ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಯಾಗಲಿ: ಅಶ್ವಿನಿ
Team Udayavani, Feb 1, 2021, 11:17 AM IST
ಚಾಮರಾಜನಗರ: ಜಿಲ್ಲಾಡಳಿತ,ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ದ್ಯಂತ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಭಾನು ವಾರ ಬೆಳಗ್ಗೆ ಚಾಲನೆ ನೀಡಲಾಯಿತು.
ನಗರದ ಜಿಲ್ಲಾ ಅಸ್ಪತ್ರೆ ಆವರಣದಲ್ಲಿನಡೆದ ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷೆ ಎಂ.ಅಶ್ವಿನಿ ಜಿಪಂ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣ ರಾವ್ ಅವರ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಯಾಗಲಿ ಎಂದು ಹಾರೈಸಿದರು.
ಜಿಪಂ ಉಪಾಧ್ಯಕ್ಷೆ ಶಶಿಕಲಾ ಮಾತ ನಾಡಿ, ಯಾವುದೇ ವದಂತಿಗಳಿಗೆ ಕಿವಿಗೊಡದೆ ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕಿಸಬೇಕು. ಕಾರ್ಯಕ್ರಮ ಯಶಸ್ವಿ ಯಾಗಿ ನಡೆಯಲು ಪ್ರತಿಯೊಬ್ಬರೂ ಸಹಕಾರ ನೀಡಬೇಕೆಂದರು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ಮಾತ ನಾಡಿ, ಪಲ್ಸ್ ಪೋಲಿಯೋ ಅತ್ಯಂತ ಮಹತ್ವದ್ದಾಗಿದೆ. ಅಂಗವೈಕಲ್ಯತೆ ತಪ್ಪಿಸುವ ಉದ್ದೇಶದಿಂದ ಅಭಿಯಾನ ನಡೆಸಿಕೊಂಡು ಬರಲಾಗುತ್ತಿದೆ.
ಜಿಲ್ಲೆಯ ಎಲ್ಲಾ ಕಡೆ ಲಸಿಕೆ ನೀಡಲು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲಾಗಿದೆ ಎಂದರು. ನಗರಸಭೆ ಅಧ್ಯಕ್ಷೆ ಆಶಾ, ಉಪಾಧ್ಯಕ್ಷೆ ಸುಧಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ. ರವಿ, ರೋಟರಿ ಸಂಸ್ಥೆ ಅಧ್ಯಕ್ಷ ಪ್ರಕಾಶ್, ಆರ್‌ಸಿಎಚ್ ಅಧಿಕಾರಿ ಡಾ. ವಿಶ್ವೇಶ್ವ ರಯ್ಯ, ಆರ್‌ಎಂಒ ಡಾ.ಕೃಷ್ಣಪ್ರಸಾದ್‌ಮತ್ತಿತರರಿದ್ದರು.
ಶೇ .96 ಲಸಿಕೆ ನೀಡಿಕೆ: ಜಿಲ್ಲೆಯಲ್ಲಿ ಭಾನುವಾರ ನಡೆದ ಲಸಿಕೆ ಕಾರ್ಯ ಕ್ರಮದಲ್ಲಿ ಶೇ.96 ಪ್ರಗತಿ ಸಾಧಿಸ ಲಾ ಗಿದೆ. ಒಟ್ಟು 68,682 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.
ಭಾನುವಾರ 65,986 ಮಕ್ಕಳಿಗೆ ಲಸಿಕೆ ನೀಡಲಾಗಿದೆ: ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ದ್ಯಂತ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಭಾನು ವಾರ ಬೆಳಗ್ಗೆ ಚಾಲನೆ ನೀಡಲಾಯಿತು. ನಗರದ ಜಿಲ್ಲಾ ಅಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷೆ ಎಂ.ಅಶ್ವಿನಿ ಜಿಪಂ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣ ರಾವ್ ಅವರ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಯಾಗಲಿ ಎಂದು ಹಾರೈಸಿದರು.
ಇದನ್ನೂ ಓದಿ:ಹೊಸಬರ ಕಣ್ಣಲ್ಲಿ ಎಂಬಿಎ ಕನಸು
ಜಿಪಂ ಉಪಾಧ್ಯಕ್ಷೆ ಶಶಿಕಲಾ ಮಾತ ನಾಡಿ, ಯಾವುದೇ ವದಂತಿಗಳಿಗೆ ಕಿವಿಗೊಡದೆ ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕಿಸಬೇಕು. ಕಾರ್ಯಕ್ರಮ ಯಶಸ್ವಿ ಯಾಗಿ ನಡೆಯಲು ಪ್ರತಿಯೊಬ್ಬರೂ ಸಹಕಾರ ನೀಡಬೇಕೆಂದರು. ಜಿಪಂ ಮುಖ್ಯ ಕಾರ್ಯನಿರ್ವಾಹಕಅಧಿಕಾರಿ ಹರ್ಷಲ್ ಬೋಯರ್ ಮಾತ ನಾಡಿ, ಪಲ್ಸ್ ಪೋಲಿಯೋ ಅತ್ಯಂತ ಮಹತ್ವದ್ದಾಗಿದೆ. ಅಂಗವೈಕಲ್ಯತೆ ತಪ್ಪಿಸುವ ಉದ್ದೇಶದಿಂದ ಅಭಿಯಾನ ನಡೆಸಿಕೊಂಡು ಬರಲಾಗುತ್ತಿದೆ. ಜಿಲ್ಲೆಯ ಎಲ್ಲಾ ಕಡೆ ಲಸಿಕೆ ನೀಡಲು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲಾಗಿದೆ ಎಂದರು. ನಗರಸಭೆ ಅಧ್ಯಕ್ಷೆ ಆಶಾ, ಉಪಾಧ್ಯಕ್ಷೆ ಸುಧಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ. ರವಿ, ರೋಟರಿ ಸಂಸ್ಥೆ ಅಧ್ಯಕ್ಷ ಪ್ರಕಾಶ್, ಆರ್‌ಸಿಎಚ್ ಅಧಿಕಾರಿ ಡಾ. ವಿಶ್ವೇಶ್ವ ರಯ್ಯ, ಆರ್‌ಎಂಒ ಡಾ.ಕೃಷ್ಣಪ್ರಸಾದ್ ಮತ್ತಿತರರಿದ್ದರು.
ಶೇ.96 ಲಸಿಕೆ ನೀಡಿಕೆ: ಜಿಲ್ಲೆಯಲ್ಲಿ ಭಾನುವಾರ ನಡೆದ ಲಸಿಕೆ ಕಾರ್ಯ ಕ್ರಮದಲ್ಲಿ ಶೇ.96 ಪ್ರಗತಿ ಸಾಧಿಸ ಲಾ ಗಿದೆ. ಒಟ್ಟು 68,682 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಭಾನುವಾರ 65,986 ಮಕ್ಕಳಿಗೆ ಲಸಿಕೆ ನೀಡಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.