![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 3, 2019, 3:00 AM IST
ಕೊಳ್ಳೇಗಾಲ: ತಾಲೂಕಿನ ಚಿಲಕವಾಡಿ ಗ್ರಾಮಕ್ಕೆ ಕುಡಿಯುವ ನೀರನ್ನು ಪೂರೈಕೆ ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಖಾಲಿ ಬಿಂದಿಗೆ ಇಟ್ಟು ಪ್ರತಿಭಟನೆ ನಡೆಸಿದರು. ತಾಲೂಕಿನ ಕುಂತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಚಿಲಕವಾಡಿ ಗ್ರಾಮದಲ್ಲಿ ಕಳೆದ ಒಂದು ವಾರಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರವಿದ್ದು, ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಮಸ್ಥರ ಮನವಿಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿದ್ದಾರೆಂದು ಆರೋಪಿಸಿ ಘೋಷಣೆ ಕೂಗಿದರು.
ಗ್ರಾಮದ ಮುಖಂಡ ಪ್ರದೀಪ್ ಮಾತನಾಡಿ, ಕುಂತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಚಿಲಕವಾಡಿ ಗ್ರಾಮದಲ್ಲಿ ಸುಮಾರು ಒಂದು ವಾರಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಗ್ರಾಪಂ ಅಧಿಕಾರಿಗಳು, ನೀರು ಪೂರೈಕೆ ಮಾಡುವಲ್ಲಿ ವಿಫಲರಾಗಿದ್ಧಾರೆ ಎಂದು ಆರೋಪಿಸಿದರು.
ಗ್ರಾಮದಲ್ಲಿ ಹಲವಾರು ಕೋಮಿನ ಜನರು ವಾಸವಾಗಿದ್ದು, ಎಲ್ಲಾ ಕೋಮಿನ ಜನರ ಬಡಾವಣೆಗಳಿಗೆ ನೀರು ಹರಿಸುತ್ತಾರೆ. ಆದರೆ ಪಂಚಾಯಿತಿಯ ನೀರು ಗಂಟಿ ಗುರುಮಲ್ಲುರವರು ಪ.ಜಾತಿ ಬಡಾವಣೆಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡುವು ದರಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರಿತಪಿಸಬೇಕಾಗಿದೆ ಎಂದರು.
ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಪೆಟ್ರೋಲ್ ಬಂಕ್ ಮತ್ತು ಅಕ್ಕಿ ಮಿಲ್‌ಗಳಿಗೆ ನೀರು ಸರಾಗವಾಗಿ ಹರಿದು ಹೋಗುವಂತೆ ಪೈಪ್‌ಗ್ಳನ್ನು ಜೋಡಣೆ ಮಾಡಿ ನೀರು ಪೂರೈಸುತ್ತಿದ್ದಾರೆ ಎಂದು ಆರೋಪಿಸಿದ ಅವರು ಅದೇ ನೀರನ್ನು ಗ್ರಾಮಸ್ಥರಿಗೆ ಏಕೆ ಪೂರೈಸುತ್ತಿಲ್ಲ ಎಂದು ಪ್ರಶ್ನಿಸಿದರು.
ಗ್ರಾಮ ಪಂಚಾಯಿತಿ ಅಧಿಕಾರಿಗಳು ನೀರು ಪೂರೈಕೆ ಮಾಡುವ ಸಲುವಾಗಿ 10 ನೀರಿನ ತೊಂಬೆಗಳನ್ನು ಅಳವಡಿಸಿದ್ದಾರೆ. 5 ಕೈಪಂಪುಗಳನ್ನು ಅಳವಡಿಸಿದ್ದಾರೆ. ಯಾವುದರಿಂದಲೂ ನೀರು ಬರದೆ ಕೆಟ್ಟು ನಿಂತಿದ್ದು, ಗ್ರಾಪಂನ ಪಿಡಿಒ ನಿರ್ಲಕ್ಷ್ಯ ತೋರಿ ಗ್ರಾಮದಲ್ಲಿ ನೀರು ಪೂರೈಕೆ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದರು.
ಈಗಾಗಲೇ ಸಂಬಂಧಿಸಿದ ತಾಲೂಕು ಪಂಚಾಯಿತಿ ಇಒ ಮತ್ತು ಜಿಪಂ ಸಿಇಒ ಅವರು ಕೂಡಲೇ ಮಧ್ಯೆ ಪ್ರವೇಶ ಮಾಡಿ ಕುಡಿಯುವ ನೀರಿಗಾಗಿ ತಾರತಮ್ಯ ಎಸಗುತ್ತಿರುವ ಸಿಬ್ಬಂದಿ ಮೇಲೆ ಕಾನೂನು ಕ್ರಮ ಕೈಗೊಂಡು ಗ್ರಾಮದಲ್ಲಿ ಎದ್ದಿರುವ ನೀರಿನ ಸಮಸ್ಯೆಯನ್ನು ಪರಿಹರಿಸಿಕೊಡಬೇಕೆಂದು ಮನವಿ ಮಾಡಿದರು.
ಗ್ರಾಮದ ಮಹಿಳೆ ಲಕ್ಷ್ಮಮ್ಮ ಮಾತನಾಡಿ, ಕುಡಿಯುವ ನೀರಿಗಾಗಿ ಪಕ್ಕದ ಗ್ರಾಮಗಳಿಗೆ ತೆರಳಿ ನೀರು ತರುವಂತಹ ಸ್ಥಿತಿ ನಿರ್ಮಾಣವಾಗಿದೆ ಮತ್ತು ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ವಿದ್ಯುತ್ ಪೂರೈಕೆಯಾಗುತ್ತಿದೆ. ಕೂಡಲೇ ಕ್ಷೇತ್ರದ ಶಾಸಕರು ಗ್ರಾಮಸ್ಥರಿಗೆ ಉಂಟಾಗಿರುವ ಸಮಸ್ಯೆ ಬಗೆಹರಿಸಿಕೊಡಬೇಕು ಎಂದು ಒತ್ತಾಯಿಸಿದರು.
ಗ್ರಾಪಂ ಸದಸ್ಯ ನಾಗಯ್ಯ ಮಧ್ಯಪ್ರವೇಶ ಮಾಡಿ ಕುಡಿಯುವ ನೀರಿನ ಸಮಸ್ಯೆ ಮತ್ತು ವಿದ್ಯುತ್ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸುವ ಕೊಡುವ ಭರವಸೆಯನ್ನು ನೀಡಿದ ಬಳಿಕ ಗ್ರಾಮಸ್ಥರು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕೈಬಿಟ್ಟರು. ಪ್ರತಿಭಟನೆಯಲ್ಲಿ ಮುಖಂಡರಾದ ಗೋಪಾಲ, ರಮೇಶ್, ಮಹಿಳೆಯರಾದ ರಾಜಮ್ಮ, ನಂಜಮ್ಮ, ನಿಂಗಮ್ಮ, ಕೆಂಪಮ್ಮ, ಮಹದೇವಮ್ಮ ಸೇರಿದಂತೆ ಹಲವಾರು ಮಹಿಳೆಯರು ಇದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.