ಸುವರ್ಣಾವತಿ ಡ್ಯಾಂನಿಂದ ಬೇಸಿಗೆ ಬೆಳೆಗೆ ನೀರು ಹರಿಸಲು ನಿರ್ಧಾರ
ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣದಿಂದಲೇ ನೀರು ಬಿಡಲು ತೀರ್ಮಾನ! ಶೀಘ್ರ ನೀರು ಬಳಕೆದಾರರ ಮುಖಂಡರ ಜತೆ ಡೀಸಿ ಸಭೆ
Team Udayavani, Feb 9, 2021, 2:03 PM IST
ಚಾಮರಾಜನಗರ: ತಾಲೂಕಿನ ಸುವರ್ಣಾವತಿ ಜಲಾಶಯದಿಂದ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ 2020-21ನೇ ಸಾಲಿನ ಬೇಸಿಗೆ ಬೆಳೆಗಳಿಗೆ ನೀರು ಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆದು ಸುವರ್ಣಾವತಿ ಜಲಾಶಯದಿಂದ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣದಿಂದಲೇ ನೀರು ಬಿಡಲು ನಿರ್ಧಾರ ಕೈಗೊಳ್ಳಲಾಯಿತು. ನೀರಿನ ಲಭ್ಯತೆ ಪ್ರಮಾಣವನ್ನು ಆಧರಿಸಿ ಪೂರ್ಣ ಪ್ರಮಾಣದ ಅಚ್ಚುಕಟ್ಟು ಪ್ರದೇಶಕ್ಕೆ ನೀರನ್ನು ಒದಗಿಸಲು ಸಾಧ್ಯವಿಲ್ಲದ ಕಾರಣ ಒಟ್ಟಾರೆ ಉಪಯೋಗಕ್ಕೆ ಬರುವ ನೀರಿನಲ್ಲಿ 384.10 ಎಂಸಿಎಫ್ಟಿ ನೀರನ್ನು 3306.65 ಎಕರೆ ಪ್ರದೇಶಕ್ಕೆ ಅರೆ ನೀರಾವರಿ ಬೆಳೆಗಳಿಗೆ (ಅರೆಖಷ್ಕಿ) ಕಟ್ಟು ನೀರಿನ ಪದ್ಧತಿ ಅನ್ವಯ ನೀರು ಹರಿಸಲು ಉಸ್ತುವಾರಿ ಸಚಿವರ ನೇತೃತ್ವದ ಸಲಹಾ ಸಮಿತಿಯು ಒಮ್ಮತದ ತೀರ್ಮಾನ ಕೈಗೊಂಡಿತು.
ಇದೇ ವೇಳೆ ಹಾಜರಿದ್ದ ನೀರು ಬಳಕೆದಾರರ ಸಂಘಗಳ ಪ್ರತಿನಿಧಿಗಳು, ರೈತ ಮುಖಂಡರು ನೀರು ಬಿಡುವ ಸಂಬಂಧ ಹಲವು ಮನವಿ ಹಾಗೂ ಬೆಳೆಗಾರರು, ರೈತರು ಎದರಿಸುತ್ತಿರುವ ಹಲವು ಸಮಸ್ಯೆಗಳನ್ನು ಗಮನಕ್ಕೆ ತಂದರು. ಕಳೆದ ಎರಡು ವರ್ಷಗಳಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ನಾಲೆ ಸೇರಿದಂತೆ ಇತರೆ ಕಾಮಗಾರಿಗಳು ಸಮರ್ಪಕವಾಗಿ ನಡೆದಿಲ್ಲ ಎಂಬ ಬಗ್ಗೆ ದೂರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೀರಿನ ಲಭ್ಯತೆ ಆಧರಿಸಿ ನೀರು ಬಿಡಲು ತೀರ್ಮಾನಿಸಲಾಗಿದೆ. ಜಿಲ್ಲಾಧಿಕಾರಿ ಮುಂದಿನ ವಾರದಲ್ಲೇ ನೀರು ಬಳಕೆದಾರರ ಸಭೆಯನ್ನು ಸುವರ್ಣಾವತಿ ಜಲಾಶಯ ಭಾಗದಲ್ಲೇ ನಡೆಸಲಿದ್ದಾರೆ ಎಂದು ತಿಳಿಸಿದರು.
ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ನೀರಿನ ಲಭ್ಯತೆಯನ್ನು ಆಧರಿಸಿ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಮುಂದಾಬೇಕಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಮಾತನಾಡಿ, ತಾವು ಶೀಘ್ರವೇ ಜಲಾಶಯ ಭಾಗದಲ್ಲಿ ನೀರು ಬಳಕೆದಾರರ ಮುಖಂಡರ ಸಭೆ ನಡೆಸುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ :ಹಿಂಬದಿಯಿಂದ ಕಾರು ಡಿಕ್ಕಿ: ಬೈಕ್ ಸವಾರ ಸಾವು
ಕಾಡಾ ಅಧ್ಯಕ್ಷ ಎಂ. ಶಿವಲಿಂಗಯ್ಯ, ಕಾಡಾ ಆಡಳಿತಾಧಿಕಾರಿ ಬಾಲಕೃಷ್ಣ, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಎಂ.ಬಿ. ಪಾಟೀಲ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್, ಸಹಾಯಕ ಎಂಜಿನಿಯರ್ ಮಹದೇವಸ್ವಾಮಿ, ರತೀಶ್, ಮಹೇಶ್, ನೀರು ಬಳಕೆದಾರರ ಸಂಘಗಳ ಮುಖ್ಯಸ್ಥರು, ಪ್ರತಿನಿಧಿಗಳು, ರೈತ ಮುಖಂಡರಾದ ಶಿವಕುಮಾರ್, ಆರ್. ಮಹದೇವು, ಎಂ.ಮಹೇಶ್ ಪ್ರಭು, ದಡದಹಳ್ಳಿ ಗೋವಿಂದರಾಜು, ದಡದಹಳ್ಳಿ ರಮೇಶ್, ಸಿದ್ದಯ್ಯನಪುರದ ಗೋವಿಂದರಾಜು, ಚಂದ್ರಶೇಖರ್, ಆಲೂರು ಮಲ್ಲು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.