿಷ ಹಾಕುತ್ತಾನೆ. ಅಲ್ಲದೆ, ಆತನ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಕ್ಷೇತ್ರ ಶಿಕ್ಷಣಾಧಿಕಾರಿಗಳೇ ಆತನ ಬೆಂಬಲಕ್ಕೆ ನಿಂತಿದ್ದಾರೆ. ಆದ್ದರಿಂದ ಕೂಡಲೇ ಬಾಲುನಾಯ್ಕನನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದರು.

ಇಬ್ಬರನ್ನೂ ವರ್ಗಾಯಿಸಲು ಸೂಚನೆ: ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು, ಕೂಡಲೇ ಆ ಇಬ್ಬರೂಶಿಕ್ಷಕರನ್ನು ಬೇರೆಡೆಗೆ ವರ್ಗಾಯಿಸಿ ಆ ಜಾಗಕ್ಕೆ ಸೂಕ್ತ ಶಿಕ್ಷಕರನ್ನು ನಿಯೋಜಿಸಿ ಎಂದು ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆ ಮೇರೆಗೆ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ಪ್ರಭಾರ ಮುಖ್ಯ ಶಿಕ್ಷಕ ಬಾಲುನಾಯ್ಕ ಅವರನ್ನು ಬಸಪ್ಪನದೊಡ್ಡಿ ಸರ್ಕಾರಿ ಶಾಲೆಗೆ ಮತ್ತು ಸಹ ಶಿಕ್ಷಕ ಪಿ.ಮಹದೇವ ಅವರನ್ನುಲೊಕ್ಕನಹಳ್ಳಿ ಸರ್ಕಾರಿ ಶಾಲೆಗೆ ವರ್ಗಾಯಿಸಿ, ಮುಖ್ಯ ಶಿಕ್ಷಕ ಹುದ್ದೆಗೆ ಡಿ.ನಾಗರಾಜು ಎಂಬುವವರನ್ನು ನೇಮಕ ಮಾಡಿ ಮತ್ತೂಂದು ಶಿಕ್ಷಕ ಹುದ್ದೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಕ್ರಮವಹಿಸಿದ್ದಾರೆ.

ಶಿಕ್ಷಕನನ್ನು ಸುತ್ತುವರಿದು ಗೋಳಾಡಿದ ವಿದ್ಯಾರ್ಥಿಗಳು: ಸಹ ಶಿಕ್ಷಕ ಮಹದೇವ ಅವರ ವರ್ಗಾವಣೆಯಿಂದ ಕಂಗಾಲಾದ ಕೆಲ ವಿದ್ಯಾರ್ಥಿಗಳು, ಅವರನ್ನು ಸುತ್ತುವರಿದು ಅಳುತ್ತಿದ್ದರು. ಯಾವುದೇ ಕಾರಣಕ್ಕೂ ಶಾಲೆ ಬಿಟ್ಟು ತೆರಳದಂತೆ ಗೋಗರೆಯುತ್ತಿದ್ದರು. ಈ ವೇಳೆ ಶಿಕ್ಷಕಮಹದೇವ ಕೂಡ ಕಣ್ಣೀರು ಹಾಕಿದ್ದರು. ಈ ಸಂಬಂಧ ಕೆಲ ಗ್ರಾಮಸ್ಥರು, ಮಹದೇವ ಅವರು ಕನ್ನಡ, ಆಂಗ್ಲ ಭಾಷೆ ಬೋಧನೆ ಮಾಡುವುದರ ಜೊತೆಗೆ ಶಾಲೆಯಲ್ಲಿ ದೈಹಿಕ ಶಿಕ್ಷಕರು ಇಲ್ಲದ ಹಿನ್ನೆಲೆ ಆಟೋಟಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದರು. ಅಲ್ಲದೆ, ಶಾಲೆಯ ಬಿಸಿಯೂಟ ವಿಭಾಗವನ್ನು ಸಮರ್ಥವಾಗಿನಿಭಾಯಿಸುತ್ತಾ ವಿದ್ಯಾರ್ಥಿಗಳಿಗೆ ಶುಚಿ ರುಚಿಯಾದಬಿಸಿಯೂಟವನ್ನೂ ನೀಡುತ್ತಿದ್ದರು. ಆದ್ದರಿಂದ ಅವರನ್ನು ವರ್ಗಾವಣೆ ಮಾಡಬಾರದು ಎಂದು ಆಗ್ರಹಿಸಿದ್ದರು.

ರಣರಂಗವಾದ ಶಾಲೆ: ಶನಿವಾರ ವಿದ್ಯಾರ್ಥಿಗಳೆಲ್ಲಾಶಾಲೆಗೆ ಹಾಜರಾಗಿದ್ದು, ಕೆಲ ವಿದ್ಯಾರ್ಥಿಗಳು ಶಿಕ್ಷಕಮಹದೇವ ಅವರ ವರ್ಗಾವಣೆಯನ್ನು ಖಂಡಿಸಿ ಕೊಠಡಿಯೊಂದಕ್ಕೆ ನುಗ್ಗಿ ಪೀಠೊಪಕರಣಗಳನ್ನೂಧ್ವಂಸಗೊಳಿಸಿದ್ದಾರೆ. ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವಿದ್ಯಾರ್ಥಿಗಳ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಲ್ಲದೆ, ಈ ಕೃತ್ಯದ ಹಿಂದೆ ಶಿಕ್ಷಕರ ಪಾತ್ರ ಅಥವಾಶಿಕ್ಷಕರ ಬೆಂಬಲಿಗರ ಕೈವಾಡವೂ ಇರುವುದರ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಶಿಕ್ಷಕರ ವೈಮನಸ್ಸಿನಿಂದಾಗಿ ವಿದ್ಯಾರ್ಥಿಗಳಮನಸ್ಸಿನ ಮೇಲೆ ಪರಿಣಾಮ ಬೀರಿದ್ದು, ಮಕ್ಕಳ ಭವಿಷ್ಯ ರೂಪಿಸಬೇಕಾದವರೆ ತಮ್ಮ ಸ್ವಾರ್ಥಕ್ಕೆ ಮಕ್ಕಳನ್ನು ಬಳಸಿಕೊಂಡಿರುವುದು ನಾಗರಿಕಸಮಾಜವೇ ತಲೆ ತಗ್ಗಿಸುವಂತಾಗಿದೆ. ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.