ಸುಪ್ರಿಂ ಕೋರ್ಟ್ ನ್ಯಾಯಾಧೀಶ ಎಂ.ಆರ್. ಶಾ ಚಾಮರಾಜ ನಗರಕ್ಕೆ ಭೇಟಿ
Team Udayavani, Dec 21, 2022, 9:30 PM IST
ಚಾಮರಾಜನಗರ: ಸುಪ್ರಿಂ ಕೋರ್ಟ್ ನ್ಯಾಯಾಧೀಶ ಎಂ.ಆರ್. ಶಾ ಅವರು ತಮ್ಮ ಪತ್ನಿ ಡಿಂಪಿ ಶಾ ಅವರೊಂದಿಗೆ ನಗರದ ರಾಮಸಮುದ್ರದಲ್ಲಿರುವ ಹರಳುಕೋಟೆ ಆಂಜನೇಯಸ್ವಾಮಿ ದೇವಾಲಯಕ್ಕೆ ಬುಧವಾರ ಖಾಸಗಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಮಂಗಳವಾರ ಸಂಜೆ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಕೆ. ಗುಡಿಯಲ್ಲಿ ವಾಸ್ತವ್ಯ ಹೂಡಿದ್ದ ಎಂ.ಆರ್. ಶಾ ಅವರು ಬುಧವಾರ ಬೆಳಿಗ್ಗೆ ನಗರಕ್ಕೆ ಆಗಮಿಸಿ ಹರಳುಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಯ ದರ್ಶನ ಪಡೆದರು.
ಹರಳುಕೋಟೆ ಆಂಜನೇಯ ದೇವಾಲಯದ ಪ್ರಧಾನ ಅರ್ಚಕ ಶ್ರೀನಿಧಿ ಅಯ್ಯಂಗಾರ ಈ ಸಂದರ್ಭದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ನಗರದ ಫಾರೆಸ್‌ಟ್ ನರ್ಸರಿ ರಸ್ತೆಯಲ್ಲಿರುವ ಪಂಡಿತ್ ವಿಜಯಕುಮಾರ್ ಅವರ ಮನೆಯಲ್ಲಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಬಳಿಕ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ, ಸಂಜೆ ಮೈಸೂರಿಗೆ ತೆರಳಿದರು. ಜಿಲ್ಲಾಧಿಕಾರಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಲೋಕಪ್ಪ, ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಎಎಸ್ಪಿ ಸುಂದರರಾಜ್, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Air India; ಮಂಗಳೂರು – ಅಬುಧಾಬಿ ವಿಮಾನ 12 ತಾಸು ವಿಳಂಬ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.