ಸುಳ್ವಾಡಿ ವಿಷ ಪ್ರಸಾದ : ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
Team Udayavani, Jan 4, 2019, 12:55 AM IST
ಕೊಳ್ಳೇಗಾಲ: ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದ ವಿಷಪ್ರಾಶನ ಪ್ರಕರಣದ ಆರೋಪಿಗಳಾದ ದೇಗುಲದ ಟ್ರಸ್ಟ್ ಅಧ್ಯಕ್ಷ ಇಮ್ಮಡಿ ಮಹದೇವಸ್ವಾಮಿ, ವ್ಯವಸ್ಥಾಪಕ ಮಾದೇಶ, ಆತನ ಪತ್ನಿ ಅಂಬಿಕಾ ಹಾಗೂ ಅರ್ಚಕ ದೊಡ್ಡಯ್ಯ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯ ಜ.16ಕ್ಕೆ ವಿಸ್ತರಿಸಿ ಆದೇಶ ನೀಡಿತು.
ವಿಷ ಪ್ರಸಾದ ಪ್ರಕರಣದ ನಾಲ್ವರು ಆರೋಪಿಗಳನ್ನು ಪಟ್ಟಣದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯಕ್ಕೆ ಗುರುವಾರ ಬೆಳಗ್ಗೆ 11.30ಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಎಸ್.ಜೆ.ಕೃಷ್ಣ ಅವರು, “ನಿಮ್ಮ ಪರ ವಕೀಲರನ್ನು ನೇಮಿಸಿಕೊಂಡಿದ್ದೀರಾ’ ಎಂದು ಪ್ರಶ್ನಿಸಿದರು. ಆರೋಪಿಗಳು “ಇಲ್ಲ’ ಎಂದರು.
ಬಳಿಕ, ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ಜ.16ರವರೆಗೆ ವಿಸ್ತರಿಸಿ ಆದೇಶ ನೀಡಿದರು. ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಟಿ. ಶ್ರೀಕಾಂತ್ ಅವರು ರಜೆಯಲ್ಲಿದ್ದ ಕಾರಣ, ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.