ಹಿಂದಿ ಹೇರಿಕೆ ವಿರುದ್ಧ ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ


Team Udayavani, Sep 19, 2019, 3:00 AM IST

hindi-herike

ಚಾಮರಾಜನಗರ: ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಹಿಂದಿ ಹೇರಿಕೆ ಮಾಡುವ ಮೂಲಕ ಕನ್ನಡ ಭಾಷೆಯನ್ನು ತುಳಿಯುತ್ತಿದೆ. ಕನ್ನಡಿಗರ ಉದ್ಯೋಗಗಳು ಹಿಂದಿಯವರ ಪಾಲಾಗುತ್ತಿವೆ ಎಂದು ಆರೋಪಿಸಿ ಬಹುಜನ ವಿದ್ಯಾರ್ಥಿ ಸಂಘ ಜಿಲ್ಲಾ ಘಟಕದ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ನಗರದಲ್ಲಿ ಭಾರೀ ಪ್ರತಿಭಟನೆ ನಡೆಸಿದರು.

ನಗರದ ಚಾಮರಾಜೇಶ್ವರ ಉದ್ಯಾನವನದ ಆವರಣದಲ್ಲಿ ಸಂಘದ ಜಿಲ್ಲಾ ಸಂಯೋಜಕ ಪರ್ವತ್‌ರಾಜ್‌ ಅವರ ನೇತೃ ತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತದಲ್ಲಿ ವಿದ್ಯಾರ್ಥಿಗಳು ಮಾನವ ಸರಪಳಿ ರಚಿಸಿ ಪ್ರತಿಭಟಿಸಿದರು. ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾತಡಳಿ ಭವನಕ್ಕೆ ತರಳಿ ಕೆಲಕಾಲ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್‌ ಅವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು.

ವ್ಯವಸ್ಥೆಗೆ ಧಕ್ಕೆ ತರಬಾರದು: ಸಂಘದ ಜಿಲ್ಲಾ ಸಂಯೋಜಕ ಪರ್ವತ್‌ರಾಜ್‌ ಮಾತನಾಡಿ, ಭಾರತದೇಶವು ಬಹುಭಾಷಾ ಸಂಸ್ಕೃತಿಯನ್ನು ಹೊಂದಿದೆ. ಸಾಂಸ್ಕೃತಿಕ ಮತ್ತು ಭಾಷಿಕ ವೈವಿಧ್ಯತೆ ನಮ್ಮ ದೇಶದ ಹೆಮ್ಮೆ, ಸಾವಿರಾರು ಭಾಷೆಗಳು ಬಗೆಬಗೆಯ ಜನಜೀವನ ಆಹಾರ, ಉಡುಪು, ಹಬ್ಬ-ಹರಿದಿನಗಳನ್ನು ಒಂದೇ ನೆಲದಲ್ಲಿ ಕಾಣಬಹುದಾದ ಶ್ರೀಮಂತಭೂಮಿ. ಇಂತಹ ಶ್ರೀಮಂತ ಸಂಸ್ಕೃತಿಯ ಮಹತ್ವವನ್ನು ಅರಿತಿದ್ದ ನಮ್ಮ ರಾಷ್ಟ್ರನಾಯಕರು ಅದರ ರಕ್ಷಣೆಗಾಗಿ ಭಾಷವಾರು ಪ್ರಾಂತ್ಯದ ಆಧಾರದ ಮೇಲೆ ರಾಜ್ಯಗಳನ್ನು ಒಟ್ಟುಗೂಡಿಸಿ ದೇಶದ ಒಕ್ಕೂಟ ವ್ಯವಸ್ಥೆಯನ್ನು ನಿರ್ಮಾಣ ಮಾಡಿದ್ದಾರೆ. ಇದಾವುದರ ಅರಿವೆ ಇಲ್ಲದ ಪ್ರಸ್ತುತ ಕೇಂದ್ರ ಸರ್ಕಾರ ಇಂದು ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುವ ಅನೇಕ ನೀತಿಗಳನ್ನು ಜಾರಿಗೆ ತರಲು ಹೊರಟಿದೆ ಎಂದರು.

