ದತ್ತು ಪಡೆದ ಶಾಲೆ ಅಭಿವೃದ್ಧಿಗೆ ಸಹಕರಿಸಿ

ವಿದ್ಯಾಭ್ಯಾಸ ಮಾಡಿದ ಶಾಲೆಯನ್ನು ಎಂದಿಗೂ ಮರೆಯಬೇಡಿ: ಎಸ್‌.ಮರಿಸ್ವಾಮಿ ಸಲಹೆ

Team Udayavani, Jul 15, 2019, 11:15 AM IST

cn-tdy-1..

ಕೊಳ್ಳೇಗಾಲ: ಸರ್ಕಾರಿ ಪ್ರಾಥಮಿಕ ಶಾಲೆಯನ್ನು ದತ್ತುಪಡೆದುಕೊಂಡು ಅಭಿವೃದ್ಧಿ ಪಡಿಸಲು ಗ್ರಾಮದ ಎಲ್ಲಾ ಜನಾಂಗದ ಮುಖಂಡರು ಸಹಕಾರ ನೀಡಬೇಕೆಂದು ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಎಸ್‌.ಮರಿಸ್ವಾಮಿ ಮನವಿ ಮಾಡಿದರು.

ತಾಲೂಕಿನ ಸತ್ತೇಗಾಲ ಗ್ರಾಮದ ತಮ್ಮ ನಿವಾಸದ ಆವರಣದಲ್ಲಿ ಗ್ರಾಮದ ಎಲ್ಲಾ ಜನಾಂಗದ ಮುಖಂಡರ ಸಭೆಯಲ್ಲಿ ಮಾತನಾಡಿ, ನಾವು ಗ್ರಾಮದಲ್ಲಿರುವ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಒಳ್ಳೆಯ ಉನ್ನತ ಹುದ್ದೆಯಲ್ಲಿ ಇದ್ದೇವೆ. ನಾವು ವಿದ್ಯಾ ಭ್ಯಾಸ ಮಾಡಿದ ಶಾಲೆಯನ್ನು ಎಂದಿಗೂ ಮರೆಯ ಬಾರದು ಎಂದರು.

ನೈರ್ಮಲ್ಯ ಮರೀಚಿಕೆ: ಕಳೆದ ತಿಂಗಳಲ್ಲಿ ಶಾಲೆಗೆ ಭೇಟಿ ನೀಡಿದ ಸಮಯದಲ್ಲಿ ಶಾಲೆಯ ಆವರಣದಲ್ಲಿ ಅಲ್ಲೊಂದು ಇಲ್ಲೊಂದು ಕಟ್ಟಡ ನಿರ್ಮಾಣ ಮಾಡಿರುವುದಲ್ಲದೆ ಇರುವ ಕಟ್ಟಡಗಳು ದುರಸ್ತಿಯಲ್ಲಿದ್ದು, ಅನೈರ್ಮಲ್ಯದಿಂದ ಇರುವುದನ್ನು ಕಂಡು ಬಹಳ ಬೇಸರವಾಗಿತ್ತು ಎಂದು ತಿಳಿಸಿದರು.

ಶಾಲೆ ಅಭಿವೃದ್ಧಿಗೆ 80 ಲಕ್ಷ ರೂ. ಬೇಕು: ನಾನು ಅಂದೇ ಈ ಶಾಲೆಯನ್ನು ಅಭಿವೃದ್ಧಿ ಪಡಿಸಲು 10 ಲಕ್ಷ ಸಹಾಯ ಧನ ನೀಡಲಾಗುವುದೆಂದು ಮಾತನಾ ಡಿದ್ದೇನೆ. ಈಗ ಶಾಲೆಯ ದುಸ್ಥಿತಿಯ ಬಗ್ಗೆ ಪೂರ್ಣ ಮಾಹಿತಿ ತಿಳಿದುಕೊಂಡಿದ್ದೇನೆ. ಶಾಲೆಯನ್ನು ಅಭಿವೃದ್ಧಿ ಪಡಿಸಬೇಕಾದರೆ 80 ಲಕ್ಷಕ್ಕೂ ಹೆಚ್ಚು ಹಣ ಬೇಕಾಗಿದೆ. ಈ ಶಾಲೆಯಲ್ಲಿ ದತ್ತುಪಡೆದುಕೊಂಡು ಹೊಸ ಕಟ್ಟಡ ನಿರ್ಮಾಣ ಮಾಡಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಿದ್ದೇನೆ ಎಂದರು.

ಮುಖಂಡರು ಕೈ ಜೋಡಿಸಿ: ಈಗಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಶಾಲೆ ದತ್ತುಪಡೆದುಕೊಳ್ಳಲು ಒಪ್ಪಿಗೆ ನೀಡಿದ್ದಾರೆ. ಎರಡು ಮೂರು ವಾರದಲ್ಲೇ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲು ತೀರ್ಮಾ ನಿಸಿದ್ದು, ಗ್ರಾಮದ ಎಲ್ಲಾ ಜನಾಂಗದ ಮುಖಂಡರು ಶಾಲೆಯ ಅಭಿವೃದ್ಧಿಪಡಿಸಲು ತಾವು ಕೈಜೋಡಿಸ ಬೇಕೆಂದು ಮನವಿ ಮಾಡಿದರು.

