28ಕ್ಕೆ ಡೀಸಿ ಕಚೇರಿ ಮುತ್ತಿಗೆ: ಭಾಗ್ಯರಾಜ್‌

Team Udayavani, Feb 25, 2023, 2:39 PM IST

tdy-12

ಚಾಮರಾಜನಗರ: ಕಬ್ಬು ಖರೀದಿಸಿದ ಸಕ್ಕರೆ ಕಾರ್ಖಾನೆಗಳಿಂದ ಹೆಚ್ಚುವರಿ 150 ರೂ. ದರ ಕೊಡಿಸಲು ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘ ವತಿಯಿಂದ ಫೆ.28 ರಂದು ಮಂಗಳವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲಾಗುತ್ತದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್‌ ಹೇಳಿದರು.

ನಗರದ ಪ್ರವಾಸಿಮಂದಿರದಲ್ಲಿ ನಡೆದ ಪೂರ್ವಭಾವಿಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕಬ್ಬಿನ ಹೆಚ್ಚುವರಿ ದರ 150 ರೂ.ಗಳನ್ನು, ಸಕ್ಕರೆ ಕಾರ್ಖಾನೆಗಳಿಂದ ಕೊಡಿಸುವಂತೆ ಸೇರಿ ರೈತರ ನಾನಾ ಹಕ್ಕೊತ್ತಾಯಗಳ ಈಡೇರಿಕೆಗೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಅಂದು ಮೈಸೂರಿನ ಗನ್‌ಹೌಸ್‌ ವೃತ್ತದಿಂದ ಬೆಳಿಗ್ಗೆ 11 ಕ್ಕೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮುತ್ತಿಗೆ ಹಾಕಲಾಗುವುದು ಈ ಕಾರ್ಯ ಕ್ರಮಕ್ಕೆ ಚಾಮರಾಜನಗರ ಜಿಲ್ಲೆಯ ರೈತರು ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಕೆರೆಕಟ್ಟೆ ತುಂಬಿಸಿ: ಅರಿಶಿನಕ್ಕೆ ಎಂಐಎಸ್‌ ಯೋಜನೆಯಡಿ ಸರ್ಕಾರ ಮಧ್ಯಪ್ರವೇಶ ಮಾಡಿ ಒಂದು ಕ್ವಿಂಟಲ್‌ಗೆ 17,500 ರೂ. ಗಳನ್ನು ಕೊಡಬೇಕು. ಕಾವೇರಿ-ಕಬಿನಿ ಅಚ್ಚುಕಟ್ಟು ನಾಲೆಗಳ ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಕಬ್ಬು ಬಾಳೆ, ಇನ್ನಿತರ ಬೆಳೆಗಳ ರಕ್ಷಣೆಗಾಗಿ ಬೇಸಿಗೆಯಲ್ಲಿ ದನಕರುಗಳ ಕುಡಿಯುವ ನೀರಿಗಾಗಿ ಕೆರೆಕಟ್ಟೆಗಳನ್ನು ತುಂಬಿಸಬೇಕು. ನಾಲೆಗಳಿಗೆ ನೀರು ಹರಿಸಬೇಕು. ಕೃಷಿ ಪಂಪ್‌ ಸೆಟ್‌ಗಲಿಗೆ ಬೆಳಗ್ಗೆ 6ರಿಂದ ಸಂಜೆ 6 ರವಗೆ ಹಗಲು ವೇಳೆ ಸಮರ್ಪಕ ವಿದ್ಯುತ್‌ ನೀಡಬೇಕು. ಪ್ರಧಾನಿ ಫ‌ಸಲ್‌ ಬಿಮಾ ಬೆಳೆವಿಮೆ ಪದ್ದತಿ ರೈತರಿಗೆ ಸಹಕಾರಿಯಲ್ಲ. ರೈತರ ಅನುಕೂಲಕ್ಕೆ ತಕ್ಕಂತೆ ನಿಮಯಗಳನ್ನು ಬದಲಾಯಿಸಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಎಚ್‌. ಮೂಕಹಳ್ಳಿ ಮಹದೇವಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಮೂಡ್ಲುಪುರ ಪಟೇಲ್‌ ಶಿವಮೂರ್ತಿ, ತಾಲೂಕ ಉಪಾಧ್ಯಕ್ಷ ಹಾಲಿನ ನಾಗರಾಜು, ಹೆಗ್ಗೊಠಾರ ಶಿವಸ್ವಾಮಿ, ಕಿನಕಹಳ್ಳಿ ಬಸವಣ್ಣ, ಮಂಜುನಾಥ ಉಡಿಗಾಲ, ಗುರುಪ್ರಸಾದ್‌, ಗುರು, ಗುರುಮಲ್ಲಪ್ಪ, ಮಹೇಶ, ಗುರುಸಿದ್ದಶೆಟ್ಟಿ, ಸುಧಾಕರ, ಮಲೆಯೂರು ಹರ್ಷ, ಪ್ರವೀಣ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.