ಅಸಾಂವಿಧಾನಿಕ ನೀತಿ ಬೇಡ: ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಭಾಷೆಯ ಹೇರಿಕೆಯೂ ಒಂದು. ಸಂವಿಧಾನ ಅನುಚ್ಛೇದ 8, 22 ಭಾಷೆಗಳನ್ನು ಮಾನ್ಯ ಮಾಡಿದ್ದು, 343 ಮತ್ತು 344 ನೇ ವಿಧಿಗಳಲ್ಲಿ ಹಿಂದಿಯನ್ನು ಆಡಳಿತಾತ್ಮಕ ಭಾಷೆಯೆಂದಷ್ಟೇ ಹೇಳಿದೆ. ಹಿಂದಿನ ಕಾಂಗ್ರೆಸ್‌ ಸರ್ಕಾರ 2011ರಲ್ಲಿ ಪಿ.ಚಿದಂಬರಂ ನೇತೃತ್ವದ ಅಧಿಕೃತ ಭಾಷೆಗಳ ಸಂಸದೀಯ ಸಮಿತಿಯ ಮುಖೇನ ಮಾಡಿಸಿತು. ಅದರ ಮುಂದುವರೆದ ಭಾಗವಾಗಿ ಪ್ರಸ್ತುತ ನರೇಂದ್ರಮೋದಿ ನಾಯಕತ್ವದ ಬಿಜೆಪಿ ಸರ್ಕಾರ ಒಂದು ದೇಶ- ಒಂದು ಭಾಷೆ ಎನ್ನುವ ಅಪಾಯಕಾರಿ ಮತ್ತು ಅಸಾಂವಿಧಾನಿಕ ನೀತಿಯ ಮುಖೇನ ಮಾಡ ಹೊರಟಿದೆ. ಯುಪಿಎಸ್‌ಪಿ ಮತ್ತು ಬ್ಯಾಂಕಿಂಗ್‌ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಿಕೊಡುವುದರ ಮುಖೇನ ಕನ್ನಡಿಗರಿಗೆ ಇಲ್ಲಿಯವರಗೆ ಉದ್ಯೋಗಗಳಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಹಿಂದಿ ಕೇವಲ ಆಡಳಿತ ಭಾಷೆ: ಸಂವಿಧಾನವು ಮಾನ್ಯ ಮಾಡಿರುವ 22 ಭಾಷೆಗಳ ಮಾನ್ಯತೆಯನ್ನು ಎತ್ತಿಹಿಡಿಯುವುದು ಹಾಗೂ ಹಿಂದಿ ಕೇವಲ ಆಡಳಿತ ಭಾಷೆಯೇ ಹೊರತು ಕಡ್ಡಾಯ ಬೋಧನ ಕ್ರಮವಲ್ಲ ಎನ್ನುವ 1963 ಅಧಿಕೃತ ಭಾಷೆಗಳ ಕಾಯ್ದೆ ಮತ್ತು ಅಧಿಕೃತ ಭಾಷಾನಿಯಮ 1976 ಅನ್ನು ದೇಶಾದ್ಯಂತ ಮನವರಿಕೆ ಮಾಡಿಕೊಡಲು ಸರ್ಕಾರ ಪ್ರಯತ್ನಿಸಬೇಕು. ಸರೋಜಿನಿ ಮಹಿಷಿ ವರದಿಯ ಪರಿಷ್ಕೃತ ಆವೃತ್ತಿಯಾದ ಪೊ›.ಎಸ್‌.ಜಿ.ಸಿದ್ದರಾಮಯ್ಯ ನೇತೃತ್ವದ ಸಮಿತಿಯ ಶಿಫಾರಸ್ಸುಗಳನ್ನು ಜಾರಿ ಮಾಡಬೇಕು.

ತ್ರಿಭಾಷಾ ನೀತಿ ರದ್ದುಗೊಳಿಸಿ: ಸರ್ಕಾರದ ತ್ರಿಭಾಷಾ ನೀತಿಯನ್ನು ಕೂಡಲೇ ರದ್ದುಪಡಿಸಿ ಕಲಿಯುವ ಹಕ್ಕನ್ನು ಮಕ್ಕಳು ಮತ್ತು ಪೋಷಕರು ನಿರ್ಧರಿಸುವ ವ್ಯವಸ್ಥೆ ಜಾರಿಯಾಗಬೇಕು. ಒಂದು ದೇಶ- ಒಂದು ಭಾಷೆ ಎನ್ನುವ ಬದಲಾಗಿ ಒಂದುದೇಶ ಒಂದೇ ಶಿಕ್ಷಣ ಮಾದರಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎನ್ನುವ ನೀತಿ ಜಾರಿಮಾಡಬೇಕು. ಇಲ್ಲದಿದ್ದರೆ ಕೇಂದ್ರ ಸರ್ಕಾರ ವಿರುದ್ಧ ದೇಶಾದ್ಯಂತ ಜನಾಭಿಪ್ರಾಯಗಳನ್ನು ಸಂಗ್ರಹಿಸಿ ದೊಡ್ಡಮಟ್ಟದ ಹೋರಾಟವನ್ನು ರೂಪಿಸಲಾಗುವುದೆಂದು ಪರ್ವತ್‌ರಾಜ್‌ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಮಹೇಂದ್ರ, ಶ್ರೀನಿವಾಸ, ಕಾರ್ತಿಕ್‌, ರೇಚಣ್ಣ, ಚನ್ನರಾಜದಾನವ, ಮಧುಸೂದನ್‌, ಕೃಷ್ಣಮೂರ್ತಿ, ಶಕುಂತಲಾ, ಸುನಿತಾ, ಪುಷ್ಪಲತಾ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.