ಕಲ್ಯಾಣ ಮಂಟಪ ನಿರ್ಮಿಸಿ: ಮುಖಂಡ ಮುಕುಂದ ವರ್ಮ ಮಾತನಾಡಿ, ಸತ್ತೇಗಾಲ ಗ್ರಾಮದ ದೊಡ್ಡ ಗ್ರಾಮವಾಗಿದ್ದು, ಹಲವಾರು ಸಮಸ್ಯೆಗಳಿಂದ ಕೂಡಿದ್ದು, ಒಬ್ಬರಿಗೊಬ್ಬರ ವೈಮನಸ್ಸಿನಿಂದ ಗ್ರಾಮವು ಅಭಿವೃದ್ಧಿ ಕಾಣದೆ ಕುಂಠಿತವಾಗಿದೆ. ಗ್ರಾಮದ ಜಮೀ ನುಗಳನ್ನು ಮಾರಾಟ ಮಾಡಲು ಮತ್ತು ಖರೀದಿಸಲು ಸರ್ಕಾರದ ಅನುಮತಿ ಇಲ್ಲದೆ ರೈತರು ಸುಮಾರು ವರ್ಷಗಳಿಂದ ಸಂಕಷ್ಟದಲ್ಲಿ ಇರುವುದರಿಂದ ಈ ಸಂಬಂಧ ಹೈಕೋರ್ಟ್‌ ದಾವೆ ಹೂಡಲು ನಾನು ಸ್ವಂತ ಖರ್ಚು ಮಾಡಿ ವಕೀಲರನ್ನು ನೇಮಿಸಲಾಗುವುದು ಇದಕ್ಕೆ ಗ್ರಾಮದ ಮುಖಂಡರು ಸಹಕಾರ ನೀಡಬೇ ಕೆಂದ ಅವರು, ಗ್ರಾಮದಲ್ಲಿ ಮದುವೆ ಮಾಡಬೇಕಾದರೆ ಪಟ್ಟಣ ಮತ್ತು ನಗರಗಳಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ಮದುವೆ ಮಾಡುತ್ತಿದ್ದಾರೆ. ಗ್ರಾಮದಲ್ಲೇ ಒಂದು ಕಲ್ಯಾಣ ಮಂಟಪವನ್ನು ನಿರ್ಮಾಣ ಮಾಡ ಲು ಮುಖಂಡರು ಮುಂದಾಗಬೇಕೆಂದು ಹೇಳಿದರು.

ಸಂಪೂರ್ಣ ಬೆಂಬಲ: ಗ್ರಾಮದ ಮುಖಂಡರು ಶಾಲೆಯನ್ನು ಅಭಿವೃದ್ಧಿಪಡಿಸಲು ದತ್ತು ತೆಗೆದುಕೊಳ್ಳುತ್ತಿರುವುದರಿಂದ ಗ್ರಾಮದ ಎಲ್ಲಾ ಜನಾಂಗದ ಮುಖಂಡರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ನಿಮ್ಮ ಬೆಂಬಲಕ್ಕೆ ನಾವು ಇದ್ದೇವೆ. ಈ ಒಳ್ಳೆಯ ಕಾರ್ಯವನ್ನು ಮಾಡಲು ನಮ್ಮ ಸಹಕಾರವಿದೆ ಎಂದು ತಿಳಿಸಿದರು.

ನಂತರ ಮರಿಸ್ವಾಮಿ ಮಾತನಾಡಿ, ಶಾಲೆಯನ್ನು ದತ್ತು ಪಡೆದುಕೊಂಡು ಅಭಿವೃದ್ಧಿ ಪಡಿಸಲು ಗ್ರಾಮದ ಸರ್ಕಾರಿ ನೌಕರರು, ನಿವೃತ್ತ ನೌಕರರು ಹಾಗೂ ಅನುಕೂಲಸ್ಥರಿಂದ ಹಣ ಸಂಗ್ರಹಣ ಮಾಡಿ ಇದಕ್ಕೆ ಎಲ್ಲಾ ಕೋಮಿನ ಜನರನ್ನು ಸೇರಿಸಿ ಸಮಿತಿ ರಚನೆ ಮಾಡಿ ಯಾವುದೇ ಹಣಕಾಸು ವ್ಯತ್ಯಾಸವಾಗದಂತೆ ನೋಡಿಕೊಳ್ಳಲಾಗುವುದು. ಮೊದಲನೆಯದಾಗಿ ಶಾಲೆಅಭಿವೃದ್ಧಿಪಡಿಸುವುದೇ ನಮ್ಮ ಗುರಿಯಾಗಿದೆ. ಗ್ರಾಮದ ಅಭಿವೃದ್ಧಿಗೆ ಮುಂದಿನ ದಿನಗಳು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮುಖಂಡರಾದ ದಳಪತಿ ನಾಗಣ್ಣೇಗೌಡ, ಮರು ಹುಚ್ಚನಾಯಕ, ಮಹದೇವಪ್ಪ, ಜಯಣ್ಣ, ಶಿವಣ್ಣೇ ಗೌಡ, ಸೋಮಣ್ಣ, ಮಹದೇವು, ಅಧಿಕಾರಿಗಳಾದ ವಿಜಯ್‌, ಮಲ್ಲಿಕಾರ್ಜುನ, ನಿವೃತ್ತಿ ಅಧಿಕಾರಿ ಗಂಗಾದರ್‌ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.