ಚಾ.ನಗರ ವೈದ್ಯಕೀಯ ಕಾಲೇಜಿನಲ್ಲಿ ಬಿಎಸ್‌ಸಿ ನರ್ಸಿಂಗ್ ಕೋರ್ಸ್ : ಸಚಿವ ಸುರೇಶ್ ಕುಮಾರ್
Team Udayavani, Feb 12, 2021, 11:20 PM IST
ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್‌ಸ್) ಯಲ್ಲಿ ಬಿಎಸ್‌ಸಿ ನರ್ಸಿಂಗ್ ಕೋರ್ಸ್ ಅನ್ನು 2020-21ನೇ ಸಾಲಿನಿಂದಲೇ ಪ್ರಾರಂಭಿಸಲಾಗುತ್ತದೆ ಎಂದು ಪ್ರಾಥಮಿಕ, ಪ್ರೌಢಶಿಕ್ಷಣ, ಸಕಾಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದು, ಈ ಕೋರ್ಸ್‌ಗೆ 100 ಸೀಟುಗಳ ಪ್ರವೇಶವಿದ್ದು, ಎಲ್ಲ ಸೀಟುಗಳನ್ನು ಸರ್ಕಾರಿ ಕೋಟಾದ ಮೂಲಕವೇ ಭರ್ತಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಅನುಮೋದನೆಯೊಂದಿಗೆ ನರ್ಸಿಂಗ್ ಕಾಲೇಜಿಗೆ ಸೀಟುಗಳ ಭರ್ತಿ ಕಾರ್ಯ ಪ್ರಾರಂಭವಾಗುವುದು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಡಿ ಜಿಲ್ಲೆಯ ಶೈಕ್ಷಣಿಕ ಹಾಗೂ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಜಿಲ್ಲೆಗೆ ಬಿಎಸ್‌ಸಿ ನರ್ಸಿಂಗ್ ಕೋರ್ಸ್ ಅನ್ನು ಈ ಸಾಲಿನಿಂದಲೇ ಪ್ರಾರಂಭ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಮನವಿ ಮಾಡಿದ್ದರು. ಇದೀಗ ಉಸ್ತುವಾರಿ ಸಚಿವರ ಮನವಿಗೆ ಸ್ಪಂದಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ನಸಿರ್ಂಗ್ ಕಾಲೇಜು ಆರಂಭಕ್ಕೆ ಆದೇಶ ಹೊರಡಿಸಿದೆ.
ತಮ್ಮ ಮನವಿಗೆ ಸ್ಪಂದಿಸಿ ಗಡಿ ಜಿಲ್ಲೆಯಲ್ಲಿ ನರ್ಸಿಂಗ್ ಕಾಲೇಜು ಆರಂಭಕ್ಕೆ ತುರ್ತಾಗಿ ಸ್ಪಂದಿಸಿದ ವೈದ್ಯಕೀಯ ಶಿಕ್ಷಣ ಸಚಿವರಿಗೆ ಸುರೇಶ್ ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.
ಇದನ್ನೂ ಓದಿ : ಕೋವಿಡ್ ಮಧ್ಯೆಯೂ ದಾಖಲೆ ರಸಗೊಬ್ಬರ ಪೂರೈಕೆ; ಸದಾನಂದ ಗೌಡರಿಗೆ ಉಪರಾಷ್ಟ್ರಪತಿ ಮೆಚ್ಚುಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.